ರೀಲ್ಸ್​ ಮಾಡುವಾಗ ರೈಲು ಡಿಕ್ಕಿಯಾಗಿ ಯುಪಿ ಮೂಲದ ಮೂವರು ಕಾರ್ಮಿಕರು ಸಾವು

| Updated By: ಗಂಗಾಧರ​ ಬ. ಸಾಬೋಜಿ

Updated on: Feb 19, 2025 | 10:38 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಸಮೀಪ ಸಿದ್ದೇನಾಯಕನಹಳ್ಳಿಯಲ್ಲಿ ರೈಲು ಡಿಕ್ಕಿಯಾಗಿ ಉತ್ತರಪ್ರದೇಶ ಮೂಲದ ಮೂವರು ಯುವಕರು ಸಾವನ್ನಪ್ಪಿದ್ದಾರೆ. ರೈಲ್ವೆ ಹಳಿಯ ಬಳಿ ರೀಲ್ಸ್ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೃತರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ಯಶವಂತಪುರ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ರೀಲ್ಸ್​ ಮಾಡುವಾಗ ರೈಲು ಡಿಕ್ಕಿಯಾಗಿ ಯುಪಿ ಮೂಲದ ಮೂವರು ಕಾರ್ಮಿಕರು ಸಾವು
ರೀಲ್ಸ್​ ಮಾಡುವಾಗ ರೈಲು ಡಿಕ್ಕಿಯಾಗಿ ಯುಪಿ ಮೂಲದ ಮೂವರು ಕಾರ್ಮಿಕರು ಸಾವು
Follow us on

ದೇವನಹಳ್ಳಿ, ಫೆಬ್ರವರಿ 19: ರೀಲ್ಸ್​ ಮಾಡುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಯುಪಿ ಮೂಲದ ಮೂವರು ಕಾರ್ಮಿಕರು ದುರ್ಮರಣ (death) ಹೊಂದಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದೆನಾಯಕನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ. ರಾಹುಲ್ (18), ಬಿಕೇಶ್ (20) ಮತ್ತು ಲಲನ್ (24) ಮೃತರು. ಯಶವಂತಪುರ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಯುಪಿಯಿಂದ ಬಂದಿದ್ದ ಮೃತ ಮೂವರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು‌ ರೈಲ್ವೆ ಹಳಿ ಬಳಿ ಬಂದಿದ್ದಾರೆ. ಈ ವೇಳೆ ರೀಲ್ಸ್​ ಮಾಡುವಾಗ ರೈಲು ಡಿಕ್ಕಿಯಾಗಿದೆ. ರೈಲು ಡಿಕ್ಕಿ ಹೊಡೆದ ರಭಸಕ್ಕೆ ಹಳಿಗಳ ಮೇಲೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಗಾಂಜಾ ಸಾಗಿಸುತ್ತಿದ್ದ ತಂದೆ, ಮಗಳು, ಮೊಮ್ಮಗ ಸೇರಿ ಐವರ ಬಂಧನ

ಸತ್ಯ ಸಾಯಿ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಹಳಿ ಮೇಲಿದ್ದ ಮೃತದೇಹಗಳನ್ನ ಕಂಡು ಸ್ಥಳಿಯರಿಂದ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಯಶವಂತಪುರ ರೈಲ್ವೆ ಪೊಲೀಸರಿಂದ ಮೃತದೇಹಗಳನ್ನು ಶವಾಗಾರಕ್ಕೆ ರವಾನಿಸಿ ತನಿಖೆ ಕೈಗೊಳ್ಳಲಾಗಿದೆ.

ವಿಳಾಸ ಕೇಳುವ ನೆಪದಲ್ಲಿ ಬಂದು ವೃದ್ಧೆ ಚಿನ್ನದ ಸರ ಕದ್ದು ಪರಾರಿಯಾದ ಕಳ್ಳರು

ವಿಜಯಪುರದ ಪ್ರತೀಕ್ಷಾ ನಗರದಲ್ಲಿ ವಿಳಾಸ ಕೇಳುವ ನೆಪದಲ್ಲಿ ಬೈಕ್​ನಲ್ಲಿ ಬಂದು ಮನೆ ಮುಂದೆ ನಿಂತಿದ್ದ ವೃದ್ಧೆ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಪರಾರಿಯಾಗಿರುವಂತಹ ಘಟನೆ ನಡೆದಿದೆ. ವೃದ್ಧೆ ಸುಮಿತ್ರಾ ಧೋಟಿಗಾಳ ಎಂಬುವವರ 40 ಗ್ರಾಂ ಚಿನ್ನದ ಸರವನ್ನು ಖದೀಮರು ಎಗರಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಆಟವಾಡುತ್ತಿದ್ದ ಮಗು ಮೇಲೆ ಹರಿದ ಜೆಸಿಬಿ

ಸದ್ಯ ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ಅಧಿಕಾರಿಗಳು ಭೇಟಿ ನೀಡಿದ್ದು, ಸುತ್ತಮುತ್ತಲ ಸಿಸಿ ಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಿದ್ದಾರೆ. ಸರಗಳ್ಳರ ಪತ್ತೆಗೆ ಸದ್ಯ ಪೊಲೀಸರು ಜಾಲ ಬೀಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.