ನೆಲಮಂಗಲ: ಶೋಕಿ ಜೀವನಕ್ಕಾಗಿ ಬೈಕ್ ಕದಿಯುತ್ತಿದ್ದ ಕಳ್ಳ ಸ್ನೇಹಿತರು ಅರೆಸ್ಟ್

ಬೈಕ್​ಗಳನ್ನು ಕದ್ದು ಹಳ್ಳಿಗಳಲ್ಲಿ ಸಿಕ್ಕಷ್ಟು ರೇಟ್​ಗೆ ಮಾರಾಟ ಮಾಡಿ ಬಂದ ಹಣದಲ್ಲಿ ಶೋಕಿ ಮಾಡ್ತಿದ್ದ ಇಬ್ಬರು ಖದೀಮರನ್ನು ಬಾಗಲಗುಂಟೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ನೆಲಮಂಗಲ: ಶೋಕಿ ಜೀವನಕ್ಕಾಗಿ ಬೈಕ್ ಕದಿಯುತ್ತಿದ್ದ ಕಳ್ಳ ಸ್ನೇಹಿತರು ಅರೆಸ್ಟ್
ಬಾಗಲಗುಂಟೆ ಪೊಲೀಸರು
Follow us
ಬಿ ಮೂರ್ತಿ, ನೆಲಮಂಗಲ
| Updated By: ಆಯೇಷಾ ಬಾನು

Updated on: Aug 05, 2023 | 7:54 AM

ನೆಲಮಂಗಲ, ಆ.05: ಶೋಕಿ ಲೈಫ್‌ಸ್ಟೈಲ್‌ಗಾಗಿ ಹಣ ಮಾಡೋಕೆ ಬೈಕ್ ಕಳ್ಳತನಕ್ಕೆ(Bike Theft) ಇಳಿದು ಹಳ್ಳಿಗಾಡಿಗಳಿಗೆ ಮಾರಾಟ ಮಾಡುತ್ತಿದ್ದ ಕರ್ತನಾಕ್ ಕಳ್ಳರನ್ನ ಬಾಗಲಗುಂಟೆ ಪೊಲೀಸರು(Bagalgunte police) ಬಂಧಿಸಿದ್ದಾರೆ. ಬೆಂಗಳೂರಿನ ಲಗ್ಗೆರೆ ಮೂಲದ 29 ವರ್ಷಸ ಜೀವನ್, 30 ವರ್ಷದ ಲಕ್ಷಣ್ ಬಂಧಿತ ಆರೋಪಿಗಳು. ಇವರು ಬೈಕ್​ಗಳನ್ನು ಕದ್ದು ಹಳ್ಳಿಗಳಲ್ಲಿ ಸಿಕ್ಕಷ್ಟು ರೇಟ್​ಗೆ ಮಾರಾಟ ಮಾಡಿ ಬಂದ ಹಣದಲ್ಲಿ ಶೋಕಿ ಮಾಡ್ತಿದ್ದರು. ಹೀಗೆ ಕದ್ದು ಪರಾರಿಯಾಗುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬಾಲ್ಯ ಸ್ನೇಹಿತರಾದ ಇವರಿಬ್ಬರು ಬೈಕ್ ಎಗರಿಸುವಲ್ಲಿ ನಿಸ್ಸೀಮರು, ಯಾವುದೇ ಬೈಕ್ ಆಗ್ಲಿ ಕ್ಷಣಾರ್ಧದಲ್ಲಿ ಎಗರಿಸಿ ಒಂದೆ ದಿನದಲ್ಲಿ ರಾಜ್ಯದ ವಿವಿಧ ಹಳ್ಳಿಗಳಿಗೆ ಸಾಗಿಸುವಷ್ಟು ನಿಪುಣತೆ ಹೊಂದಿದ್ದರು. ತಮ್ಮ ಶೋಕಿ ಬಿಂದಾಸ್ ಲೈಫ್ ಸ್ಟೈಲ್‌ಗೆ ಆಸೆ ಬಿದ್ದು ಕಳ್ಳತನ ಮಾಡುತ್ತಿದ್ದ ಇವರಿಬ್ಬರನ್ನ ಬಾಗಲಗುಂಟೆ ಪೊಲೀಸರು ವಶಕ್ಕೆ ಪಡೆದು ಜೈಲಿಗಟ್ಟಿದ್ದಾರೆ. ಕೇವಲ ಬೈಕ್‌ ಮಾತ್ರ ಅಲ್ಲ ಟಾರ್ಗೆಟ್ ಇಟ್ಟು ಹೊಡುದ್ರೆ ಬೈಕ್ ಸಿಕ್ಕಿಲ್ಲ ಅಂದ್ರೆ ಕಾರ್‌ ಸ್ಟೀರಿಯೋ ಸಿಸ್ಟಂ ಎಗರಿಸಿ ಎಸ್ಕೇಪ್ ಆಗ್ತಿದ್ದವರು ಸದ್ಯ ಅರೆಸ್ಟ್ ಆಗಿದ್ದಾರೆ.

ಇದನ್ನೂ ಓದಿ: ಪ್ರಿಯತಮನಿಂದ ಯುವತಿ ಮೇಲೆ ರಾಡ್​ನಿಂದ ಹಲ್ಲೆ; ಆರೋಪಿ ಬಂಧನ, ಕಾರಣ ಇಲ್ಲಿದೆ ನೋಡಿ

ಬ್ಯಾಡರಹಳ್ಳಿ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ, ಯಶವಂತಪುರ ಸೇರಿದಂತೆ ವಿವಿಧ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಈ ಖದೀಮರು ಕದ್ದ ಬೈಕ್‌ಗೆ ನಂಬರ್ ಪ್ಲೇಟ್ ಬದಲಾಯಿಸಿ ಬೇರೆ ಜಿಲ್ಲೆಗಳ ಹಳ್ಳಿ ಪ್ರದೇಶಗಳಿಗೆ ಮನಸಿಗೆ ಬಂದ ಬೆಲೆಗೆ ಮಾರಾಟ ಮಾಡ್ತಾ ಇದ್ರು. ಫೈನಾನ್ಸ್‌ನಲ್ಲಿ ಜಪ್ತಿ ಆಗಿರುವ ಬೈಕ್, ಡಾಕ್ಯುಮೆಂಟ್ ಲೇಟ್ ಆಗುತ್ತೆ ಎಂದು ಸಿಕ್ಕಷ್ಟು ದುಡ್ಡಿಗೆ ಮಾರಾಟ ಮಾಡಿ ಬಂದ ಹಣವನ್ನ ಮಜಾ ಮಾಡ್ತಿದ್ದರು. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕದ್ದು ಎಸ್ಕೇಪ್ ಆಗುತ್ತಿದ್ದ ವೇಳೆ, ನೈಟ್ ರೌಂಡ್ಸ್‌ನಲ್ಲಿದ್ದ ಇನ್ಸ್ ಪೆಕ್ಟರ್ ಸಂದೀಪ್ ಅವರ ಕೌರಿಗೆ ಸಿಕ್ಕಿಬಿದ್ದಿದ್ದಾರೆ.

ಸದ್ಯ ಆರೋಪಿಗಳನ್ನ ವಶಕ್ಕೆ ಪಡೆದ ಪೊಲೀಸರು ಬಂಧಿತರಿಂದ ಹತ್ತು ಬೈಕ್, ಟೈಯರ್, ಫಾರ್ಚ್ಯುನರ್ ಕಾರಿನ ಸ್ಟೀರಿಯೋ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ‌.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ