AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯದಲ್ಲಿದ್ದ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿ ಪರಾರಿ ಆಗಿದ್ದ ಬಾಲ ಅಪರಾಧಿಗಳು ಅರೆಸ್ಟ್!

ಕರ್ತವ್ಯದಲ್ಲಿದ್ದ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದ ಏಳು ಜನರಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಮೂವರಿಗಾಗಿ ತೀವ್ರ ಶೋಧಕಾರ್ಯ ಮುಂದುವರಿದಿದೆ. ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕರ್ತವ್ಯದಲ್ಲಿದ್ದ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿ ಪರಾರಿ ಆಗಿದ್ದ ಬಾಲ ಅಪರಾಧಿಗಳು ಅರೆಸ್ಟ್!
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Feb 21, 2022 | 2:36 PM

Share

ದೇವನಹಳ್ಳಿ: ಕಸ್ಟಡಿಯಲ್ಲಿದ್ದ ಬಾಲ ಅಪರಾಧಿಗಳು (Child Offenders) ಕರ್ತವ್ಯದಲ್ಲಿದ್ದ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿ ಪರಾರಿ ಆಗಿದ್ದವರಲ್ಲಿ ಇಂದು ನಾಲ್ವರನ್ನು ಬಂಧಿಸಲಾಗಿದೆ. ದೇವನಹಳ್ಳಿ ಪೊಲೀಸರಿಂದ ನಾಲ್ವರು ಬಾಲ ಅಪರಾಧಿಗಳನ್ನ ಬಂಧಿಸಿದ್ದಾರೆ. ಒಟ್ಟು ಏಳು ಜನ ಎಸ್ಕೇಪ್ (Escape) ಆಗಿದ್ದರು. ಜನವರಿ 25 ರಂದು ಹಲ್ಲೆ ನಡೆಸಿ ದೇವನಹಳ್ಳಿ ಪಟ್ಟಣದ ಬಾಲ ಮಂದಿರದಿಂದ ಎಸ್ಕೇಪ್ ಆಗಿದ್ದರು. ಬಾಲಾಪರಾಧಿಗಳು ಗಾಂಜಾ, ಕಳ್ಳತನ ಸೇರಿದಂತೆ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಮಡಿವಾಳದಲ್ಲಿ ಬಾಲ ಮಂದಿರ ಕಾಮಗಾರಿ ನಡೆಯುತ್ತಿದ್ದ ಕಾರಣ ದೇವನಹಳ್ಳಿಯ ಹಾಸ್ಟೆಲ್ ನಲ್ಲಿ ಇರಿಸಲಾಗಿತ್ತು. ಈ ವೇಳೆ ಪ್ಲಾನ್ ಮಾಡಿ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದರು.

ಕರ್ತವ್ಯದಲ್ಲಿದ್ದ ಹೋಂ ಗಾರ್ಡ್ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದ ಏಳು ಜನರಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಮೂವರಿಗಾಗಿ ತೀವ್ರ ಶೋಧಕಾರ್ಯ ಮುಂದುವರಿದಿದೆ. ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ದ್ವಿಚಕ್ರ ವಾಹನಗಳನ್ನ ಕಳವು ಮಾಡಿದ್ದ ಆರೋಪಿ ಬಂಧನ: ದ್ವಿಚಕ್ರ ವಾಹನಗಳನ್ನ ಕಳವು ಮಾಡಿದ್ದ ಆರೋಪಿ ಅರೆಸ್ಟ್ ಆಗಿದ್ದಾನೆ. ವೆಂಕಟೇಶ್ ಬಂಧಿತ ಆರೋಪಿ. ಬಂಧಿತನ ವಿರುದ್ಧ ಸುಮಾರು 70 ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಈತ ಜೈಲಿನಿಂದ ಬೇಲ್ ಮೇಲೆ ಬಂದಿದ್ದ. ಆ ಬಳಿಕ ಹಳೆ ಚಾಳಿಯನ್ನು ಮುಂದುವರಿಸಿದ್ದಾನೆ. ಬೈಕ್​ಗಳನ್ನು ಕದ್ದು ರೈತರಿಗೆ ಮಾರಾಟ ಮಾಡುತ್ತಿದ್ದ.

ಮನೆಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳು ಸೆರೆ: ತುಮಕೂರು: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ತಿರುಮಣಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಜಯಪ್ರಕಾಶ್ ನಾಯ್ಕ್ (21), ಲೊಕೇಶ್ (27), ದೇವರಾಜ್ (31) ಬಂಧಿತ ಆರೋಪಿಗಳು. ಬಂಧಿತರಿಂದ ಬರೋಬ್ಬರಿ 11 ಲಕ್ಷ 60 ಸಾವಿರ ಬೆಲೆಬಾಳುವ ಚಿನ್ನಾಭರಣ‌ ಜಪ್ತಿ ಮಾಡಿದ್ದಾರೆ. ಆರೋಪಿಗಳ ಬಂಧನದಿಂದ ಒಟ್ಟು 8 ಮನೆಗಳವು ಪ್ರಕರಣ ಪತ್ತೆಯಾಗಿದೆ. ತಿರುಮಣಿ ಪೊಲೀಸರು‌ ತನಿಖೆ‌‌ ಮುಂದುವರಿಸಿದ್ದಾರೆ.

ಇದನ್ನೂ ಓದಿ

ಇದೊಂದು ಥರಾ ಡಿಫರೆಂಟ್​ ಥಂಬ್​ ರೂಲ್​! ಹೆಬ್ಬೆಟ್ಟು ತೋರಿಸುತ್ತದೆ ಜೀವನ ಮಾರ್ಗ! ಅದೇನು ನೋಡೋಣಾ ಬನ್ನಿ

ಇದು ಟ್ರೇಲರ್! ನಿಮ್ಮ ಪಕ್ಷದ ಬೆಂಬಲಿಗನಿಗೇ ರಕ್ಷಣೆ ನೀಡಿಲ್ಲ, ಇನ್ನು ನೀವು ರಾಜ್ಯದ ಜನರಿಗೆ ರಕ್ಷಣೆ ಕೊಡುತ್ತೀರಾ? ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

Published On - 2:20 pm, Mon, 21 February 22

Follow Us
TV9 Web
TV9 Web

TV9 Kannada

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ