
ಬೆಂಗಳೂರು ಗ್ರಾಮಾಂತರ, ಜನವರಿ 31: ಜಿಲ್ಲೆಯ (Bengaluru Rural) ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲ್ ಚಲ್ ಎಬ್ಬಿಸಿದೆ. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಲೇಬರ್ ಶೆಡ್‌ನಲ್ಲಿ ಮಲಗಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಜಯಂತ್ ಸಿಂಧೆ (25), ನೀರೇಂದ್ರನಾಥ್ (24), ಡಾಕ್ಟರ್ ಟೈಡ್ (25) ಹಾಗೂ ಧನಂಜಯ್ ಟೈಡ್ (20) ಎಂದು ಗುರುತಿಸಲಾಗಿದೆ. ನಾಲ್ವರೂ ರಾತ್ರಿ ಶೆಡ್‌ನ ಕಿಟಕಿ ಹಾಗೂ ಬಾಗಿಲುಗಳನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಅಡುಗೆ ಮಾಡಿದ್ದರು ಎನ್ನಲಾಗಿದೆ. ಬೆಳಗಿನ ಜಾವ ಅವರು ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ ಮೂರು ಮದುವೆಯಾಗಿ ಲಕ್ಷಾಂತರ ರೂ. ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ! ಹೇಳಿದ್ದೇನು ನೋಡಿ
ಘಟನೆಯ ಮಾಹಿತಿ ತಿಳಿದ ತಕ್ಷಣ ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ದುರ್ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪ್ರಕರಣದ ಕುರಿತು ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.