ಬೆಂಗಳೂರು ಗ್ರಾಮಾಂತರ: ಆನೇಕಲ್ ಕಲುಷಿತ ನೀರು (contaminated water) ಸೇವಿಸಿ ಒಂದೇ ಅಪಾರ್ಟ್‌ಮೆಂಟ್‌ನ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡಿರುವಂತಹ ಘಟನೆ ಮಹಾವೀರ್ ರಾಂಚಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಬೆಳಗ್ಗೆಯಿಂದ ಜ್ವರ, ವಾಂತಿ, ಭೇದಿಯಿಂದ ಮಕ್ಕಳು ಬಳಲುತ್ತಿದ್ದಾರೆ. ಸಿಂಗಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಬ್ಬರು ಮಕ್ಕಳಿಗೆ ಚಿಕಿತ್ಸೆ ನೀಡಲಾಗಿದ್ದು, ಮತ್ತಿಬ್ಬರು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಳಿದ ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕಲುಷಿತ ನೀರು ಸೇವನೆಯಿಂದ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಅಪಾರ್ಟ್‌ಮೆಂಟ್‌ನ ಬಿಲ್ಡರ್ಸ್ ವಿರುದ್ಧ ಸಿಂಗಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಿಂದ ದೂರು ನೀಡಲಾಗಿದೆ. ಮಕ್ಕಳು ಅಸ್ವಸ್ಥ ಹಿನ್ನೆಲೆಯಲ್ಲಿ ಅಪಾರ್ಟ್ಮೆಂಟ್ ಬಳಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Koppal Contaminated Water: ಕಲುಷಿತ ನೀರು ಸೇವನೆ: ಆಸ್ಪತ್ರೆಗೆ ಕರೆದೊಯ್ಯುವ ದಾರಿ ಮಧ್ಯೆ ಪ್ರಾಣ ಬಿಟ್ಟ 10 ವರ್ಷದ ಬಾಲಕಿ
ಕೊಪ್ಪಳ: ಜಿಲ್ಲೆಯಲ್ಲಿ ಕಲುಷಿತ ನೀರು ಸೇವನೆಗೆ ಮತ್ತೊಂದು ಬಲಿಯಾಗಿದೆ?. ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಯಿಂದ ಬಳಲುತ್ತಿದ್ದ ಬಾಲಕಿ(Girl) ಮೃತಪಟ್ಟಿದ್ದಾಳೆ. ಕಳೆದ ಕೆಲ ದಿನಗಳ ಹಿಂದೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಬಸರಿಹಾಳ ಗ್ರಾಮದಲ್ಲಿ 30ಕ್ಕೂ ಹೆಚ್ಚು ಜನರಿಗೆ ವಾಂತಿ ಬೇಧಿಯಾಗಿದ್ದು ಒಂದೂವರೆ ವರ್ಷದ ಮಗು ತಾವರಗೇರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿತ್ತು. ಹಾಗೂ ಹೊನ್ನಮ್ಮ ಎಂಬ ವೃದ್ದೆ ಸಾವನ್ನಪ್ಪಿದ್ರು. ಆದ್ರೆ ವೃದ್ಧೆಗೆ ಬೇರೆ ಬೇರೆ ಕಾಯಿಲೆಗಳಿದ್ದವು ಎಂದು ಕೊಪ್ಪಳ ಡಿಹೆಚ್ಓ ತಿಳಿಸಿದ್ದರು. ಇದರ ನಡುವೆ ಈಗ ಜಿಲ್ಲೆಯಲ್ಲಿ ಕಲುಷಿತ ನೀರಿಗೆ ಬಾಲಕಿ ಬಲಿಯಾಗಿದ್ದಾಳೆ.
ಹಾಸನ: ಮಧ್ಯಾಹ್ನದ ಊಟ ಸೇವಿಸಿದ ನಂತರ 35 ಸೈನಿಕರು ಅಸ್ವಸ್ಥರಾಗಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಕುಡುಗರಹಳ್ಳಿಯಲ್ಲಿ ನಡೆದಿದೆ. ಸದ್ಯ ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಾಹನ ಚಾಲನಾ ತರಬೇತಿಗೆ ಸೈನಿಕರು ಬಂದು ಇಲ್ಲೇ ತಂಗಿದ್ದರು. ಮಧ್ಯಾಹ್ನ ಕ್ಯಾಂಪ್‌ನಲ್ಲೇ ತಯಾರಾದ ಆಹಾರ ಸೇವಿಸಿದ ಬಳಿಕ ಸೈನಿಕರು ಅಸ್ವಸ್ಥತೆಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿದ್ದು, ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ: Hassan News: ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ: ಸರ್ಕಾರಿ ಆಸ್ಪತ್ರೆಗೆ ದಾಖಲು
ರಾಯಚೂರು: ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಬಾಲಕ ಮೃತಪಟ್ಟ ಘಟನೆ ನಡೆದಿತ್ತು. ಈ ಸಂಬಂಧ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿತ್ತು. ಆದ್ರೆ ಈಗ ರೇಕಲಮರಡಿ ಗ್ರಾಮದ ಬಳಿಕ ಮತ್ತೊಂದು ಗ್ರಾಮದಲ್ಲಿ ಕಲುಷಿತ ನೀರು ಕುಡಿದು 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:40 pm, Thu, 8 June 23