ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆಗೆ ಬೆದರಿಕೆ ಹಾಕಿ ಸಾಮೂಹಿಕ ಅತ್ಯಾಚಾರ

ಆನೇಕಲ್‌ನ ದೊಡ್ಡ ನಾಗಮಂಗಲದ ಸಾಯಿ ಲೇಔಟ್‌ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮೂರು ದಿನಗಳ ಹಿಂದೆ ನಡೆದ ಘಟನೆಯಲ್ಲಿ ಆರೋಪಿಗಳು ಹಣ ಮತ್ತು ವಸ್ತುಗಳನ್ನು ಕದ್ದಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರು ಮೂವರನ್ನು ವಶಕ್ಕೆ ಪಡೆದ್ದಾರೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆಗೆ ಬೆದರಿಕೆ ಹಾಕಿ ಸಾಮೂಹಿಕ ಅತ್ಯಾಚಾರ
ಶಂಕಿತ ಆರೋಪಿಗಳು
Edited By:

Updated on: Jul 09, 2025 | 3:45 PM

ಆನೇಕಲ್, ಜುಲೈ 09: ದೊಡ್ಡ ನಾಗಮಂಗಲ (Nagamangala) ಸಾಯಿ ಲೇಔಟ್​ನಲ್ಲಿ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ದೊಡ್ಡ ನಾಗಮಂಗಲ ಸಾಯಿ ಲೇಔಟ್​ನಲ್ಲಿರುವ ತಮ್ಮ ಸ್ನೇಹಿತನ ಮನೆಗೆ ಹೋಗಿದ್ದರು. ಈ ವೇಳೆ ಮನೆಯೊಳಗೆ ಬಂದ ಇಬ್ಬರು ವ್ಯಕ್ತಿಗಳು ಪೊಲೀಸರಿಗೆ ದೂರು ನೀಡುವುದಾಗಿ ಹೆದರಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅತ್ಯಾಚಾರ ಎಸಗಿದ ಬಳಿಕ ಆರೋಪಿಗಳು ಮಹಿಳೆ ಬಳಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಆಗ, ಸಂತ್ರಸ್ತೆ ತನ್ನ ಸ್ನೇಹಿತೆಯ ಅಕೌಂಟ್​ನಿಂದ ಹಣ ನೀಡಿದ್ದಾಳೆ. ಆರೋಪಿಗಳು, ಈ ಹಣವನ್ನು ಬೆಟ್ಟಿಂಗ್ ಆ್ಯಪ್ ಅಕೌಂಟ್​​ಗೆ ಹಾಕಿಸಿಕೊಂಡಿದ್ದಾರೆ.

ಇದನ್ನೂ ಓದಿ: ಯುವಕನ ಮರ್ಮಾಂಗ ತುಳಿದು ಹಲ್ಲೆ ಕೇಸ್​: ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಅರೆಸ್ಟ್

ಇದನ್ನೂ ಓದಿ
ನೆಲಮಂಗಲ: ನೀರಿನ ಹಂಡೆಯಲ್ಲಿ ಮುಳುಗಿಸಿ ಮಗು ಕೊಂದ ತಾಯಿ
ಹುಡುಗಿ ವಿಚಾರಕ್ಕೆ ಯುವಕನ ಬಟ್ಟೆ ಬಿಚ್ಚಿ, ಮರ್ಮಾಂಗ ತುಳಿದು ಹಲ್ಲೆ
ಬೆಂಗಳೂರಿನಲ್ಲಿ ಸೈಟ್ ಖರೀದಿ ಮುನ್ನ ಎಚ್ಚರ: ಹೀಗೂ ಯಾಮಾರಿಸ್ತಾರೆ ಹುಷಾರ್!
ನಡೆದುಕೊಂಡು ಆಸ್ಪತ್ರೆಗೆ ಬಂದ ಕೆಲವೇ ಕ್ಷಣಗಳಲ್ಲಿ ವ್ಯಕ್ತಿಯ ಬ್ರೈನ್ ಡೆಡ್!

ಇಷ್ಟಕ್ಕೆ ಸುಮ್ಮನಾಗದ ಆರೋಪಿಗಳು, ಸಂತ್ರಸ್ತೆಯ ಮತ್ತು ಇವರ ಸ್ನೇಹಿತನ ಮೊಬೈಲ್ ಕಸಿದುಕೊಂಡಿದ್ದಾರೆ. ಸಾಲದಕ್ಕೆ ಮನೆಯಲ್ಲಿದ್ದ ಪ್ರಿಡ್ಜ್, ವಾಶಿಂಗ್ ಮೆಷಿನ್ ಹೊತ್ತೊಯ್ದಿದ್ದಾರೆ. ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪರಪ್ಪನ ಅಗ್ರಹಾರ ಪೊಲೀಸರಿಂದ ತನಿಖೆ ಮುಂದುವರೆದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Wed, 9 July 25