AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭರ್ಜರಿ ಬೇಟೆ: ಬ್ಯಾಂಕಾಕ್‌ನಿಂದ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬ್ಯಾಂಕಾಕ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 2.33 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟಿದ್ದ 6.66 ಕೆಜಿ ತೂಕದ ಈ ದುಬಾರಿ ಡ್ರಗ್ಸ್ ಸಮೇತ ಸಿಕ್ಕಿಬಿದ್ದಿರುವ ಪ್ರಯಾಣಿಕನನ್ನು ವಶಕ್ಕೆ ಪಡೆದು ಅಧಿಕಾರಿಗಳು ನಡೆಸುತ್ತಿರುವ ತೀವ್ರ ವಿಚಾರಣೆಯ ಸಂಪೂರ್ಣ ವಿವರ ಇಲ್ಲಿದೆ.

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಭರ್ಜರಿ ಬೇಟೆ: ಬ್ಯಾಂಕಾಕ್‌ನಿಂದ ತಂದಿದ್ದ 2.33 ಕೋಟಿ ಮೌಲ್ಯದ ಗಾಂಜಾ ಜಪ್ತಿ!
ವಶಕ್ಕೆ ಪಡೆದುಕೊಂಡ ಹೈಡ್ರೋ ಗಾಂಜಾ
ನವೀನ್ ಕುಮಾರ್ ಟಿ.
| Edited By: |

Updated on: Jun 08, 2026 | 11:50 AM

Share

ದೇವನಹಳ್ಳಿ, ಜೂನ್ 08: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (International Airport) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕನೊಬ್ಬನಿಂದ ಬರೋಬ್ಬರಿ 2.33 ಕೋಟಿ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಮುಖ್ಯಾಂಶಗಳು

  • ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋಟ್ಯಂತರ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ.
  • ಬ್ಯಾಂಕಾಕ್‌ನಿಂದ ಬಂದಿದ್ದ ಪ್ರಯಾಣಿಕನ ಲಗೇಜ್ ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾಗಿದೆ.
  • 2.33 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸಮೇತ ಆರೋಪಿಯನ್ನು ಬಂಧಿಸಲಾಗಿದೆ.

ಬ್ಯಾಗ್ ಪರಿಶೀಲನೆ ವೇಳೆ ಗಾಂಜಾ ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ವಿಮಾನ ನಿಲ್ದಾಣಕ್ಕೆ ಬ್ಯಾಂಕಾಕ್‌ನಿಂದ ಬಂದಿದ್ದ ವಿಮಾನದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ವಾಡಿಕೆಯಂತೆ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಒಬ್ಬ ಪ್ರಯಾಣಿಕನ ಲಗೇಜ್ ಬ್ಯಾಗ್ ಮೇಲೆ ಅಧಿಕಾರಿಗಳಿಗೆ ತೀವ್ರ ಅನುಮಾನ ಮೂಡಿದೆ. ತಕ್ಷಣವೇ ಆತನ ಬ್ಯಾಗ್‌ ಅನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಒಳಗೆ ಅಡಗಿಸಿಟ್ಟಿದ್ದ ದುಬಾರಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದೆ.

ಇದನ್ನೂ ಓದಿ ಪಾಕ್ ಉಗ್ರನ ಜೊತೆ ರಾಜ್ಯದ ಇಬ್ಬರ ಲಿಂಕ್: ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು!

6 ಕೆಜಿ ಗೂ ಹೆಚ್ಚು ತೂಕದ ಗಾಂಜಾ ವಶ

ವಶಪಡಿಸಿಕೊಳ್ಳಲಾದ ಈ ಗಾಂಜಾ ಒಟ್ಟು 6.66 ಕೆಜಿ ತೂಕವಿದ್ದು, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ಸುಮಾರು 2.33 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಗಾಂಜಾ ಸಮೇತ ಸಿಕ್ಕಿಬಿದ್ದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ತಕ್ಷಣವೇ ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಆರೋಪಿಯನ್ನು ರಹಸ್ಯ ಸ್ಥಳದಲ್ಲಿ ಇರಿಸಲಾಗಿದ್ದು, ಈ ಇಡೀ ಡ್ರಗ್ಸ್ ಜಾಲದ ಹಿಂದೆ ಯಾರಿದ್ದಾರೆ, ಬೆಂಗಳೂರಿನಲ್ಲಿ ಇದನ್ನು ಯಾರಿಗೆ ತಲುಪಿಸಲು ತರಲಾಗುತ್ತಿತ್ತು ಎಂಬ ಬಗ್ಗೆ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು