- TV9 Kannada Karnataka News Bengaluru Rural News Bengaluru Rural District Nelamangala car accident youtuber died
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಕಾರು ಅಪಘಾತ, ಯುಟ್ಯೂಬರ್ ಸಾವು
ಅಪರಿಚಿತ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಯುಟ್ಯೂಬರ್ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

Updated on: Oct 31, 2023 | 7:13 AM
ನೆಲಮಂಗಲ ಅ.31: ಅಪರಿಚಿತ ವಾಹನ ಮತ್ತು ಕಾರಿನ (Car) ನಡುವೆ ಅಪಘಾತ (Accident) ಸಂಭವಿಸಿ ಯುಟ್ಯೂಬರ್ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಸ್ವಿಫ್ಟ್ ಕಾರಿನಲ್ಲಿದ್ದ ಯುಟ್ಯೂಬರ್ ವೆಂಕಟೇಶ್ (43) ಮೃತ ದುರ್ದೈವಿ. ಕಾರು ಬೆಂಗಳೂರಿನಿಂದ ತುಮಕೂರು ಕಡೆ ಹೋಗುತ್ತಿತ್ತು. ಸಂಚಾರಿ ಪೊಲೀಸರು ಅಪರಿಚಿತ ವಾಹನಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,