ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 38.60 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 38.60 ಕೋಟಿ ರೂ. ಮೌಲ್ಯದ 7.72 ಕೆಜಿ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಬ್ರೆಜಿಲ್‌ನಿಂದ ಬಂದ ಪ್ರಯಾಣಿಕನ ಲಗೇಜ್‌ನಲ್ಲಿ ಮಕ್ಕಳ ಪುಸ್ತಕಗಳ ನಡುವೆ ಡ್ರಗ್ಸ್ ಅಡಗಿಸಿ ಸಾಗಿಸಲು ಯತ್ನಿಸಲಾಗಿತ್ತು. ಸದ್ಯ ಅಧಿಕಾರಿಗಳು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 38.60 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ
ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವ ಕೊಕೇನ್
Edited By:

Updated on: Jan 22, 2026 | 5:16 PM

ದೇವನಹಳ್ಳಿ, ಜನವರಿ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಕಸ್ಟಮ್ಸ್​ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 38.60 ಕೋಟಿ ರೂ ಮೌಲ್ಯದ 7.72 ಕೆಜಿ ಕೊಕೇನ್​​ ವಶಕ್ಕೆ ಪಡೆದುಕೊಂಡಿದ್ದಾರೆ. ಬ್ರೆಜಿಲ್​ನ ಸೌಪಾಲೊ ಏರ್​​ಪೋರ್ಟ್​ನಿಂದ ಕೆಐಎಬಿಗೆ ಬಂದಿದ್ದ ವ್ಯಕ್ತಿ, ಮಕ್ಕಳ ಕಥೆ ಪುಸ್ತಕಗಳ ಮಾದರಿಯಲ್ಲಿ ಡ್ರಗ್ಸ್ ಅಡಗಿಸಿ ಸಾಗಾಟಕ್ಕೆ ಯತ್ನಿಸಿದ್ದಾನೆ. ಅನುಮಾನಗೊಂಡು ಲಗೇಜ್​ ಬ್ಯಾಗ್​ ಪರಿಶೀಲನೆ ನಡೆಸಿದಾಗ ಡ್ರಗ್ಸ್ ಪತ್ತೆ ಆಗಿದೆ.

ಬ್ರೆಜಿಲ್​ನ ಸೌಪಾಲೊ ಏರ್​​ಪೋರ್ಟ್​ನಿಂದ ಕೆಐಎಬಿಗೆ ಬಂದಿದ್ದ ಪ್ರಯಾಣಿಕ ಲಗೇಜ್ ಬ್ಯಾಗ್​​ನಲ್ಲಿ ಮಕ್ಕಳ ಕಥೆ ಪುಸ್ತಕಗಳ ಬುಕ್​ಗಳ ರಟ್ ಅಡಿಯಲ್ಲಿ ಡ್ರಗ್ಸ್​ ಇಟ್ಟಿದ್ದ. ಅನುಮಾನಗೊಂಡ ಏರ್​ಪೋರ್ಟ್​ ಕಸ್ಟಮ್ಸ್​ ಅಧಿಕಾರಿಗಳು ಲಗೇಜ್​ ಬ್ಯಾಗ್​ ಪರಿಶೀಲನೆ ನಡೆಸಿದಾಗ ಡ್ರಗ್ಸ್ ಪತ್ತೆ ಆಗಿದೆ.

ಇದನ್ನೂ ಓದಿ: ಬೆಂಗಳೂರು ಏರ್​​ಪೋರ್ಟ್​ಗೆ ಬಂದವನ ಬ್ಯಾಗ್​ನಲ್ಲಿದ್ದವು ಹಾವುಗಳು, ಸರೀಸೃಪಗಳು!

ಇನ್ನು ಡ್ರಗ್ಸ್ ಅಡಗಿಸಿ ಸಾಗಾಟಕ್ಕೆ ಯತ್ನಿಸಿದ್ದ ಪ್ರಯಾಣಿಕನನ್ನು ಇದೀಗ ವಶಕ್ಕೆ ಪಡೆದಿರುವ ಏರ್​ಪೋರ್ಟ್​ ಕಸ್ಟಮ್ಸ್​ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಜೊತೆಗೆ 38.60 ಕೋಟಿ ರೂ ಮೌಲ್ಯದ 7.72 ಕೆಜಿ ಕೊಕೇನ್​​ ವಶಕ್ಕೆ ಪಡೆದುಕೊಂಡಿದ್ದಾರೆ.

35 ವಿವಿಧ ಬಗೆಯ ವನ್ಯ ಜೀವಿಗಳು ವಶಕ್ಕೆ: ಮೂವರು ಪ್ರಯಾಣಿಕರ ಬಂಧನ

ಬ್ಯಾಂಕಾಕ್​​ನಿಂದ ಅಕ್ರಮವಾಗಿ ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 35 ವಿವಿಧ ಬಗೆಯ ವನ್ಯ ಜೀವಿಗಳನ್ನ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡಿಸಿಕೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರಿಯಾ ವಿಮಾನ ನಿಲ್ಥಾಣದ ಟರ್ಮಿನಲ್ 2ಕ್ಕೆ ಬ್ಯಾಂಕಾಕ್ ನಿಂದ ಮೂವರು ಪ್ರಯಾಣಿಕರು ಆಗಮಿಸಿದ್ದರು.

ಇದನ್ನೂ ಓದಿ: ದುಬೈಯಿಂದ 3.44 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ: ರನ್ಯಾ ಬಂಧನದ ಮರುದಿನವೇ ಅಂಧ ವ್ಯಕ್ತಿ ಅರೆಸ್ಟ್

ಏರ್​ಪೋರ್ಟ್​ನಲ್ಲಿ ಪ್ರಯಾಣಿಕರ ಲಗೇಜ್​​ ಪರಿಶೀಲನೆ ವೇಳೆ ಲಗೇಜ್​ನಲ್ಲಿ ವನ್ಯಜೀವಿಗಳು ಪೆತ್ತೆಯಾಗಿದ್ದು, ಯಾವುದೇ ಸೂಕ್ತ ದಾಖಲೆಗಳನ್ನ ತೋರಿಸಿಲ್ಲ. ಹೀಗಾಗಿ ವನ್ಯ ಜೀವಿಗಳ ಸಂರಕ್ಷಣಾ ಕಾಯ್ದೆ ಹಾಗೂ ಕಸ್ಟಮ್ಸ್ ಕಾಯ್ದೆ ಅಡಿ ಮೂವರು ಆರೋಪಿಗಳನ್ನ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ ವನ್ಯ ಜೀವಿಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.