ಬೆಂಗಳೂರು, ನ.20; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಮತ್ತೆ ಚಿರತೆ (Leopard) ಪ್ರತ್ಯಕ್ಷವಾಗಿದೆ. ಸೋಲದೇವನಹಳ್ಳಿ, ಹಂದಿಗುಟ್ಟೆ ಗ್ರಾಮಗಳ ಸುತ್ತಮುತ್ತ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ನಡೆಸುತ್ತಿದೆ. ನಿನ್ನೆ ರಾತ್ರಿ ರಾಜಣ್ಣ ಎಂಬುವರ ಅಡಕೆ ತೋಟದಲ್ಲಿ ಚಿರತೆ ಓಡಾಡಿದ್ದು ಮನೆ ಮುಂದೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಚಿರತೆ ಚಲನವಲನ ಸೆರೆಯಾಗಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ರಾತ್ರಿ ವೇಳೆ ಓಡಾಡಲು ಗ್ರಾಮಸ್ಥರು ಭಯಪಡುವಂತಾಗಿದೆ.
ಇತ್ತೀಚೆಗೆ ಬೊಮ್ಮನಹಳ್ಳಿಯ ಕೂಡ್ಲು ಸಮೀಪ ಕಾಣಿಸಿಕೊಂಡಿದ್ದ ಚಿರತೆಯನ್ನ ಅರಣ್ಯ ಇಲಾಖೆ ಗುಂಡಿಕ್ಕಿ ಕೊಂದಿದ್ರು. ಈ ಭಾಗದ ಜನರು ಚಿರತೆ ಕಾಟ ತಪ್ಪಿತು ಎನ್ನುವಷ್ಟರಲ್ಲಿ ಮತ್ತೆ ಕೂಡ್ಲು ಸಮೀಪದ Aecs ಲೇಔಟ್ನ ಎಮ್ ಎಸ್ ಧೋನಿ ಸ್ಕೂಲ್ ಸಮೀಪ ಮತ್ತೆ ಚಿರತೆ ಕಾಣಿಸಿಕೊಂಡಿತ್ತು. ರಾತ್ರಿ 10.30 ರ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಚಿರತೆ ಕಾಣಿಸಿಕೊಂಡಿತ್ತು. ಅಲ್ಲದೆ ಅದೇ ಏರಿಯಾದಲ್ಲಿ ಚಿರತೆ ರಸ್ತೆ ದಾಟಿ ಹೋಗುತ್ತಿದ್ದ ದೃಶ್ಯ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿತ್ತು. ಇದೀಗ ನೆಲಮಂಗಲ ಬಳಿಯೂ ಚಿರತೆ ಕಾಣಿಸಿಕೊಂಡಿದೆ. ಇದರಿಂದ ಜನರಿಗೆ ನಿದ್ದೆ ಇಲ್ಲದಂತಾಗಿದೆ.
ಇದನ್ನೂ ಓದಿ: ಆನೆ, ಚಿರತೆ, ಹುಲಿ ಆಯ್ತು ಈಗ ಕೋತಿ ದಾಳಿ: ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ
ಕೂಡ್ಲು ಸಮೀಪದ Aecs ಲೇಔಟ್ನ ಸುತ್ತಮುತ್ತಲಿನ ಕಡೆಗಳಲ್ಲಿ ಪ್ರತಿಷ್ಠಿತ ಶಾಲಾ ಕಾಲೇಜು ಹಾಗೂ ಅಪಾರ್ಟ್ಮೆಂಟ್ ಗಳಿದ್ದು ಜನವಸತಿ ಪ್ರದೇಶದಲ್ಲಿ ಚಿರತೆ ಕಾಟದಿಂದ ಜನ ಕಂಗಾಲಾಗಿದ್ದಾರೆ. ಕೂಡ್ಲುವಿನ ಕೃಷ್ಣರೆಡ್ಡಿ ಲೇಔಟ್ ನಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಗುಂಡಿಕ್ಕಿ ಕೊಂದು ಮೂರ್ನಾಲ್ಕು ದಿನ ಕಳೆಯುವಷ್ಟರಲ್ಲಿ ಮತ್ತೆರಡು ಕಡೆಗಳಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಕೂಡ್ಲು ಸಮೀಪ ಹಾಗೂ ಎಲೆಕ್ಟ್ರಾನಿಕ್ ಸಿಟಿಯ ನೈಸ್ ರೋಡ್ ಸಮೀಪದ ಚಿಕ್ಕತೋಗೂರು ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಹೆಜ್ಜೆ ಗುರುತುಗಳು ಸಹ ಪತ್ತೆಯಾಗಿದ್ದವು. ಈಗ ಮತ್ತೆ ಸೋಲದೇವನಹಳ್ಳಿ, ಹಂದಿಗುಟ್ಟೆ ಗ್ರಾಮಗಳ ಸುತ್ತಮುತ್ತ ಚಿರತೆ ಓಡಾಡುವ ಸಿಸಿ ಟಿವಿ ದೃಶ್ಯಗಳು ಪತ್ತೆಯಾಗಿವೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ