ಬೆಂಗಳೂರು: ಖಾಸಗಿ ಚಿತ್ರಗಳನ್ನು ಬಹಿರಂಗಪಡಿಸುವುದಾಗಿ ಪ್ರಿಯಕರ ಹೆದರಿಸಿದ್ದರಿಂದ ಮನನೊಂದ 21ರ ಹರೆಯದ ಯುವತಿ ಆಶಾ ಎಂಬವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ (Bangalore Rural) ಮಲ್ಲಸಂದ್ರದಲ್ಲಿ ನಡೆದಿದೆ. ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದೇ ಯುವತಿ ಹಾಗೂ ಯುವಕನ ನಡುವಣ ಕಲಹಕ್ಕೆ ಕಾರಣವಾಗಿತ್ತು. ಪರಿಣಾಮವಾಗಿ ಆತ ಖಾಸಗಿ ಚಿತ್ರಗಳನ್ನು ಬಹಿರಂಗಪಡಿಸುವ ಬೆದರಿಕೆ ಹಾಕಿದ್ದ ಎಂದು ಮೂಲಗಳು ತಿಳಿಸಿವೆ. ನೆಲಮಂಗಲದ ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಆಶಾ ಮತ್ತು ಅವಿನಾಶ್ ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಮದುವೆಯಾಗುವ ತಮ್ಮ ಯೋಜನೆಯನ್ನು ಮಹಿಳೆ ಪೋಷಕರಿಗೆ ತಿಳಿಸಿದ್ದರು, ಆದರೆ ಪೋಷಕರು ಅದನ್ನು ವಿರೋಧಿಸಿದ್ದರು.
ಬಳಿಕ ಆಶಾ ತನ್ನ ಪೋಷಕರ ನಿಲುವಿನ ಬಗ್ಗೆ ಅವಿನಾಶ್‌ಗೆ ತಿಳಿಸಿದ್ದಾರೆ. ಇದರಿಂದ ಸಿಟ್ಟಿಗೆದ್ದ ಅವಿನಾಶ್, ಆಶಾ ತನಗೆ ಮೋಸ ಮಾಡಿದ್ದಾಳೆ ಎಂದು ಆರೋಪಿಸಿ ಮತ್ತು ಆಕೆಯ ಖಾಸಗಿ ಚಿತ್ರಗಳನ್ನು ಸೋರಿಕೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.
ಇದನ್ನೂ ಓದಿ: ಮೃತಪಟ್ಟಿರಬಹುದು ಎಂದು ಭಾವಿಸಿದ್ದ ವ್ಯಕ್ತಿಯೇ ಕೊಲೆಗಾರ! ಕ್ಲಿಷ್ಟಕರ ಪ್ರಕರಣ ಬೇಧಿಸಿದ ಕಲಬುರಗಿ ಪೊಲೀಸರು
ಇದರಿಂದ ಮನನೊಂದ ಹಾಗೂ ಹೆದರಿದ ಆಶಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ