ಕೆಂಪೇಗೌಡ ಏರ್ಪೋರ್ಟ್ನಲ್ಲಿ 2 ಕೋಟಿ ರೂ ವಿದೇಶಿ ಹಣ ಜಪ್ತಿ: ಮೂವರ ಬಂಧನ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2.12 ಕೋಟಿ ರೂ. ವಿದೇಶಿ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಶ್ರೀಲಂಕಾಗೆ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಮೂವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ದೇವನಹಳ್ಳಿ, ಫೆಬ್ರವರಿ 19: ಅಕ್ರಮವಾಗಿ ಶ್ರೀಲಂಕಾಗೆ ಸಾಗಿಸುತ್ತಿದ್ದ 2. 12 ಕೋಟಿ ರೂ ವಿದೇಶಿ ಹಣವನ್ನು ಕೆಂಪೇಗೌಡ ಏರ್ಪೋರ್ಟ್ನಲ್ಲಿ (Kempegowda International Airport) ಅಧಿಕಾರಿಗಳು ಜಪ್ತಿ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣ ನಡೆದಿದೆ. ಸದ್ಯ ಮೂವರು ಆರೋಪಿಗಳನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಶ್ರೀಲಂಕಾ ಮೂಲದ ವಿಮಲ್ ರಾಜ್ ತುರೈ ಸಿಂಗಂ, ತಿಲೆಪನ್ ಜಯಂತಿ ಕುಮಾರ್, ಭಾರತದ ವೀರ ಕುಮಾರ್ ಬಂಧಿತರು. ಬ್ಯಾಗ್ನಲ್ಲಿಟ್ಟು ಹಣ ಸಾಗಿಸುವಾಗಿ ಆರೋಪಿಗಳು ಸಿಕ್ಕಿಬಿದಿದ್ದಾರೆ.
ಪ್ರಯಾಣಿಕರ ಲಗೇಜ್ ಬ್ಯಾಗ್ನಲ್ಲಿ ಹಣವಿಟ್ಟುಕೊಂಡು ಮೂವರು ಆರೋಪಿಗಳು ಹೋಗುತ್ತಿದ್ದರು. ಕೆಐಎಬಿಯಲ್ಲಿ ಇಮಿಗ್ರೇಷನ್ ಚೆಕ್ಕಿಂಗ್ ವೇಳೆ ಕಂತೆ ಕಂತೆ ಹಣ ಪತ್ತೆ ಆಗಿದೆ. ಹಣ ಕಂಡ ಏರ್ಪೋಟ್ ಭದ್ರತಾ ಪಡೆ ಐಟಿ ಮತ್ತು ಇಡಿ ಅಧಿಕಾರಿಗಳಿಗೆ ಹಣ ಸಮೇತ ಆರೋಪಿಗಳನ್ನ ಒಪ್ಪಿಸಿದ್ದಾರೆ. ಇದೀಗ ಇಡಿ ಅಧಿಕಾರಿಗಳಿಂದ ಮೂವರನ್ನು ಬಂಧಿಸಲಾಗಿದೆ.
ತಹಶಿಲ್ದಾರ್ ಸಹಿ ನಕಲು ಮಾಡಿ 63 ಲಕ್ಷ ರೂ ಹಣ ಗುಳುಂ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ರೆವಿನ್ಯೂ ಇನ್ಸಪೇಕ್ಟರ್, ತಹಶೀಲ್ದಾರ್ ಸಹಿ ಹಾಗೂ ಸೀಲ್ ದುರ್ಬಳಕೆ ಮಾಡಿಕೊಂಡು ಲಕ್ಷಾಂತರ ರೂ ನುಂಗಿ ನೀರು ಕುಡಿದು ಇದೀಗ ಅರೆಸ್ಟ್ ಆಗಿರುವಂತಹ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಆರ್ಐ ಆಗಿ ಕೆಲಸ ಮಾಡುತ್ತಿದ್ದ ಸಾಸಲು ಹೋಬಳಿಗೆ ರೆವಿನ್ಯೂ ಇನ್ಸಪೇಕ್ಟರ್ ಆಗಿ ಬರುವ ಮೊದಲು ಮುಜರಾಯಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಹೇಮಂತ್ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿ ತಿಳಿದಿದ್ದರಿಂದ 2023 ರಿಂದ ಇಲ್ಲಿಯವರೆಗೆ ಇಬ್ಬರು ತಹಶಿಲ್ದಾರ್ ಓರ್ವ ಕೇಸ್ ವರ್ಕರ್ ಸಹಿ ಮತ್ತು ಸೀಲ್ ಬಳಸಿ ಮುಜುರಾಯಿ ಇಲಾಖೆಯಲ್ಲಿನ ಸುಮಾರು 60 ಲಕ್ಷ ರೂ. ಹಣವನ್ನ ನುಂಗಿ ನೀರು ಕುಡಿದಿದ್ದಾರೆ.
ಇದನ್ನೂ ಓದಿ: ವಿಜಯಪುರ ವೈದ್ಯಕೀಯ ಕಾಲೇಜಿನಲ್ಲಿ ಕಾಶ್ಮೀರಿ ವಿದ್ಯಾರ್ಥಿಗೆ ರ‍್ಯಾಗಿಂಗ್: ಪ್ರಧಾನಿಗೆ ದೂರು, ಐವರ ಬಂಧನ
ಹೀಗಾಗೆ ದೊಡ್ಡಬಳ್ಳಾಪುರ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ಗೆ ಮುಜರಾಯಿ ಇಲಾಖೆಯ ದೇವಾಲಯದಿಂದ ಸರ್ಕಾರದಿಂದ ಹಣ ಸಂದಾಯವಾಗಿಲ್ಲ ಎಂಬ ದೂರು ಬಂದಿದ್ದು, ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜೊತೆಗೆ ಖಾತೆಯಲ್ಲಿನ ಹಣ ಮಾಯವಾದ ಬಗ್ಗೆ ದೊಡ್ಡಬಳ್ಳಾಪುರ ತಹಶೀಲ್ದಾರ್ ನಗರ ಪೊಲೀಸ್ ಠಾಣೆಯಲ್ಲಿ ದೂರ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿ ಆರ್ಐ ಹೇಮಂತ್ನನ್ನ ಬಂಧಿಸಿ ಪ್ರಕರಣ ಬೇಧಿಸಿದ್ದು ಇದೀಗ ಸರ್ಕಾರದ ಹಣ ಗುಳುಂ ಮಾಡಿದ್ದ ರೆವಿನ್ಯೂ ಇನ್ಸಪೇಕ್ಟರ್ ನನ್ನ ಅಮಾನತ್ತು ಮಾಡಿ ತಹಶಿಲ್ದಾರ್ ಆದೇಶಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.