ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರಲು ಹೊರಡಿಸಿದ್ದ ಆದೇಶ ಹಿಂಪಡೆದ ಬೆಂಗಳೂರು ಗ್ರಾಮಾಂತರ ಪದವಿ ಪೂರ್ವ ಶಿಕ್ಷಣ ಇಲಾಖೆ
ಬೆಂಗಳೂರಿನಲ್ಲಿ ನ.11ರಂದು ನಡೆಯಲಿರುವ ಕಾರ್ಯಕ್ರಮಕ್ಕೆ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುವಂತೆ ನೀಡಲಾಗಿದ್ದ ಆದೇಶವನ್ನು ಹಿಂಪಡೆಯಲಾಗಿದೆ.
ದೇವನಹಳ್ಳಿ: ನವೆಂಬರ್ 11ರಂದು ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ(Kempegowda International Airport Bengaluru) ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಬಳಕೆಗೆ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆ ಸಮಾವೇಶಕ್ಕೆ ವಿದ್ಯಾರ್ಥಿಗಳನ್ನ ಕರೆತರುವಂತೆ ಮಾಡಿದ್ದ ಆದೇಶವನ್ನು ಹಿಂಪಡೆಯಲಾಗಿದೆ.
ನವಂಬರ್ 11ರಂದು ನಡೆಯುವ ಕೆಂಪೇಗೌಡರ ಪ್ರತಿಮೆ ಅನಾವರಣ ಮತ್ತು ಸಮಾವೇಶ ಕಾರ್ಯಕ್ರಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುವಂತೆ ಆದೇಶ ಹೊರಡಿಸಲಾಗಿತ್ತು. ಆದ್ರೆ ಈ ಸಂಬಂಧ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಪದವಿ ಪೂರ್ವ ಶಿಕ್ಷಣ ಇಕಾಖೆ ಡಿಡಿಯಿಂದ ಮಾಡಿದ್ದ ಆದೇಶ ವಾಪಸ್ ಪಡೆಯಲಾಗಿದೆ. ಆದೇಶ ಹಿಂಪಡೆಯುತ್ತಿರುವುದಾಗಿ ಪಿಯು ಡಿಡಿ ಸೂಚಿಸಿದ್ದಾರೆ. ಆದೇಶದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಸುತ್ತೋಲೆ ಹಿಂಪಡೆದಿದ್ದಾರೆ.
ಇದನ್ನೂ ಓದಿ: Breaking News: ಮಂಗಳೂರು ಮಳಲಿ ಮಸೀದಿ ವಿವಾದ: ವಿಎಚ್ಪಿ ಅರ್ಜಿ ವಿಚಾರಣೆಗೆ ಅಂಗೀಕಾರ, ಮಸೀದಿ ಆಡಳಿತ ಮಂಡಳಿ ಅರ್ಜಿ ವಜಾ
ಇನ್ನು ಮತ್ತೊಂದೆಡೆ ಈ ಸಂಬಂಧ ಡಿಕೆ ಶಿವಕುಮಾರ್ ಕೂಡ ವಿರೋಧ ವ್ಯಕ್ತಪಡಿಸಿದ್ದರು. ದೇಶದ ಪ್ರಧಾನಿಗಳು ರಾಜ್ಯಕ್ಕೆ ಬರುತ್ತಿದ್ದಾರೆ. ಸರ್ಕಾರದವರು ಶಾಲಾ ಕಾಲೇಜು ಮಕ್ಕಳನ್ನು ಕರೆ ತರುವುದಕ್ಕೆ ಸೂಚನೆ ನೀಡಿದ್ದಾರೆ. ವಿದ್ಯಾರ್ಥಿಗಳು ಕರೆತರುವ ಬಗ್ಗೆ ಸುತ್ತೋಲೆಯನ್ನೇ ಹೊರಡಿಸಿದ್ದಾರೆ. ಬಿಜೆಪಿಯವರಿಗೆ ಇಂತ ಗತಿ ಬಂತಾ? ಡಬಲ್ ಇಂಜಿನ್ ಸರ್ಕಾರದ ಸಾಧನೆ ತೋರಿಸಿ ಕಾರ್ಯಕ್ರಮ ಮಾಡಿ ಇದೇನು ಎಜುಕೇಷನ್ ಪ್ರೊಗ್ರಾಮಾ. ರಾಜಕೀಯವಾಗಿ ಇಲೆಕ್ಷನ್ ಹತ್ತಿರ ಬರ್ತಿದೆ ಅಂತ ನಾಚಿಕೆಗೇಡಿನ ವಿಷಯ. ಸುತ್ತೋಲೆಯನ್ನು ವಾಪಸ್ ಪಡೆಯಬೇಕು. ಖುರ್ಚಿ ತುಂಬಿಸೋದಕ್ಕೆ ಹೀಗೆ ಮಾಡ್ತಿದ್ದಾರೆ. ಅವರ ಪಕ್ಷ ದಿವಾಳಿಯಾಗಿದೆ ಅನ್ನೋದಕ್ಕೆ ಇದೇ ಸಾಕ್ಷಿ. ಪ್ರಧಾನಿಗಳಿಗೂ ಇದು ಅವಮಾನ ಎಂದು ಆಕ್ರೋಶ ಹೊರ ಹಾಕಿದ್ದರು. ಸದ್ಯ ಈಗ ಈ ಸಂಬಂಧ ಅದೇಶವನ್ನು ವಾಪಸ್ ಪಡೆಯಲಾಗಿದೆ.
ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ರಾಜ್ಯವ್ಯಾಪಿ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ಪ್ಲಾನ್
ಕೆಂಪೇಗೌಡ ಪ್ರತಿಮೆಗೆ ಪ್ರಗತಿಯ ಪ್ರತಿಮೆ ಎಂದು ನಾಮಕರಣ ಮಾಡಲು ಸರ್ಕಾರ ಚಿಂತಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪವಿತ್ರ ಸ್ಥಳಗಳಿಂದ ಮೃತ್ತಿಕೆ ಸಂಗ್ರಹಿಸಲು ನಿರ್ಧಾರ ಮಾಡಲಾಗಿತ್ತು. ಅಕ್ಟೋಬರ್ 26 ರಂದು ಬೆಂಗಳೂರಿನಲ್ಲಿ ಮೃತ್ತಿಕಾ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ 20 ವಿಶೇಷ ರಥಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದರು. 15 ದಿನಗಳ ಕಾಲ ರಾಜ್ಯದ 31 ಜಿಲ್ಲೆಗಳಿಗೂ ತೆರಳಿದ್ದ ವಿಶೇಷ ರಥಗಳು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೃತ್ತಿಕಾ ಸಂಗ್ರಹ ಅಭಿಯಾನ ಮಾಡಿದ್ದಾರೆ.
Published On - 12:05 pm, Wed, 9 November 22