ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಕಾರು ಅಪಘಾತ, ಯುಟ್ಯೂಬರ್ ಸಾವು

ಅಪರಿಚಿತ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಯುಟ್ಯೂಬರ್​​ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಕಾರು ಅಪಘಾತ, ಯುಟ್ಯೂಬರ್ ಸಾವು
ಪ್ರಾತಿನಿಧಿಕ ಚಿತ್ರ
Edited By: ವಿವೇಕ ಬಿರಾದಾರ

Updated on: Oct 31, 2023 | 7:13 AM

ನೆಲಮಂಗಲ ಅ.31: ಅಪರಿಚಿತ ವಾಹನ ಮತ್ತು ಕಾರಿನ (Car) ನಡುವೆ ಅಪಘಾತ (Accident) ಸಂಭವಿಸಿ ಯುಟ್ಯೂಬರ್​​ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಸ್ವಿಫ್ಟ್​​ ಕಾರಿನಲ್ಲಿದ್ದ ಯುಟ್ಯೂಬರ್​​​​ ವೆಂಕಟೇಶ್ (43) ಮೃತ ದುರ್ದೈವಿ. ಕಾರು ಬೆಂಗಳೂರಿನಿಂದ ತುಮಕೂರು ಕಡೆ ಹೋಗುತ್ತಿತ್ತು. ಸಂಚಾರಿ ಪೊಲೀಸರು ಅಪರಿಚಿತ ವಾಹನಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Loading...
Unable to load recommendations.
Follow Us