ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟಿದ್ದ ಕೂಲಿ ಕಾರ್ಮಿಕ ರಸ್ತೆ ಗುಂಡಿಗೆ ಬಲಿ!

ಬೆಂಗಳೂರಿನ ರಸ್ತೆ ಗುಂಡಿಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿವೆ, ಈಗೆ ಬೆಂಗಳೂರು ಮಾತ್ರವಲ್ಲ ರಸ್ತೆ ಗುಂಡಿ ಸಮಸ್ಯೆ ಬೆಂಗಳೂರಿನ ಸುತ್ತಲೂ ವ್ಯಾಪಿಸಿಬಿಟ್ಟಿದೆ.

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟಿದ್ದ ಕೂಲಿ ಕಾರ್ಮಿಕ ರಸ್ತೆ ಗುಂಡಿಗೆ ಬಲಿ!
ಸಾಂಕೇತಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 23, 2022 | 7:36 PM

ಬೆಂಗಳೂರು: ಬೆಂಗಳೂರಿನ‌ ರಸ್ತೆ ಗುಂಡಿಗಳಿಗೆ ಇತ್ತೀಚೆಗೆ ಹಲವು ಅವಘಡಗಳು ನಡೆಯುತ್ತಿವೆ. ಬೆಂಗಳೂರು ಅಷ್ಟೆ ಅಲ್ಲ ಈ ರಸ್ತೆ ಗುಂಡಿ ಸಮಸ್ಯೆ ಹೊರವಲಯಕ್ಕೂ ವ್ಯಾಪಿಸಿದ್ದು, ದೀಪಾವಳಿ ಹಿನ್ನಲೆ ಕೆಲಸ ಮುಗಿಸಿ ಖುಷಿ ಖುಷಿಯಾಗಿ ಊರಿನತ್ತ ಬೈಕ್ ತಗೆದುಕೊಂಡು ಹೊರಟಿದ್ದ ಕೂಲಿ ಕಾರ್ಮಿಕ, ಗುಂಡಿಯೊಂದನ್ನ ತಪ್ಪಿಸಲು ಹೋಗಿ ಕ್ಯಾಂಟರ್ ಲಾರಿ ಚಕ್ರಕ್ಕೆ ಸಿಲುಕಿ ಅಸುನೀಗಿದ್ದಾನೆ.

ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿನ ಸರ್ವಿಸ್ ರಸ್ತೆ ಗುಂಡಿಯನ್ನ ತಪ್ಪಿಸಲು ಹೋಗಿ ಬೈಕ್ ಸವಾರ 45 ವರ್ಷದ ತಿಪ್ಪೆಸ್ವಾಮಿ ಲಾರಿ ಚಕ್ರಕ್ಕೆ ಸಿಲುಕಿ ದಾರೂಣ ಸಾವು ಕಂಡಿದ್ದಾನೆ. ಪಾವಗಡ ಮೂಲದ ತಿಪ್ಪೆಸ್ವಾಮಿ ಕುಟುಂಬ ನಿರ್ವಹಣೆಗಾಗಿ ಬೆಂಗಳೂರು ಉತ್ತರ ತಾಲೂಕಿನ ಮಾದಾವರದಲ್ಲಿ ಕೂಲಿ ಮಾಡಿ ವಾಸಿಸುತ್ತಿದ್ದರು. ದೀಪಾವಳಿ ಹಬ್ಬದ ಹಿನ್ನೆಲೆ ಮನೆಯವರಿಗೆ ಕಾಲ್ ಮಾಡಿ ಸ್ವಂತ ಊರು ಪಾವಗಡಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದರು.

ಊರಿಗೆ ಹೋಗುವ ಸಂಧರ್ಭದಲ್ಲಿ ಬೆಂಗಳೂರು – ತುಮಕೂರು ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಮಾದಾವರ ಬಳಿ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಬೈಕ್ ಸಮೇತ ಕೆಳಗೆ ಬಿದ್ದಿದ್ದಾನೆ. ಪರಿಣಾಮ ಹಿಂದುಗಡೆ ಬರುತ್ತಿದ್ದ ಕಂಟೈನರ್ ಲಾರಿ ಹರಿದು ತಲೆಗೆ ಹಾಕಿದ್ದ ಹೆಲ್ಮೆಟ್ ಸಮೇತವಾಗಿ ತಲೆ ನುಜ್ಜುಗುಜ್ಜಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟೋಲ್ ಸಂಸ್ಥೆಗಳು, ಸರ್ಕಾರಗಳ ಜನರಿಂದ ಯಾವ ಯಾವ ಮೂಲಗಳಲ್ಲಿ ಹಣ ವಸೂಲು ಮಾಡಬೇಕು ಅನ್ನೋದರ ಬಗ್ಗೆ ಮಾತ್ರ ಯೋಚನೆ ಮಾಡ್ತಾರೆ ಹೊರತು, ಜನರಿಗೆ ಸೌಲಭ್ಯಗಳ ವಿತರಣೆ ಬಗ್ಗೆ ಒಂದು ಸಹ ಯೋಚನೆ ಸಹ ಮಾಡೋದಿಲ್ಲ. ಬೆಂಗಳೂರು ನಗರದ ಸುತ್ತೆಲ್ಲ ರಸ್ತೆಗುಂಡಿ ಹೆಚ್ಚಿರುವುದರಿಂದ ಸರ್ಕಾರ ನೇರವಾಗಿ ಬೈಕ್ ಸವಾರರ ಜೀವನದಲ್ಲಿ ಆಟವಾಡುತ್ತಿದೆ. ಕಾರಿನಲ್ಲಿ ಓಡಾಡೋ ಉಳ್ಳವರಿಗೆ ಈ ರಸ್ತೆ ಗುಂಡಿಗಳು ಕಾಣಿಸೋದಿಲ್ಲ, ಸರ್ಕಾರಕ್ಕೆ ತನ್ನ ಬಡವರ ಜೀವದ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ, ಹೀಗಿರುವಾಗ ಈ ಸಾವಿಗೆ ಯಾರು ಹೊಣೆ ಎಂದು ಸ್ಥಳೀಯರು ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಸದ್ಯ ಘಟನೆಗೆ ಸಂಬಂಧಿಸಿದಂತೆ ಚಾಲಕ ಲಾರಿ ಸಮೇತ ನೆಲಮಂಗಲ ಸಂಚಾರಿ ಠಾಣೆಗೆ ಖುದ್ದು ಹಾಜರಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅದೇನೇ ಆಗ್ಲಿ ತನ್ನದಲ್ಲದ ತಪ್ಪಿಗೆ ದೀಪಾವಳಿ ಹಬ್ಬದ ಖುಷಿಯಲ್ಲಿ ಮನೆ ಸೇರಬೇಕಾದ ವ್ಯಕ್ತಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೃತಪಟ್ಟಿರುವುದು ದುರದೃಷ್ವವೇ ಸರಿ.

ವಿನಾಯಕ್ ಗುರವ್ ಟಿವಿ9 ನೆಲಮಂಗಲ

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು