AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಭರ್ಜರಿ ಬೇಟೆ: 28 ಕೋಟಿ ರೂ ಹೈಡ್ರೋ ಗಾಂಜಾ, 1.75 ಕೋಟಿ ರೂ ಚಿನ್ನ ಜಪ್ತಿ!

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬ್ಯಾಂಕಾಕ್ ಮತ್ತು ವಿಯೆಟ್ನಾಂನಿಂದ ತಂದಿದ್ದ 28 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಹಾಗೂ 1.75 ಕೋಟಿ ರೂ. ಮೌಲ್ಯದ ಅಕ್ರಮ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದ್ದು, ಕಳ್ಳಸಾಗಣೆ ಮಾಡುತ್ತಿದ್ದ ಪ್ರಯಾಣಿಕರನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಭರ್ಜರಿ ಬೇಟೆ: 28 ಕೋಟಿ ರೂ ಹೈಡ್ರೋ ಗಾಂಜಾ, 1.75 ಕೋಟಿ ರೂ ಚಿನ್ನ ಜಪ್ತಿ!
ಅಧಿಕಾರಿಗಳು ವಶಪಡಿಸಿಕೊಂಡ ಗಾಂಜಾ
ನವೀನ್ ಕುಮಾರ್ ಟಿ.
| Edited By: |

Updated on:Sep 22, 2026 | 11:12 AM

Share

ಮುಖ್ಯಾಂಶಗಳು

  • ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 28 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ.
  • ಬ್ಯಾಂಕಾಕ್, ವಿಯೆಟ್ನಾಂನಿಂದ ಬಂದಿದ್ದ ಐವರು ಆರೋಪಿಗಳನ್ನು ಬಂಧಿಸಿದ ಕಸ್ಟಮ್ಸ್.
  • ಅಬುದಾಬಿಯಿಂದ ತಂದಿದ್ದ 1.75 ಕೋಟಿ ಮೌಲ್ಯದ ಚಿನ್ನಾಭರಣ ವಶ.

ದೇವನಹಳ್ಳಿ, ಸೆಪ್ಟೆಂಬರ್ 22: ನಗರದ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಗಾಂಜಾ, ವಿದೇಶಿ ವಿಲಕ್ಷಣ ಪ್ರಾಣಿಗಳ ಸಾಗಾಟ ಹೊಸತೇನಲ್ಲ. ಈಗಾಗಲೇ ಸಾಕಷ್ಟು ಬಾರಿ ಇಂತಹ ಕೆಲಸದಲ್ಲಿ ಸಿಕ್ಕಿಬಿದ್ದ ಆರೋಪಿಗಳು ಪೊಲೀಸರ ಅತಿಥಿಗಳಾಗಿದ್ದಾರೆ. ಈ ಅಕ್ರಮಗಳನ್ನು ಬಯಲಿಗೆಳೆಯಲು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಹೈಡ್ರೋಪೋನಿಕ್ ಗಾಂಜಾ ಹಾಗೂ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಲ್ಲದೆ, ಪ್ರತ್ಯೇಕ ಪ್ರಕರಣಗಳಲ್ಲಿ 6 ಪ್ರಯಾಣಿಕರನ್ನು ಬಂಧಿಸಿದ್ದಾರೆ.

28 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ

ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ವಿಯೆಟ್ನಾಂ ಹಾಗೂ ಬ್ಯಾಂಕಾಕ್‌ನಿಂದ ಲಗೇಜ್ ಬ್ಯಾಗ್‌ಗಳಲ್ಲಿ ಅಡಗಿಸಿ ತರಲಾಗಿದ್ದ ಒಟ್ಟು 80.11 ಕೆಜಿ ತೂಕದ ಅತ್ಯಂತ ದುಬಾರಿ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ತಂಡ ಪತ್ತೆಹಚ್ಚಿದೆ. ಇದರ ಅಂದಾಜು ಮಾರುಕಟ್ಟೆ ಮೌಲ್ಯ ಸುಮಾರು 28 ಕೋಟಿ ರೂಪಾಯಿ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕರು ಸೇರಿದಂತೆ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಐದು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಎನ್​ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕಸ್ಟಮ್ಸ್ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

LIVE TV

1.75 ಕೋಟಿ ಮೌಲ್ಯದ ಚಿನ್ನಾಭರಣ ವಶ

ಮತ್ತೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ಅಬುದಾಬಿ ಹಾಗೂ ಕೌಲಾಲಂಪುರದಿಂದ ಕೆಐಎಗೆ ಆಗಮಿಸಿದ್ದ ಪ್ರಯಾಣಿಕರಿಂದ 1.75 ಕೋಟಿ ರೂಪಾಯಿ ಮೌಲ್ಯದ 1.2 ಕೆಜಿ ಅಕ್ರಮ ಚಿನ್ನಾಭರಣಗಳನ್ನು ಸೀಜ್ ಮಾಡಲಾಗಿದೆ. ಯಾವುದೇ ದಾಖಲೆಗಳಿಲ್ಲದೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರನ್ನು ಬಂಧಿಸಿ ಕಸ್ಟಮ್ಸ್ ತನಿಖೆ ಮುಂದುವರಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ಈ ಸರಣಿ ಕಾರ್ಯಾಚರಣೆಯು ಅಂತಾರಾಷ್ಟ್ರೀಯ ಡ್ರಗ್ಸ್ ಹಾಗೂ ಚಿನ್ನದ ಕಳ್ಳಸಾಗಣೆ ಜಾಲಕ್ಕೆ ಬಿಸಿ ಮುಟ್ಟಿಸಿದೆ.

ಕಳೆದ ಕೆಲ ತಿಂಗಳಿಂದ ಏರ್​ಪೋರ್ಟ್​ನಲ್ಲಿ ಸಿಕ್ಕಿದ್ದೇನೇನು?

ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ 1-2 ತಿಂಗಳಿಂದ ಹಲವು ಅಕ್ರಮ ಗಾಂಜಾ ಸಾಗಟ ಸೇರಿದಂತೆ ಇನ್ನಿತರೆ ಪ್ರಕರಣಗಳು ಬೆಳಕಿಗೆ ಬಂದಿವೆ. ಬ್ಯಾಂಕಾಕ್ ಸೇರಿದಂತೆ ವಿದೇಶಗಳಿಂದ ಅಕ್ರಮವಾಗಿ ತರಲಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಅಪರೂಪದ ಹಾವಿನ ತಳಿಗಳು, ಕಂಗಾರೂ, ವಾನರ ಜತಿಯ ವನ್ಯಜೀವಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಹಿನ್ನೆಲೆ ವಿದೇಶಿ ಪ್ರಯಾಣಿಕರು ಹಾಗೂ ತಸ್ಕರರನ್ನು ಬಂಧಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:28 am, Tue, 22 September 26

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ