AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಫ್ರೀಫೈರ್ ಗೇಮ್​​ಗೆ ಅಡಿಕ್ಟ್! ಅಕ್ಕನ ಮಗನನ್ನೇ ಕೊಂದ ಮಾವ

ಫ್ರೀಫೈರ್ ಗೇಮ್​ ಚಟಕ್ಕೆ ಬಿದ್ದ 14 ವರ್ಷದ ಬಾಲಕನನ್ನು ಆತನ ಮಾವನೇ ಕೊಲೆ ಮಾಡಿರುವಂತಹ ಭೀಕರ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್​​ನಲ್ಲಿ ನಡೆದಿದೆ. ಸದ್ಯ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ಬಾಲಕನ ಮಾವನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಬೆಂಗಳೂರು: ಫ್ರೀಫೈರ್ ಗೇಮ್​​ಗೆ ಅಡಿಕ್ಟ್! ಅಕ್ಕನ ಮಗನನ್ನೇ ಕೊಂದ ಮಾವ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Aug 08, 2025 | 10:38 AM

Share

ನೆಲಮಂಗಲ, ಆಗಸ್ಟ್​ 08: ಫ್ರೀಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನು ಮಾವ ಕೊಲೆ (kill) ಮಾಡಿರುವಂತಹ ಘಟನೆ ಬೆಂಗಳೂರಿನ (bangaluru) ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಕುಂಬಾರಹಳ್ಳಿಯ ವಿನಾಯಕ ಲೇಔಟ್​​ನಲ್ಲಿ ನಡೆದಿದೆ. 14 ವರ್ಷದ ಅಮೋಘ ಕೀರ್ತಿ ಕೊಲೆಯಾದ ಬಾಲಕ. ಸದ್ಯ ಪೊಲೀಸರು ಮಾವ ನಾಗಪ್ರಸಾದ್(50) ನನ್ನು ಬಂಧಿಸಿದ್ದಾರೆ. ಮೃತ ಬಾಲಕ ನಾಗಪ್ರಸಾದ್ ಸಹೋದರಿ ಶಿಲ್ಪಾ ಮಗ. ಘಟನೆ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ನಡೆದದ್ದೇನು?

ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಕೂಡ ಮಾಡಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕನ ಕತ್ತು ಸೀಳಿ ಕೊಂದಿದ್ದಾರೆ.

ಇದನ್ನೂ ಓದಿ: ಸ್ನೇಹಿತನ ಹೆಂಡ್ತಿಯನ್ನೇ ಹತ್ಯೆಗೈದು ವ್ಯಕ್ತಿ ಆತ್ಯಹತ್ಯೆ: ಆಕ್ರಮ ಸಂಬಂಧಕ್ಕೆ ಒಪ್ಪದಕ್ಕೆ ಕೃತ್ಯ ಶಂಕೆ

ಸೋಮವಾರ ಬೆಳಗಿನ ಜಾವ 4.30ಕ್ಕೆ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ ನಾಗಪ್ರಸಾದ್​, ನಂತರ ಕೆರೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದಾರೆ. ಆದರೆ ಎಲ್ಲಿಗೂ ಹೋಗಲು ಹಣವಿಲ್ಲದೆ ಮೆಜೆಸ್ಟಿಕ್​​ನಲ್ಲಿ 3 ದಿನ ಕಾಲಕಳೆದಿದ್ದಾರೆ. ನಂತರ ಸೋಲದೇವನಹಳ್ಳಿ ಠಾಣೆಗೆ ಹೋಗಿ ಶರಣಾಗಿದ್ದಾರೆ.

ಕೌಟುಂಬಿಕ ಕಲಹ: ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣು

ಕೌಟುಂಬಿಕ ಕಲಹ ಹಿನ್ನಲೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಹಾವೇರಿ ತಾಲೂಕಿನ ನಜೀಕ ಲಕಮಾಪುರ ಗ್ರಾಮದಲ್ಲಿ ನಡೆದಿದೆ. ಪತ್ನಿ ಲಲಿತವ್ವ(55) ಕೊಂದು ಸಿದ್ದಪ್ಪ ಡಬ್ಬಣ್ಣವರ(60) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೆಂಗಳೂರು ಬಾಲಕನ ಕಿಡ್ನ್ಯಾಪ್-ಕೊಲೆ ಕೇಸ್​: ಕೊನೆಗೂ ರಿವೀಲ್​ ಆಯ್ತು ಹತ್ಯೆ ರಹಸ್ಯ!

ನಿನ್ನೆ ರಾತ್ರಿ ಗಂಡ ಮತ್ತು ಹೆಂಡತಿ ನಡುವೆ ಜಗಳವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಈ ವೇಳೆ ಪತಿ ಸಿದ್ದಪ್ಪ ಪತ್ನಿ ಲಲಿತವ್ವರ ಹತ್ಯೆ ಮಾಡಿದ್ದಾರೆ. ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.