ಬೆಂಗಳೂರು: ಶಾಸಕ ಎಸ್.ಆರ್. ವಿಶ್ವನಾಥ್ (BJP MLA SR Vishwanath) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷರಾಗಿ (BDA chairman) ಲಾಭದಾಯಕ ಹುದ್ದೆ ಹೊಂದಿದ್ದು, ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಈ ಹಿಂದೆಯೇ ಸಲ್ಲಿಸಲಾಗಿತ್ತು. ವಕೀಲ ಎ.ಎಸ್.ಹರೀಶ್ ಎಂಬುವವರು ಈ ಪಿಐಎಲ್ ಸಲ್ಲಿಸಿದ್ದರು. ಶಾಸಕರು ಲಾಭದಾಯಕ ಹುದ್ದೆ ಹೊಂದುವಂತಿಲ್ಲ. ಆದರೂ ಶಾಸಕರಾಗಿ (BJP MLA), ಬಿಡಿಎ ಅಧ್ಯಕ್ಷರಾಗಿ ವೇತನ ಪಡೆಯುತ್ತಿದ್ದಾರೆ. ಅವರನ್ನು ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ. ಈ ಬಗ್ಗೆ ನಿರ್ದೇಶನ ನೀಡುವಂತೆ ಎ.ಎಸ್.ಹರೀಶ್ ಹೈಕೋರ್ಟ್ಗೆ (Karnataka High court) ಮನವಿ ಮಾಡಿದ್ದರು.
ಅರ್ಜಿದಾರರ ಪರ ವಕೀಲ ಪ್ರಿನ್ಸ್ ಐಸಾಕ್ ಮನವಿ ಮಾಡಿದ್ದಾರೆ. ಇಂದು ಈ ಅರ್ಜಿಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠವು ರಾಜ್ಯ ಸರ್ಕಾರ, ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ಗೆ ನೋಟಿಸ್ ಜಾರಿಗೊಳಿಸಿದೆ.
ಸಮನ್ಸ್ ಗೆ ಪ್ರತಿಕ್ರಿಯಿಸದ ಬೇಳೂರು ರಾಘವೇಂದ್ರ ಶೆಟ್ಟಿ, ಕರ್ನಾಟಕ ಕರಕುಶಲ ನಿಗಮದ ಕಚೇರಿ ಬಾಗಿಲಿಗೆ ನೋಟಿಸ್ ಅಂಟಿಸಿದ ಶಿರಸಿ ಪೊಲೀಸರು
ಬೆಂಗಳೂರು: ಕರ್ನಾಟಕ ಕರಕುಶಲ ನಿಗಮ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಾಗಿದ್ದು 4 ಬಾರಿ ಸಮನ್ಸ್ ಜಾರಿಯಾದರೂ ಕೋರ್ಟ್ಗೆ ಹಾಜರಾಗದ ಕಾರಣ ಶಿರಸಿ ಪೊಲೀಸರು ಬೇಳೂರು ರಾಘವೇಂದ್ರ ಶೆಟ್ಟಿ ಅವರ ಸರ್ಕಾರಿ ಕಚೇರಿ ಮುಂದೆ ನೋಟಿಸ್ ಅಂಟಿಸಿದ್ದಾರೆ.
ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ವಿರುದ್ಧ ಶಿರಸಿ ಕೋರ್ಟ್ ನಿಂದಾ ಚೆಕ್ ಬೌನ್ಸ್ ಕೇಸ್ ದಾಖಲಾಗಿ, ಕೋರ್ಟ್ ನಲ್ಲಿ ಸಿಸಿ ನಂಬರ್ ಬಂದು, 4 ಬಾರಿ ಸಮನ್ಸ್ ಜಾರಿಯಾಗಿದೆ. ಆದ್ರೆ ಅದನ್ನು ತೆಗೆದುಕೊಳ್ಳದೆ ಇದ್ದದ್ದರಿಂದ ಶಿರಸಿ ಪೊಲೀಸರು ನೆನ್ನೆ ಸರ್ಕಾರಿ ಕಚೇರಿಯ, ಅಂದರೆ ನಿಗಮದ ಬೇಳೂರು ರಾಘವೇಂದ್ರ ಶೆಟ್ಟಿ ಅವರ ಚೇಂಬರ್ ಮುಂದೆ ನೋಟಿಸ್ ಅಂಟಿಸಿ ಮಹಜರು ಮಾಡಿಕೊಂಡು ಹೋಗಿದ್ದಾರೆ. ಬೇಳೂರು ರಾಘವೇಂದ್ರ ಶೆಟ್ಟಿ ಅವರ ವೈಯಕ್ತಿಕ ಕೆಲಸದ ಪ್ರಭಾವ ಸರ್ಕಾರಿ ಕಚೇರಿಯ ಮೇಲೆ ಕೆಟ್ಟದಾಗಿ ಚಿತ್ರಿಸಿದೆ ಎಂದು ಕೆಲ ಅಧಿಕಾರಿಗಳು ಅಸಮಾಧಾನ ಹೊರ ಹಾಕಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:39 pm, Thu, 26 May 22