ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು

ಇತ್ತೀಚೆಗೆ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನ ಸಾವನ್ನಪ್ಪಿದ್ದರು. ಬಳಿಕ ಮೇ 29ರಂದು ವಿಜಯನಗರದಲ್ಲಿ ಕ್ಲಬ್ ಕಾಂಪೌಂಡ್ ಗೋಡೆ ಕುಸಿದು ಓರ್ವ ಆಟೋ ಚಾಲಕ ಮೃತಪಟ್ಟಿದ್ದರು. ಇದೀಗ ಮಳೆಗೆ ಮತ್ತೊಂದು ದುರಂತ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು
ಮಳೆ
Image Credit source: tv9 kannada

Updated on: May 31, 2026 | 10:23 PM

ನೆಲಮಂಗಲ, ಮೇ 31: ಕಳೆದ ಎರಡು ದಿನಗಳಿಂದ ನಿರಂತರ ಮಳೆಗೆ (Rain) ಅವಘಡವೊಂದು ಸಂಭವಿಸಿದೆ. ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. ಬೊಮ್ಮಶಟ್ಟಿಹಳ್ಳಿಯಲ್ಲಿ ದ್ಯಾಮಪ್ಪ ಮತ್ತು ಬಾಬುಲಾಲ್ ಮೃತರು. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಮಳೆಗೆ ಮತ್ತೊಂದು ದುರಂತ
  • ಕೆಲಸ ಮಾಡುತ್ತಿದ್ದಾಗ ಗೋಡೆ ಕುಸಿದು ಕಾರ್ಮಿಕರ ಸಾವು
  • ಕಳೆದ 2 ದಿನಗಳಿಂದ ನಿರಂತರ ಮಳೆಗೆ ಕುಸಿದ ಗೋಡೆ

ನಡೆದಿದ್ದೇನು?

ನಗರದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿದಿದೆ. ಇತ್ತ ಕಾರ್ಮಿಕರು ಪಟೇಲ್ ಎಂಬುವರಿಗೆ ಸೇರಿದ ಸೈಟ್‌ನಲ್ಲಿ ಗೋಡೆ ನಿರ್ಮಾಣದ ಕೆಲಸ ಮಾಡುತ್ತಿದ್ದರು. ಮಳೆಯಿಂದಾಗಿ ಕೆಲಸ ಮಾಡುತ್ತಿರುವಾಗಲೇ ಗೋಡೆ ಕುಸಿದು ಕಾರ್ಮಿಕರು ಇಬ್ಬರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಗೆ ಆಟೋ ಚಾಲಕ ಬಲಿ

ದುರಂತ ನಂತರ ಇಬ್ಬರು ಕಾರ್ಮಿಕರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವಂತಹ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ದೇವರಮರಡಿ ಕೆರೆಯಲ್ಲಿ ನಡೆದಿದೆ. ಮಜುರೆ ಗಿಲ್ಯಾನಾಯಕನ ತಾಂಡಾ ನಿವಾಸಿ ಗೌತಮ್ ಮೃತ ದುರ್ದೈವಿ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಸರಣಿ ಅಪಘಾತದಲ್ಲಿ ಆರು ಜನ ಸಾವು; 10ಕ್ಕೂ ಹೆಚ್ಚು ಜನರಿಗೆ ಗಾಯ

ನಿನ್ನೆ ಸಂಜೆ ಸಹೋದರ ಹಾಗೂ ಗೆಳೆಯರ ಜೊತೆ ಕೆರೆ ಬಳಿ ತೆರಳಿದ್ದ. ಈ ವೇಳೆ ಆಟವಾಡುತ್ತ ಕೆರೆಯಲ್ಲಿ ತೇಲುತ್ತಿದ್ದ ತೆಪ್ಪ ಹತ್ತಿದ್ದ ಗೌತಮ್, ತೇಲುತಿದ್ದ ತೆಪ್ಪದ ಮೇಲೆ ಸಂಭ್ರಮಿಸುವಾಗ ಏಕಾಏಕಿ ಮಗುಚಿಬಿದ್ದಿದೆ. ಬಳಿಕ ನೀರಿನಲ್ಲಿ ಕಣ್ಮರೆಯಾಗಿದ್ದ. ಇಂದು ಅಗ್ನಿಶಾಮಕ ಸಿಬ್ಬಂದಿ ಕೆರೆಯಿಂದ ಗೌತಮ್ ಶವ ಹೊರತೆಗೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:47 pm, Sun, 31 May 26

Follow Us