ಬೆಂಗಳೂರು ಬಂದ್ ಎಫೆಕ್ಟ್; ಹೊರ ರಾಜ್ಯಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 13 ಫ್ಲೈಟ್ ರದ್ದು

ಬೆಂಗಳೂರು ಬಂದ್​ ಹಿನ್ನೆಲೆ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದು ಇದರಿಂದ ಜನ ವಿಮಾನ ನಿಲ್ದಾಣದತ್ತ ಮುಖ ಮಾಡಿಲ್ಲ. ಹೆಚ್ಚಿನ ಪ್ರಯಾಣಿಕರಿಲ್ಲದ ಕಾರಣ ಕೊಚ್ಚಿ, ದೆಹಲಿ, ಮುಂಬೈ ಮತ್ತು ಮಂಗಳೂರು ವಿಮಾನಗಳನ್ನು ರದ್ದು ಮಾಡಲಾಗಿದೆ. ಏರ್ಲೈನ್ಸ್ ಸಿಬ್ಬಂದಿ ಕೊನೆ ಕ್ಷಣದಲ್ಲಿ 13 ಪ್ಲೈಟ್​ಗಳನ್ನ ರದ್ದು ಮಾಡಿದ್ದಾರೆ.

ಬೆಂಗಳೂರು ಬಂದ್ ಎಫೆಕ್ಟ್; ಹೊರ ರಾಜ್ಯಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ 13 ಫ್ಲೈಟ್ ರದ್ದು
ಕೆಂಪೇಗೌಡ ವಿಮಾನ ನಿಲ್ದಾಣ
Follow us
ನವೀನ್ ಕುಮಾರ್ ಟಿ
| Updated By: ಆಯೇಷಾ ಬಾನು

Updated on: Sep 26, 2023 | 12:45 PM

ಬೆಂಗಳೂರು, ಸೆ.26: ಪ್ರತಿದಿನ 5 ಸಾವಿರ ಕ್ಯೂಸೆಕ್​ನಂತೆ 15 ದಿನಗಳ ಕಾಲ ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ (Cauvery Water Dispute). ಇದರಿಂದ ರೊಚ್ಚಿಗೆದ್ದ ರೈತರು, ಕನ್ನಡ ಪರ ಸಂಘಟನೆಗಳು ಬಂದು ತೊಟ್ಟು ನೀರು ಕೂಡ ಬಿಡಬಾರದು ಎಂದು ಆಕ್ರೋಶ ಹೊರ ಹಾಕಿ ಬೆಂಗಳೂರು ಬಂದ್ (Bengaluru Bandh) ಮಾಡಿ ಪ್ರತಿಭಟನೆ ನಡೆಸಿವೆ. ಆದರೆ ಮತ್ತೊಂದೆಡೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport Bengaluru) ಖಾಲಿ ಖಾಲಿಯಾಗಿದ್ದು ಬಂದ್ ಎಫೆಕ್ಟ್​ನಿಂದಾಗಿ ಹೊರ ರಾಜ್ಯಗಳಿಂದ ಆಗಮಿಸಬೇಕಿದ್ದ ವಿಮಾನಗಳು ರದ್ದಾಗಿವೆ. ಪ್ರಯಾಣಿಕರಿಲ್ಲದ ಕಾರಣ ಅನೇಕ ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ (Flight Cancel).

ಬೆಂಗಳೂರು ಬಂದ್​ ಹಿನ್ನೆಲೆ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದು ಇದರಿಂದ ಜನ ವಿಮಾನ ನಿಲ್ದಾಣದತ್ತ ಮುಖ ಮಾಡಿಲ್ಲ. ತಮ್ಮ ಪ್ಲ್ಯಾನ್​ಗಳನ್ನು ಬದಲಾಯಿಸಿ ವಿಮಾನಯಾನವನ್ನು ಮುಂದೂಡಿದ್ದಾರೆ. ಇನ್ನು ಹೆಚ್ಚಿನ ಪ್ರಯಾಣಿಕರಿಲ್ಲದ ಕಾರಣ ಕೊಚ್ಚಿ, ದೆಹಲಿ, ಮುಂಬೈ ಮತ್ತು ಮಂಗಳೂರು ವಿಮಾನಗಳನ್ನು ರದ್ದು ಮಾಡಲಾಗಿದೆ. ಬೆಳಗ್ಗೆ ಕೆಂಪೇಗೌಡ ಏರ್ಪೋಟ್ ಗೆ ಆಗಮಿಸಬೇಕಿದ್ದ ವಿಮಾನಗಳು ಬಂದ್ ಹಿನ್ನೆಲೆ ಬಂದಿಲ್ಲ. ಏರ್ಲೈನ್ಸ್ ಸಿಬ್ಬಂದಿ ಕೊನೆ ಕ್ಷಣದಲ್ಲಿ 13 ಪ್ಲೈಟ್​ಗಳನ್ನ ರದ್ದು ಮಾಡಿದ್ದಾರೆ.

ಇದನ್ನೂ ಓದಿ: ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ಸಿದ್ದರಾಮಯ್ಯ, ಹೆಚ್​ಡಿ ದೇವೇಗೌಡ ಹೇಳಿದ್ದಿಷ್ಟು

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕನ ಅಳಲು

ಇನ್ನು ಮತ್ತೊಂದೆಡೆ ಕ್ಯಾಬ್ ಚಾಲಕ ಲೋಕೇಶ್ ಅಳಲು ತೋಡಿಕೊಂಡಿದ್ದಾರೆ. ರಾತ್ರಿ ಒಂದು ಗಂಟೆಯಿಂದ ಪ್ರಯಾಣಿಕರಿಗಾಗಿ ಕಾಯುತ್ತಿದ್ದೇನೆ. ಬೆಳ್ಳಗ್ಗೆಯಿಂದ ಒಂದೇ ಒಂದು ಡ್ರಾಪ್‌ ಮಾತ್ರ ಸಿಕ್ಕಿದೆ. ಬಂದ್‌ ಹಿನ್ನೆಲೆ ಪ್ರಯಾಣಿಕರು ಬರ್ತಿಲ್ಲ. ಪ್ಲೈಟ್‌ಗಳು ಇವೆ ಆದರೆ ಜನರು ಬರ್ತಿಲ್ಲ ಎಂದು ಹೆಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್