AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್‌ಪೋರ್ಟ್‌ಗೆ ಮಾಟ ಮಂತ್ರ ಕೇಸಿಗೆ ಟ್ವಿಸ್ಟ್: ಸ್ವಯಂ ಘೋಷಿತ ಬಾಬಾ ಅರೆಸ್ಟ್!

ಬೆಂಗಳೂರು ಏರ್ಪೋಟ್ ಆಡಳಿತ ಮಂಡಳಿ ಕಚೇರಿಗೆ ನಿತ್ಯ ಕೊರಿಯರ್ಗಳು ಬರುವುದು ಸಾಮಾನ್ಯ. ಆದ್ರೆ, ಕಳೆದೊಂದು ತಿಂಗಳ ಹಿಂದೆ ಕೆಐಎಎಲ್ ಆಡಳಿತ ಕಚೇರಿಯ ವಿಳಾಸಕ್ಕೆ ಪೋಸ್ಟ್ ಆಫೀಸ್ ಮೂಲಕ ಪಾರ್ಸೆಲ್ ಒಂದು ಬಂದಿತ್ತು. ವಿಳಾಸ ಸರಿಯಾಗಿದ್ದರಿಂದ ಸಿಬ್ಬಂದಿ ಕುತೂಹಲದಿಂದ ಅದನ್ನು ತೆರೆದಿದ್ದಾರೆ. ಆದರೆ ಬಾಕ್ಸ್ ಓಪನ್ ಮಾಡುತ್ತಿದ್ದಂತೆ ಒಂದು ನಿಗೂಢ ಪಾರ್ಸೆಲ್ ಇಡೀ ವಿಮಾನ ನಿಲ್ದಾಣದ ಸಿಬ್ಬಂದಿಯನ್ನು ಬೆಚ್ಚಿಬೀಳಿಸಿತ್ತು. ಇದೀಗ ಈ ಪಾರ್ಸಲ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಇದರ ಹಿಂದೆ ಸ್ವಯಂ ಘೋಷಿತ ಬಾಬಾ ಇರುವುದು ಬೆಳಕಿಗೆ ಬಂದಿದೆ.

ಬೆಂಗಳೂರು ಏರ್‌ಪೋರ್ಟ್‌ಗೆ ಮಾಟ ಮಂತ್ರ ಕೇಸಿಗೆ ಟ್ವಿಸ್ಟ್: ಸ್ವಯಂ ಘೋಷಿತ ಬಾಬಾ ಅರೆಸ್ಟ್!
ಬೆಂಗಳೂರು ವಿಮಾನ ನಿಲ್ದಾಣ
ನವೀನ್ ಕುಮಾರ್ ಟಿ
| Edited By: |

Updated on:Mar 31, 2026 | 7:47 PM

Share

ಬೆಂಗಳೂರು, (ಮಾರ್ಚ್ 31): ಕೆಐಎಎಲ್ (kempegowda international airport bengaluru) ಆಡಳಿತ ಕಚೇರಿಯ ವಿಳಾಸಕ್ಕೆ ಪೋಸ್ಟ್ ಆಫೀಸ್ ಮೂಲಕ ಪಾರ್ಸೆಲ್ ಒಂದು ಬಂದಿತ್ತು. ವಿಳಾಸ ಸರಿಯಾಗಿದ್ದರಿಂದ ಸಿಬ್ಬಂದಿ ಕುತೂಹಲದಿಂದ ಅದನ್ನು ತೆರೆದಿದ್ದಾರೆ. ಆದರೆ ಬಾಕ್ಸ್‌ನೊಳಗೆ ಇದ್ದದ್ದು ಯಾವುದೋ ಬೆಲೆಬಾಳುವ ವಸ್ತುವಲ್ಲ, ಬದಲಾಗಿ ಭೀತಿ ಹುಟ್ಟಿಸುವ ಮಾಟ-ಮಂತ್ರದ ಸಾಮಗ್ರಿಗಳು ಇದ್ದವು. ಇದರಿಂದ ಸಿಬ್ಬಂದಿ ಬೆಚ್ಚಿಬಿದ್ದಿದ್ದು, ಪೂಜೆ ಮಾಡಿ ಪಾರ್ಸೆಲ್ ಮಾಡಲಾಗಿದ್ದ ಈ ವಸ್ತುಗಳನ್ನು ಕಂಡು ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದರು. ಇದೀಗ ಈ ಪಾರ್ಸೆಲ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಈ ಬ್ಲ್ಯಾಕ್ ಮಾಜಿಕ್ ಪಾರ್ಸೆಲ್ ​ ಹಿಂದಿನ ರೂವಾರಿ ಸ್ವಯಂ ಘೋಷಿತ ಬಾಬಾನನ್ನು ಬಂಧಿಸಲಾಗಿದೆ.

ಪಾರ್ಸೆಲ್ ಬಂದಿದ್ದ ಬಾಕ್ಸ್​ ಸಂಬಂಧ ಕೆಐಎಎಲ್ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಕಾರ್ಯಚರಣೆ ನಡೆಸಿ ಪಾರ್ಸೆಲ್ ಕಳುಹಿಸಿದ್ದ ವ್ಯಕ್ತಿಯನ್ನು ಹೈದರಾಬಾದ್​​ ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮಾಟ ಮಂತ್ರ ಮಾಡಿಸಿದ ರೀತಿಯ ಪಾರ್ಸೆಲ್ ಕಳುಹಿಸಿದ್ದು ನ್ಯೂಜಿಲೆಂಡ್ ಸುಬಾಷ್ ಜೈ ಅಜೀಜ್ ಎಂದು ಗುರುತಿಸಲಾಗಿದೆ. ಇನ್ನು ವಿಚಾರಣೆ ನಡೆಸಿದಾಗ ತಾನೊಬ್ಬ ದೇವಮಾನವ ಎಂದು ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನ ಏರ್​ಪೋರ್ಟ್​ಗೆ ಬಂತು ಬೆತ್ತಲೆ ಫೋಟೋಗಳ ಪಾರ್ಸೆಲ್! ವಾಮಾಚಾರದ ಬಾಕ್ಸ್​ ನೋಡಿ ಸಿಬ್ಬಂದಿ ಶಾಕ್

ವಿಮಾನ ದುರಂತ ಸಂಭವಿಸದಿರಲಿ ಎಂದು ಪೂಜೆ

ಹೈದರಾಬಾದ್​​ನಲ್ಲಿ ಸಿಕ್ಕ ಸುಬಾಷ್ ಜೈ ಅಜೀಜ್ ನನ್ನು ಹಿಡಿದು ಬೆಂಗಳೂರು ಕರೆತಂದು ವಿಚಾರಣೆ ನಡೆಸಿದಾಗ ತಾನೊಬ್ಬ ಬಾಬಾ ಎಂದು ಹೇಳಿಕೊಂಡಿದ್ದಾನೆ. ಅಲ್ಲದೇ ಬ್ಲ್ಯಾಕ್ ಮಾಜಿಕ್ ರೀತಿಯ ಪಾರ್ಸೆಲ್ ಏಕೆ ಕಳುಹಿಸಿದ್ದು ಎಂದು ಕೇಳಿದಾಗ ವಿಮಾನ ದುರಂತ ಸಂಭವಿಸದಿರಲಿ ಎಂದು ಪೂಜೆ ಮಾಡಿ ಕಳುಹಿಸಿರುವುದಾಗಿ ಹೇಳಿದ್ದಾನೆ.

ಈ ಹಿಂದೆ ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತ ಬೆಂಗಳೂರಿನಲ್ಲಿ ನಡೆಯದಿರಲಿ ಎಂದು ಪೂಜೆ ಮಾಡಿದ್ದು, ತಾನು ಬಳಸಿದ್ದ ಹಾರ, ಅರಿಶಿನ ಕುಂಕುಮ ಹಾಗೂ ಪೋಟೋಗಳನ್ನ ನೀಡಿದ್ದಾಗಿ ಹೇಳಿದ್ದಾನೆ. ಜೊತೆಗೆ ನಾನೊಬ್ಬ ದೇವ ಮಾನವನಾಗಿದ್ದು, ನಾನು ಹಾಕಿದ ಹಾರವನ್ನ ಒಳ್ಳೆ ಕೆಲಸಗಳಿಗೆ ನೀಡುತ್ತೇನೆ. ಎಲ್ಲೆಂದರಲ್ಲಿ ಬಿಸಾಕಲ್ಲ ಎಂದಿದ್ದಾನೆ.

ಯುಪಿಯಿಂದ ಬೆಂಗಳೂರಿಗೆ ಬಂದಿದ್ದ

ಈ ಸುಬಾಷ್ ಜೈ ಅಜೀಜ್ ಕಳೆದ ತಿಂಗಳು ಉತ್ತರ ಪ್ರದೇಶಕ್ಕೆ ಬಂದಿದ್ದು, ಅಲ್ಲಿಂದ ಬೆಂಗಳೂರಿನ ಕೆಂಪೇಗೌಡ ಏರ್ಪೋಟ್ ಗೆ ಆಗಮನಿಸಿದ್ದ. ಈ ವೇಳೆ ತನ್ನ ಕೊರಳಲ್ಲಿದ್ದ ಹಾರ, ಅರಿಶಿನ ಕುಂಕುಮ, ತಿನ್ನಲ್ಲು ತೆಗೆದುಕೊಂಡಿದ್ದ ಕಬ್ಬು, ಕೆಲ ದೇವರ ಪೋಟೋಗಳನ್ನೆಲ್ಲ ಒಂದು ಬಾಕ್ಸ್ ನಲ್ಲಿಟ್ಟು ಜೊತೆಗೆ ಶ್ರೀಲಂಕಾ ಭಾಷೆಯಲ್ಲಿ ಪತ್ರವನ್ನ ಬರೆದು ಬಾಕ್ಸ್​​ನಲ್ಲಿ ಹಾಕಿದ್ದ. ಬಳಿಕ ಬಾಕ್ಸ್ ಹಿಡಿದು ಕೆಂಪೇಗೌಡ ಏರ್ಪೋಟ್ ನಲ್ಲಿರುವ ಪೋಸ್ಟ್​​ ಆಫೀಸ್​​ಗೆ ತೆರಳಿ ಕೆಐಎಎಲ್ ಸಿಇಓ ಹೆಸರಿಗೆ ಕೋರಿಯರ್ ಮಾಡಿ ಹೋಗಿದ್ದ. ಬಳಿಕ ಪೋಸ್ಟ್ ಆಫೀಸ್ ಸಿಬ್ಬಂದಿ ಕೆಐಎಎಲ್ ಕಚೇರಿಗೆ ತೆರಳಿ ಬಾಕ್ಸ್ ಡೆಲೆವರಿ ಮಾಡಿದ್ದು, ಆ ವೇಳೆ ಬಾಕ್ಸ್ ಓಪನ್ ಮಾಡಿದಾಗ ಎಲ್ಲಾ ವಸ್ತು ಮಾಟ ಮಂತ್ರಕ್ಕೆ ಬಳಸುವ ವಸ್ತುಗಳು ಪತ್ತೆಯಾಗಿದ್ದು, ಇದನ್ನು ಕಂಡು ಸಿಬ್ಬಂದಿ ಶಾಕ್ ಆಗಿದ್ದರು. ಈ ಸಂಬಂಧ ಕೆಂಪೇಗೌಡ ಏರ್ಪೋಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದರು.

ಒಟ್ಟಾರೆ ಹೈ ಪೈ ಟೆಕ್ನಾಲಜಿ ಮೂಲಕ ದೇಶದಲ್ಲೇ ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣಕ್ಕೆ ಬ್ಲಾಕ್ ಮ್ಯಾಜಿಕ್ ರೀತಿಯ ವಸ್ತು ಕಳುಹಿಸಿ ಎಲ್ಲರು ಆತಂಕಗೊಳ್ಳುವಂತೆ ಮಾಡಿದ್ದು, ಪಾರ್ಸೆಲ್ ಕಳಿಸಿದ್ದ ಸ್ವಯಂ ಘೋಷಿತ ಬಾಬಾ ಕಂಬಿ ಎಣಿಸುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Tue, 31 March 26

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ