ಬೆಂಗಳೂರು ಗ್ರಾಮಾಂತರ; ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಗ್ರಾಮಗಳಲ್ಲಿ ಅಮೃತ ಸರೋವರ, ಹುತಾತ್ಮರ ಸ್ಮಾರಕ ಶಿಲಾಫಲಕ

Independence Day 2023; ದೇವನಹಳ್ಳಿ ತಾಲ್ಲೂಕಿನಲ್ಲಿ 25, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 29, ಹೊಸಕೋಟೆ ತಾಲ್ಲೂಕಿನಲ್ಲಿ 30, ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ 20 ಅಮೃತ ಸರೋವರಗಳನ್ನ ನಿರ್ಮಾಣ ಮಾಡಿದ್ದು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳವಾರ ಅಮೃತ ಸರೋವರದ ಬಳಿ ಧ್ವಜಾರೋಹಣ ನೆರವೇರಿಸಲಾಗುತ್ತದೆ.

ಬೆಂಗಳೂರು ಗ್ರಾಮಾಂತರ; ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಗ್ರಾಮಗಳಲ್ಲಿ ಅಮೃತ ಸರೋವರ, ಹುತಾತ್ಮರ ಸ್ಮಾರಕ ಶಿಲಾಫಲಕ
ಅಮೃತ ಸರೋವರ, ಹುತಾತ್ಮರ ಸ್ಮಾರಕ ಶಿಲಾಫಲಕ
Edited By:

Updated on: Aug 14, 2023 | 7:54 PM

ದೇವನಹಳ್ಳಿ, ಆಗಸ್ಟ್ 14: 77ನೇ ಸಾತಂತ್ರ್ಯ ದಿನಾಚರಣೆಯನ್ನು (Independence Day) ಅರ್ಥಪೂರ್ಣವಾಗಿ ಆಚರಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ನಿರ್ಧರಿಸಿದ್ದು ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳ ಅಮೃತ ಸರೋವರ ಅಂಗಳದಲ್ಲಿ ಹುತಾತ್ಮರ ಸ್ಮಾರಕ ಶಿಲಾಫಲಕ ನಿರ್ಮಾಣಕ್ಕೆ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅನುರಾಧ ಕೆ‌ಎನ್ ಅವರ ಆದೇಶದಂತೆ ಈಗಾಗಲೆ ಜಿಲ್ಲೆಯ 155 ಜಲ ಮೂಲಗಳನ್ನು ಅಮೃತ ಸರೋವರಗಳಾಗಿ ಅಭಿವೃದ್ಧಿ ಪಡಿಸುವ ಗುರಿಯನ್ನ ಹಮ್ಮಿಕೊಂಡಿದ್ದು ಅದರಲ್ಲಿ 104 ಅಮೃತ ಸರೋವರ ಕೆರೆಗಳ ಕಾಮಗಾರಿಯನ್ನ ಈಗಾಗಲೆ ಪೂರ್ಣಗೊಳಿಸಿದ್ದಾರೆ.

ದೇವನಹಳ್ಳಿ ತಾಲ್ಲೂಕಿನಲ್ಲಿ 25, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 29, ಹೊಸಕೋಟೆ ತಾಲ್ಲೂಕಿನಲ್ಲಿ 30, ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ 20 ಅಮೃತ ಸರೋವರಗಳನ್ನ ನಿರ್ಮಾಣ ಮಾಡಿದ್ದು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳವಾರ ಅಮೃತ ಸರೋವರದ ಬಳಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಜಿಲ್ಲೆಯ 101 ಗ್ರಾಮ ಪಂಚಾಯಿತಿಗಳಲ್ಲಿ ವಿಶಿಷ್ಟ ಸ್ಮಾರಕ ಅನಾವರಣಗೊಳಿಸಲಾಗುತ್ತಿದ್ದು ಪಂಚಾಯಿತಿ ವ್ಯಾಪ್ತಿಯ ಸ್ವಾತಂತ್ರ್ಯ ಹೋರಾಟಗಾರರು, ರಕ್ಷಣಾ ಸಿಬ್ಬಂದಿ, ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ, ರಾಜ್ಯ ಪೋಲಿಸ್‌ ಇಲಾಖೆಯಲ್ಲಿ ಕರ್ತವ್ಯದ ವೇಳೆ ಪ್ರಾಣ ತ್ಯಾಗ ಮಾಡಿದ ಅಧಿಕಾರಿಗಳು, ಸಿಬ್ಬಂದಿ ಹಾಗೂ ವೀರರ ಹೆಸರನ್ನು ಶಿಲಾ ಫಲಕದಲ್ಲಿ ಕೆತ್ತನೆ ಮಾಡಿ ಅಮೃತ ಸರೋವರಗಳ ಬಳಿ ಅಳವಡಿಸಲಾಗುತ್ತಿದೆ. ಒಂದು ವೇಳೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವೀರರು ಲಭ್ಯವಿಲ್ಲದಿದಲ್ಲಿ ಸಾಮಾನ್ಯ ಸಮರ್ಪಣಾ ಶಿಲಾಫಲಕ ನಿರ್ಮಿಸಲಾಗುತ್ತಿದೆ.

ವಿನೂತನ ಕಾರ್ಯಕ್ರಮ

ಕೆರೆಗಳ ಸುತ್ತ ತಿರಂಗಾ ಯಾತ್ರೆ ಸೇರಿ ನಾನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ್ವಾತಂತ್ರ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ. ಅಮೃತ ಸರೋವರ ಕೆರೆ ದಂಡೆಯ ಮೇಲೆ ಗ್ರಾಮಸ್ಥರಿಗೆ ನಾನಾ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಮೊದಲಿಗೆ ತಿರಂಗಾ ಯಾತ್ರೆಯನ್ನು ಗ್ರಾಮದ ಸಮುದಾಯದವರೊಂದಿಗೆ ಬೆಳಗ್ಗೆ ಗ್ರಾಮದಾದ್ಯಂತ ನಡೆಸಿ ಅಮೃತ ಸರೋವರದ ಬಳಿ ಮುಕ್ತಾಯಗೊಳಿಸಲಾಗುತ್ತದೆ. ಬಳಿಕ ಅರಣ್ಯೀಕರಣ ಕೈಗೊಂಡು ಅಮೃತ ಸರೋವರ ಬಳಿ ಸಸಿಗಳನ್ನು ನೆಡುವುದು ಮತ್ತು ಅವುಗಳ ಹಾರೈಕೆ ಮತ್ತು ಸುಸ್ಥಿರತೆಗೆ ಪಣತೊಡಲಾಗಿದೆ.

ಇದನ್ನೂ ಓದಿ: ಲಾಲ್​ಬಾಗ್ ಫಲಪುಷ್ಪ ಪ್ರದರ್ಶನ ಆಗಸ್ಟ್ 15ರಂದೇ ಕೊನೆ; ಈವರೆಗೆ 4 ಲಕ್ಷ ಮಂದಿ ಭೇಟಿ

ಸ್ವಚ್ಚತಾ ಪ್ರತಿಜ್ಞೆ ಅಮೃತ ಸರೋವರ ಕೆರೆ ಅಂಗಳದಲ್ಲಿ ಆಗಮಿಸಿದ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಅಮೃತ ಸರೋವರ ಕೆರೆಯ ಸುತ್ತಮುತ್ತಲಿನ ಪರಿಸರವನ್ನು ಮತ್ತು ನೀರಿನ ಮಾಲಿನ್ಯ ತಡೆಗಟ್ಟುವ ಜವಾಬ್ದಾರಿಯ ಸ್ವಚ್ಛತಾ ಪ್ರತಿಜ್ಞೆ ಕೈಗೊಳ್ಳಲಿದ್ದಾರೆ. ಇನ್ನೂ ಮಕ್ಕಳಿಗೆ ಅಮೃತ ಸರೋವರ ತಾಣಗಳಲ್ಲಿ ಚಿತ್ರಕಲೆ, ಘೋಷಣೆಗಳು, ಪ್ರಬಂಧ ಬರೆಯುವುದು, ರಂಗೋಲಿ, ಭಾಷಣ ಇತ್ಯಾದಿ ಸೇರಿದಂತೆ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಆಯೋಜಿಸಿದ್ದು ಸಾಂಪ್ರದಾಯಿಕವಾಗಿ ಗ್ರಾಮೀಣ ಆಟಗಳನ್ನು ಆಯೋಜಿಸಿ ಜಾನಪದ ಸಂಗೀತ, ನೃತ್ಯ, ಹಾಗೂ ಗ್ರಾಮೀಣ ಆಟಗಳಾದ ಖೋ-ಖೋ, ಲಗೋರಿ, ಹಗ್ಗ ಜಗ್ಗಾಟ, ಹಗ್ಗ ಜಿಗಿತ (ರೋಪ್ ಜಂಪಿಂಗ್), ಕುಂಟ ಓಟ, ಕುರ್ಚಿ ಓಟ ಇತ್ಯಾದಿಯನ್ನು ಅಮೃತ ಸರೋವರಗಳಲ್ಲಿ ಆಯೋಜಿಸುತ್ತಿದ್ದು ಆ ಮೂಲಕ ಹಬ್ಬದಂತೆ ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆಗೆ ಜಿಲ್ಲಾ ಪಂಚಾಯತಿ ಮುಂದಾಗಿರುವುದಾಗಿ ಜಿಲ್ಲಾ ಪಂಚಾಯತಿ ಸಿಇಒ ಅನುರಾಧ ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us