AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ ಗೊಟ್ಟಿಪುರ ಗೇಟ್ ಬಳಿ ಭೀಕರ ಅಪಘಾತ: ಲಾರಿ, ಆಂಧ್ರ ಸಾರಿಗೆ ಬಸ್ ಡಿಕ್ಕಿಯಾಗಿ ನಾಲ್ವರು ಸಾವು

ಆಂಧ್ರ ಸಾರಿಗೆ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಅಪಘಾತ ಸಂಭವಿಸಿದ್ದು, 16 ಮಂದಿ ಗಾಯಗೊಂಡಿದ್ದಾರೆ. ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಓವರ್​​ಟೇಕ್ ಮಾಡುವ ಭರದಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಹೊಸಕೋಟೆ ಗೊಟ್ಟಿಪುರ ಗೇಟ್ ಬಳಿ ಭೀಕರ ಅಪಘಾತ: ಲಾರಿ, ಆಂಧ್ರ ಸಾರಿಗೆ ಬಸ್ ಡಿಕ್ಕಿಯಾಗಿ ನಾಲ್ವರು ಸಾವು
ಅಪಘಾತಕ್ಕೀಡಾದ ಎಪಿಆರ್​​ಟಿಸಿ ಬಸ್ ನುಜ್ಜುಗುಜ್ಜಾಗಿರುವುದು
ನವೀನ್ ಕುಮಾರ್ ಟಿ
| Updated By: Ganapathi Sharma|

Updated on:Jun 13, 2025 | 11:45 AM

Share

ದೇವನಹಳ್ಳಿ, ಜೂನ್ 13: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ (Gottipura Gate) ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಂಧ್ರ ಸಾರಿಗೆ ಬಸ್ (APSRTC Bus) ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದೆ. ಆಂಧ್ರ ಸಾರಿಗೆ ಬಸ್ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಓವರ್​​ಟೇಕ್ ಮಾಡುವಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿರುವುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಮೃತಪಟ್ಟವರ ವಿವರ

ಆಂಧ್ರ ಸಾರಿಗೆ ಬಸ್ಸಿನಲ್ಲಿದ್ದ ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ 1 ವರ್ಷದ ಮಗು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ
Image
ವಿಮಾನ ದುರಂತ: ‘12th ಫೇಲ್’ ನಟನ ಸಂಬಂಧಿ, ಕರ್ನಾಟಕದ ಕ್ಲೈವ್ ಕುಂದರ್ ಸಾವು
Image
ರಾಜ್ಯದಲ್ಲಿ ಭಾರಿ ಮಳೆ: ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
Image
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
Image
​ವಿಮಾನ ಪತನ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್

ಇದನ್ನೂ ಓದಿ: ಅಹಮದಾಬಾದ್‌ ವಿಮಾನ ಪತನ: ಕರ್ನಾಟಕ ಮೂಲದ ಕೋ ಪೈಲಟ್ ಸಾವು

ಕೆಲವೇ ದಿನಗಳ ಹಿಂದಷ್ಟೇ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಎಡಗಿನಬೆಲೆ ಟೋಲ್​​ ಬಳಿ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:47 am, Fri, 13 June 25