ನೆಲಮಂಗಲ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಕ್ಕೆ ಮನೆಯ ಕಾಂಪೌಂಡ್ ಧ್ವಂಸ ಮಾಡಿಸಿದ ಬಿಜೆಪಿ ಮುಖಂಡ

| Updated By: ವಿವೇಕ ಬಿರಾದಾರ

Updated on: Mar 19, 2023 | 2:47 PM

ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದಕ್ಕೆ ಬಿಜೆಪಿ ಮುಖಂಡ, ಕಾಂಗ್ರೆಸ್​ ಕಾರ್ಯಕರ್ತನ ​ಮನೆ ಕಾಂಪೌಂಡ್​ ಧ್ವಂಸಗೊಳಿಸಿ, ಪ್ರಶ್ನಿಸಿದ ಮಹಿಳೆಗೆ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ.

ನೆಲಮಂಗಲ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಕ್ಕೆ ಮನೆಯ ಕಾಂಪೌಂಡ್ ಧ್ವಂಸ ಮಾಡಿಸಿದ ಬಿಜೆಪಿ ಮುಖಂಡ
ಕಂಪೌಂಡ್​ ಧ್ವಂಸ, ಮಹಿಳೆ ಮೇಲೆ ಹಲ್ಲೆ
Follow us on

ನೆಲಮಂಗಲ: ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಹೆಚ್ಚುತ್ತಿದೆ. ಬಿಜೆಪಿಯ (BJP) ಅನೇಕ ಮುಖಂಡರು ಪಕ್ಷ ತೊರೆದು ಕಾಂಗ್ರೆಸ್ (Congress)​ ಸೇರಿದ್ದಾರೆ ಮತ್ತು ಸೇರುತ್ತಿದ್ದಾರೆ. ಹೀಗೆ ನೆಲಮಂಗಲದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದಕ್ಕೆ ಬಿಜೆಪಿ ಮುಖಂಡ (BJP Leader), ಕಾಂಗ್ರೆಸ್​ ಕಾರ್ಯಕರ್ತನ ​ಮನೆ ಕಾಂಪೌಂಡ್​ ಧ್ವಂಸಗೊಳಿದ್ದಾನೆ. ಅಲ್ಲದೆ ಇದನ್ನು ಕಾರ್ಯಕರ್ತನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ. ನವೀನ್ ಎಂಬುವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದರಿಂದ ಕೋಪಗೊಂಡ ​ಮಾಚೋಹಳ್ಳಿ ಬಿಜೆಪಿ ಮುಖಂಡ, ಜಿಲ್ಲಾ ಪಂಚಾಯತ್​ ಮಾಜಿ ಸದಸ್ಯ ಉಮೇಶ್,​ ಜೆಸಿಬಿ ಮೂಲಕ ನವೀನ್ ಅವರ ಮನೆಯ ಕಂಪೌಂಡ್ ಒಡೆದು ಹಾಕಿದ್ದಾರೆ.

ಇದನ್ನು ನವೀನ್​ ತಾಯಿ ರಂಗಮ್ಮ ಪ್ರಶ್ನಿಸಿದ್ದಕ್ಕೆ ಬಿಜೆಪಿ ಮುಖಂಡ ಉಮೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ನವೀನ್ 3 ದಿನಗಳ ಹಿಂದೆ ಕಾಂಪೌಂಡ್​ ನಿರ್ಮಿಸಿದ್ದರು. ಆದರೆ ಈಗ ಕಂಪೌಂಡ್​ ನೆಲಸಮವಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಜೋರಾಯ್ತು ಪುತ್ಥಳಿ ಪಾಲಿಟಿಕ್ಸ್; ಮರಾಠಾ ಆಯ್ತು ಈಗ ಲಿಂಗಾಯತ ಮತಗಳ ಓಲೈಕೆಗೆ ಮುನ್ನುಡಿ ಬರೆದ ಬಿಜೆಪಿ ಸರ್ಕಾರ

ಬ್ಯಾನರ್​ ಕಟ್ಟುವ ವಿಚಾರಕ್ಕೆ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ಮಾ.17 ರಂದು ಬ್ಯಾನರ್​ ಕಟ್ಟುವ ವಿಚಾರಕ್ಕೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವಿಜಯನಗರದ ಎಂ.ಸಿ.ಲೇಔಟ್‌ನ ಬಿಜಿಎಸ್ ಆಟದ ಮೈದಾನದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿತ್ತು. ಕಾಂಗ್ರೆಸ್‌ನ ಮಾಜಿ ಶಾಸಕ ಪ್ರಿಯಾಕೃಷ್ಣ ಬೆಂಬಲಿಗರಿಂದ ಸಚಿವ ಸೋಮಣ್ಣ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪ ಮಾಡಲಾಗಿತ್ತು.

ಮಾರಾಮಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದ್ದು, ವಿಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರ್ಚ್ 19ರಂದು ಕಾಂಗ್ರೆಸ್ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ ಕಾಂಗ್ರೆಸ್​, ಪಕ್ಷದ ಕಾರ್ಯಕ್ರಮವನ್ನು ಹೊರತುಪಡಿಸಿ, ಬೇರೆ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವೇಳೆ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದು ಮಾರಾಮಾರಿ ನಡೆದಿದೆ ಎನ್ನಲಾಗಿದೆ.

3 ಪ್ರತ್ಯೇಕ ಪ್ರಕರಣ ದಾಖಲು

ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್​ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.  ಘಟನೆಯಲ್ಲಿ ಇಬ್ಬರು ಪೊಲೀಸ್​​ ಸಿಬ್ಬಂದಿ ಗಾಯಗೊಂಡಿದ್ದರು. ಗಾಯಗೊಂಡ ಹೆಡ್ ​​ಕಾನ್ಸ್ ಟೇಬಲ್​ ಹೆಚ್ ಸಿ ವರದರಾಜು ದೂರು ನೀಡಿದ್ದರು. ವರದರಾಜು ದೂರಿನ ಹಿನ್ನಲೆ 36 ಮಂದಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ದ ಎಫ್​ಐಆರ್ ದಾಖಲಾಗಿತ್ತು. ಹಾಗೆ ಕಾಂಗ್ರೆಸ್ ಕಾರ್ಯಕರ್ತೆ ಪ್ರೇಮಲತಾ ಹಾಗೂ ಬಿಜೆಪಿಯ ರಮ್ಯ ಎಂಬುವವರು ಕೂಡ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ