Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Crime: ಖಾಸಗಿ ಚಿತ್ರಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿದ ಪ್ರಿಯಕರ; ಯುವತಿ ಆತ್ಮಹತ್ಯೆ

ಖಾಸಗಿ ಚಿತ್ರಗಳನ್ನು ಬಹಿರಂಗಪಡಿಸುವುದಾಗಿ ಪ್ರಿಯಕರ ಹೆದರಿಸಿದ್ದರಿಂದ ಮನನೊಂದ 21ರ ಹರೆಯದ ಯುವತಿ ಆಶಾ ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಲ್ಲಸಂದ್ರದಲ್ಲಿ ನಡೆದಿದೆ.

Bengaluru Crime: ಖಾಸಗಿ ಚಿತ್ರಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿದ ಪ್ರಿಯಕರ; ಯುವತಿ ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Jul 04, 2023 | 8:23 PM

ಬೆಂಗಳೂರು: ಖಾಸಗಿ ಚಿತ್ರಗಳನ್ನು ಬಹಿರಂಗಪಡಿಸುವುದಾಗಿ ಪ್ರಿಯಕರ ಹೆದರಿಸಿದ್ದರಿಂದ ಮನನೊಂದ 21ರ ಹರೆಯದ ಯುವತಿ ಆಶಾ ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural) ಮಲ್ಲಸಂದ್ರದಲ್ಲಿ ನಡೆದಿದೆ. ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದೇ ಯುವತಿ ಹಾಗೂ ಯುವಕನ ನಡುವಣ ಕಲಹಕ್ಕೆ ಕಾರಣವಾಗಿತ್ತು. ಪರಿಣಾಮವಾಗಿ ಆತ ಖಾಸಗಿ ಚಿತ್ರಗಳನ್ನು ಬಹಿರಂಗಪಡಿಸುವ ಬೆದರಿಕೆ ಹಾಕಿದ್ದ ಎಂದು ಮೂಲಗಳು ತಿಳಿಸಿವೆ. ನೆಲಮಂಗಲದ ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಶಾ ಮತ್ತು ಅವಿನಾಶ್​ ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಮದುವೆಯಾಗುವ ತಮ್ಮ ಯೋಜನೆಯನ್ನು ಮಹಿಳೆ ಪೋಷಕರಿಗೆ ತಿಳಿಸಿದ್ದರು, ಆದರೆ ಪೋಷಕರು ಅದನ್ನು ವಿರೋಧಿಸಿದ್ದರು.

ಬಳಿಕ ಆಶಾ ತನ್ನ ಪೋಷಕರ ನಿಲುವಿನ ಬಗ್ಗೆ ಅವಿನಾಶ್‌ಗೆ ತಿಳಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಅವಿನಾಶ್, ಆಶಾ ತನಗೆ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ ಮತ್ತು ಆಕೆಯ ಖಾಸಗಿ ಚಿತ್ರಗಳನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಇದನ್ನೂ ಓದಿ: ಮೃತಪಟ್ಟಿರಬಹುದು ಎಂದು ಭಾವಿಸಿದ್ದ ವ್ಯಕ್ತಿಯೇ ಕೊಲೆಗಾರ! ಕ್ಲಿಷ್ಟಕರ ಪ್ರಕರಣ ಬೇಧಿಸಿದ ಕಲಬುರಗಿ ಪೊಲೀಸರು

ಇದರಿಂದ ಮನನೊಂದ ಹಾಗೂ ಹೆದರಿದ ಆಶಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ