AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದ್ದ ಜಿಲ್ಲಾಧಿಕಾರಿಗೆ ಸ್ಥಳ ತೋರಿಸದೆ ವರ್ಗಾವಣೆ: ಸಚಿವರ ಆಪ್ತ ಕಾರ್ಯದರ್ಶಿ ಪತ್ನಿಗೆ ಒಲಿದ ಡಿಸಿ ಭಾಗ್ಯ

ಅಧಿಕಾರಿಗಳ ವರ್ಗಾವಣೆಯಲ್ಲೇ ರಾಜ್ಯ ಸರ್ಕಾರ ಹಣ ಮಾಡುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪ ಮಾಡಿಕೊಂಡುತ್ತಿವೆ. ಈ ನಡುವೆ ಒಂದು ವರ್ಷ ಎರಡು ತಿಂಗಳಿಗೆ ಜಿಲ್ಲಾಧಿಕಾರಿಯನ್ನ ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಆ ಸ್ಥಾನಕ್ಕೆ ಸಚಿವರ ಆಪ್ತ ಕಾರ್ಯದರ್ಶಿ ಪತ್ನಿಯನ್ನು ತಂದು ಕೂರಿಸಲಾಗಿದೆ. ಈ ಈ ಹಿನ್ನೆಲೆಯಲ್ಲಿ ಸರ್ಕಾರ ನಡೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಇದ್ದ ಜಿಲ್ಲಾಧಿಕಾರಿಗೆ ಸ್ಥಳ ತೋರಿಸದೆ ವರ್ಗಾವಣೆ: ಸಚಿವರ ಆಪ್ತ ಕಾರ್ಯದರ್ಶಿ ಪತ್ನಿಗೆ ಒಲಿದ ಡಿಸಿ ಭಾಗ್ಯ
ಬಸವರಾಜ್, ಅನುರಾಧ
ನವೀನ್ ಕುಮಾರ್ ಟಿ
| Edited By: |

Updated on:Feb 27, 2026 | 5:21 PM

Share

ಬೆಂಗಳೂರು, (ಫೆಬ್ರವರಿ 27): ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಸಿಟಿ ಔಟ್ ಸ್ಕಟ್ಸ್ ನಲ್ಲಿ ಕೆಂಪೇಗೌಡ ಏರ್ಪೋಟ್ ನಿಂದ ಪ್ರಸಿದ್ದಿಯಾಗಿರುವ ಪ್ಯೂಚರ್ ಬೆಂಗಳೂರು (Bengaluru) ಅಂತಲೆ ಕರೆಸಿಕೊಳ್ಳುವ ಜಿಲ್ಲೆ. ಹೀಗಾಗಿ ಜಿಲ್ಲೆಗೆ ಬರಲು ಅಧಿಕಾರಿಗಳು ತುದ್ದಿಗಾಲಲ್ಲಿ ನಿಲ್ಲುತ್ತಿದ್ದು, ಡಿಮ್ಯಾಂಡ್ ಸಹ ಹಚ್ಚಿದೆ. ಇಷ್ಟು ಡಿಮ್ಯಾಂಡ್ ನಡುವೆಯೂ ಸಿಇಒ ಆಗಿ ಎರೆಡೂವರೆ ವರ್ಷದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಅನುರಾಧ ಕೆ ಎನ್ ಡಿಸಿಯಾಗಿ ಮುಂಬಡ್ತಿ ಪಡೆದಿದ್ದರೆ, ಬಂದ ಒಂದು ವರ್ಷಕ್ಕೆ ಜಿಲ್ಲಾಧಿಕಾರಿ ಬಸವರಾಜ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಅಚ್ಚರಿ ಅಂದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗೆ ಸ್ಥಳ ತೋರಿಸದೇ ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಈ ಜಾಗಕ್ಕೆ ಇದೀಗ ಸಚಿವ ಆಪ್ತ ಕಾರ್ಯದರ್ಶಿ ಸಿಇಒ ಆಗಿದ್ದ ಅನುರಾಧ ಅವರನ್ನೇ ಜಿಲ್ಲಾಧಿಕಾರಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಿರುವುದು ಅಚ್ಚರಿ ಮೂಡಿಸಿದೆ.

ಸಚಿವರ ಆಪ್ತ ಕಾರ್ಯದರ್ಶಿಗೆ ಎರಡು ಹುದ್ದೆ

ಹೌದು..ಅಂದಹಾಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತಿ ಸಿಇಒ ಆಗಿ ಕಳೆದ ಎರಡೂವರೆ ವರ್ಷದಿಂದೆ ಕೆ ಎನ್ ಅನುರಾಧ ಅವರು ಅಧಿಕಾರ ವಹಿಸಿಕೊಂಡಿದ್ದರು. ಜೊತೆಗೆ ಕಳೆದ ಒಂದು ವರ್ಷದಿಂದ ಜಿಲ್ಲೆಗೆ ಡಿಸಿಯಾಗಿ ಎ ಬಿ ಬಸವರಾಜ್ ಬಂದಿದ್ದರು. ಡಿಸಿ ಮತ್ತು ಸಿಇಒ ಇಬ್ಬರು ಜಿಲ್ಲೆಯಲ್ಲಿ ಆಕ್ಟೀವ್ ಆಗಿ ಓಡಾಡಿಕೊಂಡು ಕೆಲಸ ಮಾಡುತ್ತಾ ಜನಮನ್ನಣೆ ಗಳಿಸಿದ್ದರು. ಆದ್ರೆ ಇದೀಗ ಡಿಸಿಯಾಗಿ ಬಂದ ಒಂದು ವರ್ಷಕ್ಕೆ ಬಸವರಾಜ್ ಅವರನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ದಿಢೀರ್ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಜೊತೆಗೆ ನೂತನ ಜಿಲ್ಲಾಧಿಕಾರಿಯಾಗಿ ಜಿಲ್ಲೆಯಲ್ಲಿ ಕಳೆದ ಎರೆಡೂವರೆ ವರ್ಷದಿಂದ ಕಾರ್ಯ ನಿರ್ವಹಿಸುತ್ತಿರುವ ಸಿಇಒ ಅನುರಾಧ ಅವರನ್ನ ನೇಮಕ ಮಾಡಲಾಗಿದೆ. ಇನ್ನು ಜಿಲ್ಲಾ ಪಂಚಾಯತಿಯ ಪ್ರಭಾರ ಸಿಇಒ ಆಗಿಯೂ ಅನುರಾಧ ಅವರನ್ನೇ ಮುಂದುವರೆಸಲಾಗಿದೆ. ಅನುರಾಧ ಅವರು ಸಚಿವ ಕೆ.ಹೆಚ್ ಮುನಿಯಪ್ಪ ಅವರ ಆಪ್ತ ಕಾರ್ಯದರ್ಶಿ ಪತ್ನಿಯಾಗಿದ್ದಾರೆ. ಹೀಗಾಗಿ ಅವರಿಗೆ ಈ ಭಾಗ್ಯ ದೊರೆತಿದೆ ಎಂದು ಜಿಲ್ಲೆಯಲ್ಲಿ ಚರ್ಚೆ ಶುರುವಾಗಿದೆ.

ಇದನ್ನೂ ನೋಡಿ: ಮುಂದೆ ಕಾಂಗ್ರೆಸ್ ಸರ್ಕಾರ ಬರೋದು ಕಷ್ಟ! ಡಿನ್ನರ್ ಮೀಟಿಂಗ್ ಬೆನ್ನಲ್ಲೇ ಶಾಸಕ ಬಾಲಕೃಷ್ಣ ಶಾಕಿಂಗ್ ಮಾತು

ಒಂದೇ ವರ್ಷಕ್ಕೆ ಅದು ಸ್ಥಳ ತೋರಿಸದೇ ವರ್ಗಾವಣೆ ಮಾಡಿರುವುದಕ್ಕೆ ಬಸವರಾಜ್ ಶಾಕ್ ಆಗಿದ್ದಾರೆ. ಜೊತೆಗೆ ನೂತನ ಡಿಸಿಯಾಗಿ ನೇಮಕ ಜೊತೆಗೆ ಜಿಲ್ಲಾ ಪಂಚಾಯತಿ ಸಿಇಒ ಆಗಿಯೂ ಅನುರಾಧ ಅವರನ್ನ ಮುಂದುವರೆಸಿರುವುದು ಅಚ್ಚರಿಯಾಗಿದೆ.  ನೂತನ ಡಿಸಿ ಕೆ ಎನ್ ಅನುರಾಧ ಅವರು ಸಚಿವ ಕೆಹೆಚ್ ಮುನಿಯಪ್ಪ ಅವರ ಆಪ್ತ ಕಾರ್ಯದರ್ಶಿ ಪತ್ನಿ ಎನ್ನುವ ಕಾರಣಕ್ಕೆ ಎರೆಡೂವರೆ ವರ್ಷದಿಂದ ಜಿಲ್ಲೆಯಲ್ಲೆ ಉನ್ನತ ಸ್ಥಾನದಲ್ಲಿ ಮುಂದುವರೆಸಿದ್ದು, ಇದೀಗ ಡಿಸಿಯಾಗಿ ಬಡ್ತಿ ಸಹ ನೀಡಿದ್ದಾರೆ ಎನ್ನುವ ಮಾತು ಸಹ ಕೇಳಿ ಬರುತ್ತಿವೆ. ಇನ್ನೂ ಜಿಲ್ಲೆಯಲ್ಲಿ ಈಗಾಗಲೇ ಸಚಿವರ ಕುಟುಂಬಸ್ಥರು ಮತ್ತು ಆಪ್ತರನ್ನ ಮಾತ್ರ ಉನ್ನತ ಹುದ್ದೆಗಳಿಗೆ  ನೇಮಕ ಮಾಡುತ್ತಿದ್ದಾರೆ. ಅನ್ನೋ ಆರೋಪ ಸಹ ಕೇಳಿ ಬರ್ತಿದ್ದು, ಇದೀಗ ಡಿಸಿಯನ್ನ ದಿಢೀರ್ ವರ್ಗಾವಣೆ ಪಿಎಸ್​ ಪತ್ನಿಯನ್ನ ಜಿಲ್ಲಾಧಿಕಾರಿ ಮಾಡಿರುವುದು ಇದಕ್ಕೆ ಪುಷ್ಠಿ ನೀಡಿದಂತಾಗಿದೆ.

ಇನ್ನೂ ಇತ್ತೀಚೆಗಷ್ಟೆ ಅಧಿಕಾರಿಗಳಿಗೆ ಸ್ಥಾನ ತೋರಿಸದೆ ಎತ್ತಂಗಡಿ ಮಾಡುತ್ತಿದ್ದಾರೆ ಎಂದು ಹೈಕೋರ್ಟ್ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಬೆಂಗಳೂರು ಗ್ರಾಮಾಂತರ ಡಿಸಿ ಬಸವರಾಜ್ ಗೆ ಯಾವುದೇ ಸ್ಥಾನ ತೋರಿಸದೆ ವರ್ಗಾವಣೆ ಮಾಡಿರುವುದು ಸರ್ಕಾರದ ನಡೆ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:04 pm, Fri, 27 February 26

Follow Us
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಸತ್ತವರ ಖಾತೆಗೆ ಪಾವತಿಯಾದ ಗೃಹಲಕ್ಷ್ಮೀ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಪಿಸ್ತೂಲ್ ಇಟ್ಟುಕೊಂಡ ಬಂದ ಜೆಡಿಎಸ್ ಕಾರ್ಯಕರ್ತ, ವಿಡಿಯೋ ವೈರಲ್
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ಅನಂತ್​​ ಕುಮಾರ್​​ ಹೆಗಡೆ ಮರಳಿ ರಾಜಕೀಯಕ್ಕೆ? ಶ್ರೀರಾಮುಲು ಹೇಳಿದ್ದಿಷ್ಟು
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ದೆಹಲಿ ಅಬಕಾರಿ ನೀತಿ ಹಗರಣ, ಸಿಬಿಐಗೆ ದೆಹಲಿ ನ್ಯಾಯಾಲಯ ತರಾಟೆ
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಸೋಷಿಯಲ್ ಮೀಡಿಯಾ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತ ಖಡಕ್ ವಾರ್ನಿಂಗ್
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಧನಸ್ಸು ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?