AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ಆನೇಕಲ್ ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ ಹೇಳೋರಿಲ್ಲ ಕೇಳೋರಿಲ್ಲ

ಆನೇಕಲ್ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯಗಳ ಅವ್ಯವಸ್ಥೆ ಬಗ್ಗೆ 2 ವರ್ಷಗಳಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲಾ ಪ್ರಾಂಶುಪಾಲರ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮವಹಿಸಿಲ್ಲ. ಹಾಗಾಗಿ ಇನ್ನಾದರೂ ವಿದ್ಯಾರ್ಥಿಗಳು, ಪೋಷಕರ ಆಗ್ರಹಕ್ಕೆ ಮನ್ನಣೆ ದೊರೆಯುತ್ತಾ ಎಂಬುದನ್ನು ಕಾದುನೋಡಬೇಕಿದೆ.

ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ:  ಆನೇಕಲ್ ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ ಹೇಳೋರಿಲ್ಲ ಕೇಳೋರಿಲ್ಲ
ಆನೇಕಲ್ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ
ರಾಮು, ಆನೇಕಲ್​
| Edited By: |

Updated on:Dec 20, 2023 | 2:28 PM

Share

ಆ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳುವುದಕ್ಕೆ ಅಲ್ಲಿಗೆ ಬಂದಿದ್ರು. ಆದ್ರೆ ಅಲ್ಲಿನ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಶಿಕ್ಷಕರ ಕೊರತೆ, ಸೂಕ್ತ ಮೂಲಭೂತ ಸೌಕರ್ಯಗಳಿಲ್ಲದೆ ಹೈರಾಣಾಗಿದ್ದಾರೆ. ಅಷ್ಟಕ್ಕೂ ಇಂತಹ ಅವ್ಯವಸ್ಥೆ ಇರುವ ಶಾಲೆ ಯಾವುದು ಅಂತೀರಾ? ಈ ಸ್ಟೋರಿ ನೋಡಿ… ಹೌದು ಬೆಂಗಳೂರು ಹೊರವಲಯ ಆನೇಕಲ್ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ಹಾಸ್ಟೆಲ್ (Kittur Rani Chennamma Residential School Hostel) ನಲ್ಲಿ ಬೋಧಕ ಸಿಬ್ಬಂದಿ ಕೊರತೆ ಮತ್ತು ಮೂಲಭೂತ ಸೌಕರ್ಯಗಳ ಅವ್ಯವಸ್ಥೆಯಿಂದಾಗಿ ವಿದ್ಯಾರ್ಥಿಗಳ (Students) ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಪರೀಕ್ಷೆ ಪ್ರಾರಂಭವಾಗಲಿದೆ, ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆಯುವುದಕ್ಕೆ ಉತ್ಸಾಹದಿಂದ ಇದ್ದಾರೆ. ಆದರೆ ಕಿತ್ತೂರು ರಾಣಿ ವಸತಿ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಪಾಠ ಪ್ರವಚನ ಪೂರ್ಣಗೊಂಡಿಲ್ಲ. ಮೂರು ತಿಂಗಳಲ್ಲಿ ಉಳಿದ ಪಾಠಗಳ ಬೋಧನೆ ಮಾಡಿದರೂ ಕಲಿಯಲು ಸಾಧ್ಯವಿಲ್ಲ. ಹಾಗಾಗಿ ಕೂಡಲೇ ಕಾಯಂ ಬೋಧಕ ಸಿಬ್ಬಂದಿಗಳನ್ನು ನೇಮಕ ಮಾಡಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಇನ್ನು ಶಿಕ್ಷಕರ ಕೊರತೆ ಜೊತೆ ಸಮರ್ಪಕವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುತ್ತಿಲ್ಲ. ಶುದ್ಧ ಕುಡಿಯುವ ಕುಡಿಯುವ ನೀರಿನ‌ ವ್ಯವಸ್ಥೆ ಇಲ್ಲ. ಗುಣಮಟ್ಟದ ಆಹಾರ ನೀಡುತ್ತಿಲ್ಲ. ಸ್ನಾನ ಸೇರಿದಂತೆ ಇತ್ಯಾದಿ ಬಳಕೆಗೆ ನೀರು ಸಹ ಸಮರ್ಪಕವಾಗಿ ಪೂರೈಸುವುದಿಲ್ಲ. ಸ್ವಚ್ಚತೆ ಇಲ್ಲದೆ ಬಹುತೇಕ ವಿದ್ಯಾರ್ಥಿಗಳಿಗೆ ಚರ್ಮದ ಕಾಯಿಲೆ ಕಾಣಿಸಿಕೊಂಡಿದೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ವಸತಿ ಶಾಲೆ ಬಳಿ ಜಮಾಯಿಸಿದ್ದರು.

Also Read: ಬಳ್ಳಾರಿ: 27 ಕೋಟಿ ವೆಚ್ಚದ ಕಟ್ಟಡ ಇದ್ದರೂ ಎಪಿಎಂಸಿ ಗೋದಾಮಿನಲ್ಲಿ ವಸತಿ ಶಾಲೆ!

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಪ್ರಾಂಶುಪಾಲರು ಮಾತ್ರ ನಮ್ಮಲ್ಲಿ ಹೇಳಿಕೊಳ್ಳುವಂತಹ ಯಾವುದೇ ಸಮಸ್ಯೆ ಇಲ್ಲ. ನಮ್ಮ ಗಮನಕ್ಕೆ ಬಂದ ತಕ್ಷಣ ಬಗೆಹರಿಸಲಾಗಿದೆ. ಶಿಕ್ಷಕರ ಕೊರತೆ ಇದ್ದು, ಅತಿಥಿ ಶಿಕ್ಷಕರಿಂದ ಪಾಠ ಪ್ರವಚನ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಒಟ್ನಲ್ಲಿ ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯಗಳ ಅವ್ಯವಸ್ಥೆ ಬಗ್ಗೆ ಕಳೆದ ಎರಡು ವರ್ಷಗಳಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲಾ ಪ್ರಾಂಶುಪಾಲರ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮವಹಿಸಿಲ್ಲ. ಹಾಗಾಗಿ ಇನ್ನಾದರೂ ವಿದ್ಯಾರ್ಥಿಗಳು, ಪೋಷಕರ ಆಗ್ರಹಕ್ಕೆ ಮನ್ನಣೆ ದೊರೆಯುತ್ತಾ ಎಂಬುದನ್ನು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:13 pm, Wed, 20 December 23