ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ ಮೌಲ್ಯದ ಗಾಂಜಾ ವಶಕ್ಕೆ: ಪ್ರಯಾಣಿಕರಿಬ್ಬರ ಬಂಧನ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ತಂದಿದ್ದ 08 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ 2 ಕೋಟಿ ರೂ. ಮೌಲ್ಯದ ವಜ್ರ ಸೇರಿ ವಿದೇಶಿ ಹಣ ಜಪ್ತಿ ಮಾಡಿದ್ದಾರೆ.

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ ಮೌಲ್ಯದ ಗಾಂಜಾ ವಶಕ್ಕೆ: ಪ್ರಯಾಣಿಕರಿಬ್ಬರ ಬಂಧನ
ವಶಕ್ಕೆ ಪಡೆದಿರುವ ಗಾಂಜಾ
Image Credit source: tv9 kannada
Edited By:

Updated on: Feb 09, 2026 | 6:33 PM

ದೇವನಹಳ್ಳಿ, ಫೆಬ್ರವರಿ 09: ವಿದೇಶದಿಂದ ತಂದಿದ್ದ 8 ಕೋಟಿ ರೂ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು (hydroponic ganja)​​​ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಪ್ರಯಾಣಿಕರನ್ನು ಬಂಧಿಸಿದ್ದು, ಎನ್​ಡಿಪಿಎಸ್​​ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಯಾಣಿಕರಿಬ್ಬರು ವಿದೇಶದಿಂದ ಹೈಡ್ರೋಪೋನಿಕ್ ಗಾಂಜಾ ಸಾಗಾಟಕ್ಕೆ ಮುಂದಾಗಿದ್ದರು. ಇಮಿಗ್ರೇಷನ್ ವಿಭಾಗದಲ್ಲಿ ಚೆಕಿಂಗ್ ಮಾಡಲಾಗಿದ್ದು, ಈ ವೇಳೆ ಲಗೇಜ್ ಬ್ಯಾಗ್​ನ ತಳಭಾಗದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವುದು ಪತ್ತೆ ಆಗಿದೆ.

ಬೆಂಗಳೂರು ಕಸ್ಟಮ್ಸ್ ಟ್ವೀಟ್​

2 ಕೋಟಿ ರೂ. ಮೌಲ್ಯದ ವಜ್ರ ಸೇರಿ ವಿದೇಶಿ ಹಣ ಜಪ್ತಿ

ಮತ್ತೊಂದು ಪ್ರಕರಣದಲ್ಲಿ ಅಕ್ರಮವಾಗಿ ವಿದೇಶಕ್ಕೆ ಸಾಗಿಸಲಾಗುತ್ತಿದ್ದ 2 ಕೋಟಿ ರೂ. ಮೌಲ್ಯದ ವಜ್ರ ಸೇರಿದಂತೆ ವಿದೇಶಿ ಹಣವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 38.60 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ

ಓರ್ವ ಪ್ರಯಾಣಿಕ ಅಕ್ರಮವಾಗಿ ವಿದೇಶಕ್ಕೆ ಸಾಗಿಸಲು ಮುಂದಾಗಿದ್ದ. ಇಮಿಗ್ರೇಷನ್ ವಿಭಾಗದಲ್ಲಿ ಚೆಕಿಂಗ್ ವೇಳೆ ವಜ್ರ, ವಿದೇಶಿ ಕರೆನ್ಸಿ ಪತ್ತೆ ಆಗಿದೆ. ಕಸ್ಟಮ್ಸ್ ಕಾಯ್ದೆಯಡಿ ಪ್ರಯಾಣಿಕರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

2 ಕೋಟಿ 97 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ

ನಿಷೇಧದ ನಡುವೆಯೂ ವಿದೇಶದಿಂದ ತಂದಿದ್ದ 2 ಕೋಟಿ 97 ಲಕ್ಷ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರಿಯ ವಿಮಾನ ನಿಲ್ಥಾಣಕ್ಕೆ ನಿನ್ನೆ ಪುಕೆಟ್ ಮತ್ತು ಮಲೇಷಿಯಾದಿಂದ ಮೂವರು ಪ್ರಯಾಣಿಕರು ಆಗಮಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಏರ್​​ಪೋರ್ಟ್​ಗೆ ಬಂದವನ ಬ್ಯಾಗ್​ನಲ್ಲಿದ್ದವು ಹಾವುಗಳು, ಸರೀಸೃಪಗಳು!

ಎಲ್ಲಾ ಪ್ರಯಾಣಿಕರಂತೆ 2 ಪ್ರತ್ಯೇಕ ವಿಮಾನಗಳಲ್ಲಿ ಬಂದಿದ್ದ ಮೂವರ ಲಗೇಜ್ ಪರಿಶೀಲನೆ ನಡೆಸಿದಾಗ ಲಗೇಜ್​ನಲ್ಲಿ 8.5 ಕೆಜಿ ಹೈಡ್ರೊಪೋನಿಕ್ ಗಾಂಜಾ ಪತ್ತೆ ಆಗಿತ್ತು. ಇನ್ನು ಗಾಂಜಾ ಸಿಗುತ್ತಿದ್ದಂತೆ ಮೂವರು ಪ್ರಯಾಣಿಕರನ್ನ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. 8.5 ಕೆಜಿ ಗಾಂಜಾದ ಮಾರುಕಟ್ಟೆ ಮೌಲ್ಯ 2 ಕೋಟಿ 97 ಲಕ್ಷ ಅಂತ ಅಂದಾಜಿಸಿದ್ದಾರೆ. ಈ ಕುರಿತು ಕಸ್ಟಮ್ಸ್ ಅಧಿಕಾರಿಗಳು ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us