Lok Sabha Election 2024: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳ ಸ್ಥಾಪನೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 23, 2024 | 7:18 PM

ಲೋಕಸಭಾ ಚುನಾವಣಾ ಕಣ ಜೋರಾಗಿದ್ದು, ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ(Voting) ನಡೆಯಲಿದ್ದು, ಏ.26 ರಂದು ಮೊದಲ ಹಂತ ಮತ್ತು ಮೇ.07 ರಂದು ಎರಡನೇ ಹಂತದಲ್ಲಿ ನಡೆಯಲಿದೆ. ಈ ಮಧ್ಯೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.

Lok Sabha Election 2024: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳ ಸ್ಥಾಪನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳ ಸ್ಥಾಪನೆ
Follow us on

ಬೆಂಗಳೂರು ಗ್ರಾಮಾಂತರ, ಏ.23: ಲೋಕಸಭಾ ಚುನಾವಣಾ(Lok Sabha Election) ಕಾವು ಜೋರಾಗಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿವೆ. ಇನ್ನು ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ(Voting) ನಡೆಯಲಿದ್ದು, ಏ.26 ರಂದು ಮೊದಲ ಹಂತ ಮತ್ತು ಮೇ.07 ರಂದು ಎರಡನೇ ಹಂತದಲ್ಲಿ ನಡೆಯಲಿದೆ. ಈ ಮಧ್ಯೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಯಲ್ಲಿ 36 ವಿಶೇಷ ಮತಗಟ್ಟೆಗಳ ಸ್ಥಾಪನೆ

ಮತದಾನ ಹೆಚ್ಚಿಸುವ ಸಲುವಾಗಿ ಹಾಗೂ ಮತದಾನವನ್ನು ಹಬ್ಬದ ರೀತಿಯಲ್ಲಿ ಆಚರಿಸುವ ಸಲುವಾಗಿ ಮತದಾರರನ್ನು ಆಕರ್ಷಿಸಲು ವಿಶೇಷ ಮತಗಟ್ಟೆಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಸ್ಥಾಪನೆ ಮಾಡಲಾಗಿದೆ.

36 ವಿಶೇಷ ಮತಗಟ್ಟೆಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ 04 ಯುವ ಮತಗಟ್ಟೆಗಳು, 20 ಮಹಿಳಾ ಮತಗಟ್ಟೆಗಳು(ಸಖಿ), ೦4 ವಿಶೇಷ ಚೇತನ ಮತಗಟ್ಟೆಗಳು, 04 ವಿಷಯಾಧಾರಿತ ಮತಗಟ್ಟೆಗಳು , 04 ಮಾದರಿ ಮತಗಟ್ಟೆಗಳು ಸೇರಿ ಒಟ್ಟು 36 ವಿಶೇಷ ಮತಗಟ್ಟೆಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದೆ.

ಇದನ್ನು ಓದಿ:ಮತಪಟ್ಟಿಯಲ್ಲಿರಲಿಲ್ಲ ಲಕ್ಷಾಂತರ ಮಹಿಳೆಯರ ಹೆಸರು, ಭಾರತದ ಮೊದಲ ಲೋಕಸಭಾ ಚುನಾವಣೆ ನಡೆದಿದ್ದು ಹೇಗೆ?

ನೆಲಮಂಗಲ ವಿಧಾನಸಭಾ ಕ್ಷೇತ್ರ

ನೆಲಮಂಗಲ ತಾಲೂಕು ವ್ಯಾಪ್ತಿಯಲ್ಲಿ ಯುವ ಸಿಬ್ಬಂದಿ ನಿರ್ವಹಿಸುವ ಮತಗಟ್ಟೆ ಸಂಖ್ಯೆ. 183 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ. 2 ಅಡೆಪೇಟೆ) ನೆಲಮಂಗಲ.

ಮಹಿಳಾ ಸಿಬ್ಬಂದಿ ನಿರ್ವಹಿಸುವ ಮತಗಟ್ಟೆಗಳು 5; ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಚಿಪುರ ಮತಗಟ್ಟೆ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸೊಂಪುರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸವನಹಳ್ಳಿ, ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆ ಸೋಲೂರು, ಮತಗಟ್ಟೆ ಸರ್ಕಾರಿ ಹಿರಿಯ ಹೊಸ ಪ್ರಾಥಮಿಕ ಶಾಲೆ ಹೊನ್ನೇನಹಳ್ಳಿ.

ವಿಶೇಷ ಚೇತನರ ಮತಗಟ್ಟೆಗಳು 1; ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿ ಮತಗಟ್ಟೆ, ನೆಲಮಂಗಲ ಟೌನ್

ಮಾದರಿ ಮತಗಟ್ಟೆಯನ್ನಾಗಿ ಸರ್ಕಾರಿ1, ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸೋಂಪುರ

ವಿಶೇಷ ಹಾಗೂ ವಿಷಯಾಧಾರಿತ ಮತಗಟ್ಟೆಯನ್ನಾಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿವಗಂಗೆ.

ಜಿಲ್ಲೆಯ ನಾಲ್ಕು ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ ಒಂದೊಂದು ವಿಶೇಷ ವಿಷಯಾಧಾರಿತ ಮತಗಟ್ಟೆ ಸ್ಥಾಪಿಸಲಾಗಿದೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರ

ದಿಂದ ತೋಟಗಾರಿಕೆ, ಪುಷ್ಪ ಕೃಷಿ ವಿಶೇಷ ವಿಷಯಾಧಾರಿತವಾಗಿ ಚಕ್ಕೊತ, ನೀಲಿ ದ್ರಾಕ್ಷಿ ಮತ್ತು ಗುಲಾಬಿ ಹೂವಿನ ಆಕರ್ಷಕ ಮತಗಟ್ಟೆ ತೆರೆಯಲಾಗಿದೆ. ಮತಗಟ್ಟೆ ಸಂಖ್ಯೆ-238 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-1 ಅಣ್ಣೇಶ್ವರ.

ನೆಲಮಂಗಲ ವಿಧಾನಸಭಾ ಕ್ಷೇತ್ರದಿಂದ ಸಾಂಸ್ಕೃತಿಕ ವಿಷಯಾಧಾರಿತವಾದ ಸುಗ್ಗಿ ಹಬ್ಬ,ಎತ್ತಿನ ಬಂಡಿಯ ಆಕರ್ಷಕ ಮತಗಟ್ಟೆ ತೆರೆಯಲಾಗಿದೆ. ಮತಗಟ್ಟೆ ಸಂಖ್ಯೆ-88 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಶಿವಗಂಗೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ

ಇಲ್ಲಿಂದ ರೇಷ್ಮೆ ಸೀರೆ ತಯಾರಿಕೆ ವಿಶೇಷ ವಿಷಯಾಧಾರಿತ ಮತಗಟ್ಟೆ ತೆರೆಯಲಾಗಿದೆ. ಮತಗಟ್ಟೆ ಸಂಖ್ಯೆ-271 ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಕನಸವಾಡಿ.

ಹೊಸಕೋಟೆ ವಿಧಾನಸಭಾ ಕ್ಷೇತ್ರ

ಸಾಂಸ್ಕೃತಿಕ ವಿಷಯಾಧಾರಿತವಾದ ಕರಗ,ಡೈರಿ ಉತ್ಪನ್ನಗಳು ಮತ್ತು ಫಲಪುಷ್ಪ ಅಲಂಕಾರಿಕ ಆಕರ್ಷಕ ಮತಗಟ್ಟೆಯನ್ನು ತೆರೆಯಲಾಗಿದೆ. ಮತಗಟ್ಟೆ ಸಂಖ್ಯೆ-245 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-1, ಮಲ್ಲಸಂದ್ರ ಸಮೇತನಹಳ್ಳಿ ಸೇರಿದಂತೆ ಜಿಲ್ಲೆಯಾದ್ಯಂತ ಒಂದೊಂದು ವಿಶೇಷ ವಿಷಯಾಧಾರಿತ ಮತಗಟ್ಟೆ ಸ್ಥಾಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ