ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ; ಗೌರವ್ ಗುಪ್ತಾ

| Updated By: sandhya thejappa

Updated on: Aug 09, 2021 | 10:41 AM

ಸ್ವಾತಂತ್ರ್ಯ ದಿನಾಚರಣೆ ಹೇಗೆ ನಡೆಯಬೇಕು ಎನ್ನುವುದರ ಬಗ್ಗೆ ಶೀಘ್ರವೇ ಸಿಎಸ್ ಅಧಿಕೃತ ಆದೇಶ ಹೊರಡಿಸಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಕಡಿಮೆ ಜನರನ್ನ ಸೇರಿಸುವ ಬಗ್ಗೆ ಚಿಂತನೆಯೂ ಇದೆ.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ; ಗೌರವ್ ಗುಪ್ತಾ
ಅದ್ಧೂರಿ ಸ್ವಾತಂತ್ರ್ಯೋತ್ಸವ ಇರುವುದಿಲ್ಲ (ಸಾಂದರ್ಭೀಕ ಚಿತ್ರ)
Follow us on

ಬೆಂಗಳೂರು: ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ (Independence Day) ಆಗಮಿಸಲು ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ (Gaurav Gupta) ತಿಳಿಸಿದ್ದಾರೆ. ಆಗಸ್ಟ್ 15ಕ್ಕೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಆದರೆ ಈ ಬಾರಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲ್ಲ. ಈ ಬಾರಿ ಸಾರ್ವಜನಿಕರು ಭಾಗವಹಿಸಲು ಅವಕಾಶವೇ ಇಲ್ಲ. ಗಣ್ಯ ವ್ಯಕ್ತಿಗಳು, ಆಹ್ವಾನಿತರು ಮಾತ್ರ ಭಾಗವಹಿಸಲು ಅವಕಾಶವಿದೆ ಎಂದು ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಹೇಗೆ ನಡೆಯಬೇಕು ಎನ್ನುವುದರ ಬಗ್ಗೆ ಶೀಘ್ರವೇ ಸಿಎಸ್ ಅಧಿಕೃತ ಆದೇಶ ಹೊರಡಿಸಲಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಕಡಿಮೆ ಜನರನ್ನ ಸೇರಿಸುವ ಬಗ್ಗೆ ಚಿಂತನೆಯೂ ಇದೆ. ಮಾಣಿಕ್ ಷಾ ಪರೇಡ್ ಗ್ರೌಂಡ್​ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಬೇಕಾಗಿದೆ. ಸ್ಥಳ ವೀಕ್ಷಣೆ ಸಹ ಶೀಘ್ರವೇ ನಡೆಯಲಿದೆ. ಬಹುತೇಕ ಸರಳವಾಗಿ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಗೌರವ್ ಗುಪ್ತಾ ತಿಳಿಸಿದ್ದಾರೆ.

ಕಠಿಣ ಕ್ರಮಗಳ ಬಗ್ಗೆ ಮಹತ್ವದ ಸಭೆ
ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಸಿದ್ಧತೆ, ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಈ ಬಗ್ಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, 20 ಲಕ್ಷ ಕೊರೊನಾ ಕೇಸ್ ದಾಟುವ ಆತಂಕ ಹಿನ್ನೆಲೆ ಸರ್ಕಾರ ಸಹ ಕೊರೊನಾ ನಿಯಂತ್ರಣ ಸಂಬಂಧ ಚರ್ಚೆ ನಡೆಸುತ್ತಿದೆ. ದೇವಿಶೆಟ್ಟಿ, ಸುದರ್ಶನ್ ಬಲ್ಲಾಳ್ ಮುಂದಿನ ಅಲೆಗೆ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಕೊವಿಡ್ ಲಸಿಕೆಗೆ ಹೆಚ್ಚು ಒತ್ತು ಕೊಡಲು ಸೂಚಿಸಿದ್ದಾರೆ. ಸಭೆ, ಸಮಾರಂಭ, ನೈಟ್ ಪಾರ್ಟಿ ನಿರ್ಬಂಧಕ್ಕೆ ಸೂಚನೆ ನೀಡಿದ್ದಾರೆ. ಗಡಿಭಾಗದಲ್ಲಿ ವೀಕೆಂಡ್ ಕರ್ಫ್ಯೂ ಪರಿಣಾಮಕಾರಿಯಾಗಿ ಜಾರಿ ಮಾಡಲು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ

SSLC ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳೂ ಪಾಸ್! ಫಲಿತಾಂಶವನ್ನು ಸಮತೋಲನದಿಂದ ತೆಗೆದುಕೊಳ್ಳಬೇಕು- ಶಿಕ್ಷಣ ಸಚಿವ ಬಿ.ಸಿ.ನಾಗೇಶ್

Coronavirus cases in India: ದೇಶದಲ್ಲಿ 35,499 ಹೊಸ ಕೊವಿಡ್ ಪ್ರಕರಣ, 447 ಮಂದಿ ಸಾವು

(BBMP Commissioner Gaurav Gupta says the public is restricted to Independence Day program)

Published On - 10:38 am, Mon, 9 August 21