ಬೆಂಗಳೂರು: ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿತ, ವ್ಯಕ್ತಿ ಆಸ್ಪತ್ರೆಗೆ ದಾಖಲು

ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಕಾಲೋನಿಯಲ್ಲಿ ರಾತ್ರಿ ಹಾಲು ಖರೀದಿಸಲು ಅಂಗಡಿಗೆ ಬಂದಿದ್ದ ಮಹಿಳೆಯನ್ನು ಅಪರಿಚಿತ ವ್ಯಕ್ತಿ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾನೆ. ಈ ವೇಳೆ 10 ಜನ ಗುಂಪು ಬಂದು ಮಹಿಳೆಯನ್ನು ಕಾಪಾಡಿ ವ್ಯಕ್ತಿಯನ್ನು ನಗ್ನಗೊಳಿಸಿ ಥಳಿಸಿದ್ದಾರೆ, ಇದರಿಂದ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ಮಹಿಳೆಯನ್ನು ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿತ, ವ್ಯಕ್ತಿ ಆಸ್ಪತ್ರೆಗೆ ದಾಖಲು
ಸಾಂದರ್ಭಿಕ ಚಿತ್ರ
Follow us
ರಾಮು, ಆನೇಕಲ್​
| Updated By: ಆಯೇಷಾ ಬಾನು

Updated on:Sep 08, 2024 | 7:50 AM

ಬೆಂಗಳೂರು, ಸೆ.08: ಮಹಿಳೆಯನ್ನು (Woman) ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ 10ಕ್ಕೂ ಹೆಚ್ಚು ಯುವಕರ ಗುಂಪು ಹಿಗ್ಗಾಮುಗ್ಗ ಥಳಿಸಿದ ಘಟನೆ ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಕಾಲೋನಿ ಬಳಿ ರಾತ್ರಿ ನಡೆದಿದೆ. ಹಾಲು ಖರೀದಿಸಲು ಮಹಿಳೆ ಅಂಗಡಿಗೆ ಬಂದಿದ್ದರು. ಈ ವೇಳೆ ವ್ಯಕ್ತಿಯೋರ್ವ ಮಹಿಳೆಯ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದಾನೆ. ಆತಂಕಗೊಂಡ ಮಹಿಳೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

ಈ ವೇಳೆ ಮಹಿಳೆಯ ನೆರವಿಗೆ ಬಂದ ಗ್ರಾಮದ ಯುವಕರ ಗುಂಪು ಕುಡಿದ ನಶೆಯಲ್ಲಿದ್ದ ಅಪರಿಚಿತ ವ್ಯಕ್ತಿಯನ್ನ ಹಿಡಿದು ಹಲ್ಲೆ ನಡೆಸಿದ್ದಾರೆ. ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಮರ್ಮಾಂಗಕ್ಕೆ ಒದ್ದಿದ್ದಾರೆ. ಹಲ್ಲೆ ಮಾಡಿ ಆಟೋದಲ್ಲಿ ಕರೆದೊಯ್ಯುವಾಗ ಪೊಲೀಸರು ಬಂದಿದ್ದು ವ್ಯಕ್ತಿಯನ್ನು ಬನ್ನೇರುಘಟ್ಟ ಪೊಲೀಸರ ವಶಕ್ಕೆ ಪಡೆದಿದ್ದಾರೆ. ಗಾಯಾಳು ವ್ಯಕ್ತಿಯನ್ನು ಗೊಟ್ಟಿಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಮಂಗಳೂರು: ನಡುರಸ್ತೆಯಲ್ಲಿಯೇ ಖಾಸಗಿ ಬಸ್​ ಕಂಡಕ್ಟರ್​ಗಳ ನಡುವೆ ಹೊಡೆದಾಟ; ವಿಡಿಯೋ ವೈರಲ್​

ಹಲ್ಲೆಗೊಳಗಾದ ವ್ಯಕ್ತಿ ಯಾರು?

ಧಾರವಾಡ ಮೂಲದ ರವಿಕುಮಾರ್ ಹಲ್ಲೆಗೊಳಗಾದ ವ್ಯಕ್ತಿ. ಕಲ್ಕೆರೆ ಹೋಟೆಲ್ ನಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ ಈತ ಕಳೆದ ರಾತ್ರಿ ಅಂಗಡಿಗೆ ಹಾಲು ತೆಗೆದುಕೊಂಡು ಬರಲು ಹೋಗಿದ್ದ ಮಹಿಳೆಯ ಬಾಯಿ ಮುಚ್ಚಿ ಎಳೆದೊಯ್ಯಲು ಯತ್ನಿಸಿದ್ದ. ಅಲ್ಲಿಯೇ ಇದ್ದ ಗ್ರಾಮದ ಯುವಕರು ಮಹಿಳೆ ನೆರವಿಗೆ ಬಂದಿದ್ದು ಕುಡಿದ ನಶೆಯಲ್ಲಿದ್ದ ರವಿಕುಮಾರನನ್ನು ಹಿಡಿದು ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ನಗ್ನಗೊಳಿಸಿ ಮರ್ಮಾಂಗ ಮತ್ತು ವೃಷಣಕ್ಕೆ ಹೊಡೆದಿದ್ದಾರೆ.

ತಲ್ವಾರ್‌ ಹಿಡ್ಕೊಂಡು ಹೊಡೆದಾಟ

ಕ್ಷುಲ್ಲಕ ಕಾರಣಕ್ಕೆ ತಲ್ವಾರ್‌ನಿಂದ ಯುವಕರು ಹೊಡೆದಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ವರೂರ ಗ್ರಾಮದ ಬಳಿ ನಡೆದಿದೆ. ಓರ್ವ ಯುವಕನ ಕೈ ಬೆರಳು ಕಟ್ ಆಗಿದ್ರೆ, ಮತ್ತೊಬ್ಬನಿಗೆ ಗಾಯವಾಗಿದೆ. ಮಾತಿಗೆ ಮಾತು ಬೆಳೆದು ಅರಳಿಕಟ್ಟಿ ಗ್ರಾಮದ ಯುವಕರು ಹೊಡೆದಾಡಿಕೊಂಡಿದಾರೆ. ಗಾಯಾಳು ಯುವಕರಿಬ್ಬರಿಗೆ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಳೆ ಆರ್ಭಟ, ಜನಜೀವನ ಅಸ್ತವ್ಯಸ್ತ

ಕಲಬುರಗಿ ನಗರದಲ್ಲಿ ನಿನ್ನೆ ರಾತ್ರಿ ಭಾರಿ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಧಾರಾಕಾರವಾಗಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಡುವಂತಾಯ್ತ. ಜಿಲ್ಲೆಯಲ್ಲಿ ಎರಡು ದಿನಗಳಿಂದ ಬಿಡುವು ನೀಡಿದ್ದ ಮಳೆ ನಿನ್ನೆ ರಾತ್ರಿ ಮತ್ತೆ ಆರ್ಭಟ ತೋರಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:40 am, Sun, 8 September 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ