AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್‌ಪೋರ್ಟ್ ಫ್ಲೈಓವರ್‌ ಮೇಲೆ ಬೈಕ್ ನಿರ್ಬಂಧ ಬೆನ್ನಲ್ಲೇ ರೈಡರ್ಸ್‌ ಹುಚ್ಚಾಟ: ಮಧ್ಯರಾತ್ರಿ ರೈಡಿಂಗ್, ಪೊಲೀಸರ ಹದ್ದಿನ ಕಣ್ಣು

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಫ್ಲೈಓವರ್​ ಮೇಲೆ ನಾಳೆಯಿಂದ ಬೈಕ್ ಸಂಚಾರ ನಿಷೇಧಿಸಲಾಗುತ್ತಿದೆ. ಹೀಗಾಗಿ ರಾತ್ರಿ ವೇಳೆ ಏರ್‌ಪೋರ್ಟ್​ನಲ್ಲಿ ಕೆಲ ಬೈಕ್ ರೈಡರ್‌ಗಳು ರಾತ್ರಿ ವೇಳೆ ರೈಡಿಂಗ್​​ ಮೂಲಕ ಹುಚ್ಚಾಟ ಮೆರೆದು ಕಿರಿಕಿರಿ ಉಂಟುಮಾಡಿದ್ದಾರೆ. ಈ ಕುರಿತಾಗಿ ವಿಡಿಯೋಗಳು ವೈರಲ್​ ಆಗಿವೆ.

ಏರ್‌ಪೋರ್ಟ್ ಫ್ಲೈಓವರ್‌ ಮೇಲೆ ಬೈಕ್ ನಿರ್ಬಂಧ ಬೆನ್ನಲ್ಲೇ ರೈಡರ್ಸ್‌ ಹುಚ್ಚಾಟ: ಮಧ್ಯರಾತ್ರಿ ರೈಡಿಂಗ್, ಪೊಲೀಸರ ಹದ್ದಿನ ಕಣ್ಣು
ಬೈಕ್ ರೈಡಿಂಗ್Image Credit source: tv9 kannada
ನವೀನ್ ಕುಮಾರ್ ಟಿ.
| Edited By: |

Updated on:Sep 03, 2026 | 5:52 PM

Share

ದೇವನಹಳ್ಳಿ, ಸೆಪ್ಟೆಂಬರ್​ 03: ಹೆಬ್ಬಾಳದಿಂದ ಯಲಹಂಕವರೆಗಿನ ಎಲಿವೇಟೆಡ್ ಫ್ಲೈಓವರ್ ಮೇಲೆ ಬೈಕ್‌ ಸಂಚಾರ ನಿಷೇಧಿಸಿ ಆದೇಶ ಬೆನ್ನಲ್ಲೇ, ಯುವಕರ ಗುಂಪೊಂದು ನಿಯಮವನ್ನು ತಪ್ಪಾಗಿ ಗ್ರಹಿಸಿ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಗಳಲ್ಲಿ ಮಧ್ಯರಾತ್ರಿ ಹುಚ್ಚಾಟ ಪ್ರದರ್ಶಿಸಿದೆ. ನೂರಾರು ಬೈಕರ್‌ಗಳು ಏಕಾಏಕಿ ವಿಮಾನ ನಿಲ್ದಾಣದ ಆವರಣಕ್ಕೆ ನುಗ್ಗಿ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿರುವ ಘಟನೆ ನಡೆದಿದೆ.

ನಡೆದಿದ್ದೇನು?

ಕಳೆದ ಎರಡು ದಿನಗಳಿಂದ ಮಧ್ಯರಾತ್ರಿಯ ವೇಳೆ ಏರ್‌ಪೋರ್ಟ್‌ ಕಡೆಗೆ ದಂಡುದಂಡಾಗಿ ನುಗ್ಗುತ್ತಿರುವ ಬೈಕ್ ಸವಾರರು, ಪ್ರಯಾಣಿಕರ ಕ್ಯಾಬ್‌ಗಳ ಮಧ್ಯೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸುತ್ತಿದ್ದಾರೆ. ಸೈಲೆನ್ಸರ್‌ಗಳ ಕಿವಿಗಡಚಿಕ್ಕುವ ಶಬ್ದ, ರಸ್ತೆಯುದ್ದಕ್ಕೂ ಗದ್ದಲ ಎಬ್ಬಿಸುತ್ತಾ ಹುಚ್ಚಾಟ ನಡೆಸಿದ್ದು, ವಿಮಾನ ಹಿಡಿಯಲು ಧಾವಿಸುತ್ತಿದ್ದ ಪ್ರಯಾಣಿಕರು ಹಾಗೂ ಸ್ಥಳೀಯ ಭದ್ರತಾ ಪಡೆಗಳು  ಬೆಚ್ಚಿಬೀಳುವಂತಾಗಿದೆ. ಈ ಪುಂಡಾಟಿಕೆಯ ವಿಡಿಯೋಗಳನ್ನು ಕೆಲ ಯುವಕರು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.

ಅಪಾರ್ಥ ಮಾಡಿಕೊಂಡು ರಸ್ತೆಗಿಳಿದ ರೈಡರ್ಸ್

ವಾಸ್ತವವಾಗಿ ಸಂಚಾರ ಪೊಲೀಸರು ನಿರ್ಬಂಧ ವಿಧಿಸಿರುವುದು ಹೆಬ್ಬಾಳ ಫ್ಲೈಓವರ್‌ನಿಂದ ಯಲಹಂಕದ ಕೆಫೆ ಕಾಫಿ ಡೇ ವರೆಗಿನ ಮೇಲ್ಸೇತುವೆ ರಸ್ತೆಗೆ ಮಾತ್ರ. ಆದರೆ ಬೈಕ್ ಸವಾರರು ಇಡೀ ಏರ್‌ಪೋರ್ಟ್‌ ರಸ್ತೆಗೇ ನಿರ್ಬಂಧ ವಿಧಿಸಲಾಗಿದೆ ಎಂದು ತಪ್ಪಾಗಿ ಭಾವಿಸಿ, ‘ಕೊನೆಯ ಬಾರಿಯ ರೈಡ್’ ಎಂಬ ಹೆಸರಿನಲ್ಲಿ ಈ ರೀತಿ ತಂಡೋಪತಂಡವಾಗಿ ರಸ್ತೆಗಿಳಿದಿದ್ದಾರೆ. ವಿಮಾನ ನಿಲ್ದಾಣದ ಆವರಣದಲ್ಲಿ ಮಧ್ಯರಾತ್ರಿ ಇವರನ್ನು ತಡೆದು ನಿಲ್ಲಿಸಿದ ಪೊಲೀಸರು ಮತ್ತು ಸಿಐಎಸ್‌ಎಫ್ ಸಿಬ್ಬಂದಿ, ‘ಇದು ಅತ್ಯಂತ ಸೂಕ್ಷ್ಮ ಪ್ರದೇಶ, ಇಲ್ಲಿ ಇಂತಹ ಅಶಿಸ್ತು ಮತ್ತು ಹುಚ್ಚಾಟಕ್ಕೆ ಜಾಗವಲ್ಲ’ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

LIVE TV

ಇದನ್ನೂ ಓದಿ: ಸೆ.1ರಿಂದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ UDF ಪರಿಷ್ಕರಣೆ: ಹೊರಡುವ,ಬರುವ ಪ್ರಯಾಣಿಕರಿಗೆ ಎಷ್ಟು ಶುಲ್ಕ?

ಇನ್ನು ಇಂದು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಬೈಕ್ ಸವಾರರು ವಿಮಾನ ನಿಲ್ದಾಣ ರಸ್ತೆಗೆ ಆಗಮಿಸುವ ಸಾಧ್ಯತೆಯಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ರಸ್ತೆಯುದ್ದಕ್ಕೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ನಿಯಮ ಮೀರಿ ಅಪಾಯಕಾರಿಯಾಗಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಪ್ರಕರಣ ದಾಖಲಿಸಲು ಹಾಗೂ ವಾಹನಗಳನ್ನು ಜಪ್ತಿ ಮಾಡಲು ಪೊಲೀಸರು ಸಜ್ಜಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:51 pm, Thu, 3 September 26

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ