AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ಸಾಗಿಸಲು ಈ ಮಹಿಳೆಯರು ಮಾಡಿದ ಖತರ್ನಾಕ್ ಪ್ಲಾನ್​ಗೆ ಅಧಿಕಾರಿಗಳು ಶಾಕ್; 67 ಲಕ್ಷ ಮೌಲ್ಯದ ಚಿನ್ನ ವಶ

ಶುಕ್ರವಾರ ತಡರಾತ್ರಿ ಹಾಗೂ ಶನಿವಾರ ಮುಂಜಾನೆ ನಡುವೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮೂವರು ಮಹಿಳೆಯರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಮಲೇಷ್ಯಾ ಮೂಲದ ಮಹಿಳೆ ಗುದದ್ವಾರದಲ್ಲಿ ನಾಲ್ಕು ಕ್ಯಾಪ್ಸೂಲ್‌ಗಳಲ್ಲಿ ಒಟ್ಟು 578.27 ಗ್ರಾಂ ಚಿನ್ನವನ್ನು ಅಡಗಿಸಿಟ್ಟುಕೊಂಡಿದ್ದಳು. ಸದ್ಯ ವೈದ್ಯರ ಸಹಾಯದಿಂದ ಗುದದ್ವಾರದಲ್ಲಿದ್ದ ಚಿನ್ನವನ್ನು ಹೊರತೆಗೆದು ವಶಕ್ಕೆ ಪಡೆಯಲಾಗಿದೆ.

ಚಿನ್ನ ಸಾಗಿಸಲು ಈ ಮಹಿಳೆಯರು ಮಾಡಿದ ಖತರ್ನಾಕ್ ಪ್ಲಾನ್​ಗೆ ಅಧಿಕಾರಿಗಳು ಶಾಕ್; 67 ಲಕ್ಷ ಮೌಲ್ಯದ ಚಿನ್ನ ವಶ
ಚಿನ್ನ ಸಾಗಿಸಲು ಈ ಮಹಿಳೆಯರು ಮಾಡಿದ ಖತರ್ನಾಕ್ ಪ್ಲಾನ್​ಗೆ ಅಧಿಕಾರಿಗಳು ಶಾಕ್
ನವೀನ್ ಕುಮಾರ್ ಟಿ
| Edited By: |

Updated on: Oct 21, 2023 | 3:21 PM

Share

ದೇವನಹಳ್ಳಿ, ಅ.21: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport Bengaluru) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ವಿದೇಶದಿಂದ ಅಕ್ರಮವಾಗಿ ಗೋಲ್ಡ್ ಸ್ಮಗ್ಲಿಂಗ್ ಮಾಡ್ತಿದ್ದ ಮೂವರು ಮಹಿಳೆಯರನ್ನು ಬಂಧಿಸಿದ್ದಾರೆ (Gold Smuggling). ಕೆಂಪೇಗೌಡ ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ಮೂರು ಪ್ರತ್ಯೇಕ ಪ್ರಕರಣಗಳಲ್ಲಿ 67 ಲಕ್ಷ 57 ಸಾವಿರದ 923 ರೂ ಮೌಲ್ಯದ 1 ಕೆಜಿ 133 ಗ್ರಾಂ ಬಂಗಾರ ವಶಕ್ಕೆ ಪಡೆದಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಮಾಡಲು ಆರೋಪಿಗಳು ಎಷ್ಟೇ ಖತರ್ನಾಕ್ ಪ್ಲಾನ್ ಮಾಡಿದರೂ ಕಸ್ಟಮ್ಸ್ ಅಧಿಕಾರಿಗಳು ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಚಿನ್ನ ಸಾಗಿಸಲು ಮಹಿಳೆಯರ ಖತರ್ನಾಕ್ ಐಡಿಯಾ

ಶುಕ್ರವಾರ ತಡರಾತ್ರಿ ಹಾಗೂ ಶನಿವಾರ ಮುಂಜಾನೆ ನಡುವೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮೂವರು ಮಹಿಳೆಯರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಕ್ವಾಲಲಂಪುರದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದ ಭಾರತೀಯ ಮೂಲದ ಮಹಿಳೆಯೊಬ್ಬರು ತಮ್ಮ ಬ್ಲೌಸ್​ನಲ್ಲಿ 300.95 ಗ್ರಾಂ ಚಿನ್ನದ ಪೇಸ್ಟ್ ಅಂಟಿಸಿಕೊಂಡಿದ್ದರು. ಇದನ್ನು ನೋಡಿ ತಪಾಸಣಾ ಅಧಿಕಾರಿಗಲೇ ಶಾಕ್ ಆಗಿದ್ದು ಇಂಚಿಂಚೂ ಚೆಕ್ ಮಾಡಿ ಚಿನ್ನ ವಶಕ್ಕೆ ಪಡೆದಿದ್ದಾರೆ. ಈ ಮಹಿಳೆಯಿಂದ ಸುಮಾರು 17.9 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಕೆಂಪೇಗೌಡ ಏರ್ಪೋರ್ಟ್​ನಲ್ಲೂ ಕಳೆಗಟ್ಟಿದ ದಸರಾ ಸಂಭ್ರಮ; ಪ್ರಯಾಣಿಕರ ಕಣ್ಮನ ಸೆಳೆಯುತ್ತಿದೆ ದಸರಾ ಗೊಂಬೆ

ಮತ್ತೊಂದು ಪ್ರಕರಣದಲ್ಲಿ ಮಲೇಷ್ಯಾ ಮೂಲದ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಈಕೆ ಗುದದ್ವಾರದಲ್ಲಿ ನಾಲ್ಕು ಕ್ಯಾಪ್ಸೂಲ್‌ಗಳಲ್ಲಿ ಒಟ್ಟು 578.27 ಗ್ರಾಂ ಚಿನ್ನವನ್ನು ಅಡಗಿಸಿಟ್ಟುಕೊಂಡಿದ್ದಳು. ಸದ್ಯ ವೈದ್ಯರ ಸಹಾಯದಿಂದ ಗುದದ್ವಾರದಲ್ಲಿದ್ದ ಚಿನ್ನವನ್ನು ಹೊರತೆಗೆದು ವಶಕ್ಕೆ ಪಡೆಯಲಾಗಿದೆ. ಈ ಮಹಿಳೆಯಿಂದ ಸುಮಾರು 34.4 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೋರ್ವ ಮಹಿಳೆ ಕುವೈತ್‌ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದು ಭಾರತೀಯ ಮೂಲದವರು. ಇವರು ಚಿನ್ನವನ್ನು ಸಣ್ಣ ಸಣ್ಣದಾಗಿ ತುಂಡು ಮಾಡಿ, ಗೋಡಂಬಿ, ಬಾದಾಮಿ, ಪಿಸ್ತಾವನ್ನು ಒಳಗೊಂಡಿದ್ದ ಡ್ರೈ ಫ್ರೂಟ್ಸ್ ಪ್ಯಾಕೆಟ್​ನಲ್ಲಿ ಸೇರಿಸಿದ್ದರು. ತಪಾಸಣೆಯ ವೇಳೆ ಡ್ರೈ ಫ್ರೂಟ್ಸ್‌ ಪ್ಯಾಕೇಟ್​ನಲ್ಲಿ ಚಿನ್ನದ ಸಣ್ಣ ಸಣ್ಣ ತುಂಡುಗಳು ಇರುವುದು ಕಂಡು ಬಂದಿದೆ. ಈ ಮಹಿಳೆಯಿಂದ 15.26 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಹಾಗೂ 1.49 ಲಕ್ಷ ರೂ. ಮೌಲ್ಯದ ಐ ಪೋನ್‌ 14 ಪ್ರೋ ಮ್ಯಾಕ್‌ ಮೊಬೈಲ್‌ ವಶಕ್ಕೆ ಪಡೆಯಲಾಗಿದೆ. ಸದ್ಯ ಮೂವರು ಮಹಿಳೆಯರನ್ನು ಬಂಧಿಸಿ ವಿಚಾರನೆ ನಡೆಸಲಾಗುತ್ತಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್