ಹೊಸಕೋಟೆಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಾಂಗ್ರೆಸ್ ವಿಜಯೋತ್ಸವ: ಬಿಜೆಪಿ ಕಾರ್ಯಕರ್ತನ ಹತ್ಯೆ, ಓರ್ವನ ಬಂಧನ

ಹೊಸಕೋಟೆಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬನನ್ನು ಹತ್ಯೆ ಮಾಡಿರುವ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಶಾಕಿಂಗ್ ಅಂದರೆ ಕೊಲೆ ಮಾಡಿದವನು ಸಂಬಂಧಿಕ ಎಂದು ತಿಳಿದುಬಂದಿದೆ.

ಹೊಸಕೋಟೆಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಾಂಗ್ರೆಸ್ ವಿಜಯೋತ್ಸವ: ಬಿಜೆಪಿ ಕಾರ್ಯಕರ್ತನ ಹತ್ಯೆ, ಓರ್ವನ ಬಂಧನ
ಪ್ರಾತಿನಿಧಿಕ ಚಿತ್ರ
Follow us
ರಮೇಶ್ ಬಿ. ಜವಳಗೇರಾ
|

Updated on: May 16, 2023 | 10:13 AM

ಬೆಂಗಳೂರು: ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದೆ. ಬೆಂಗಳೂರು ಗ್ರಾಮಾತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಡಿ.ಶೆಟ್ಟಿಹಳ್ಳಿಯಲ್ಲಿ ಕಾಂಗ್ರೆಸ್‌ ವಿಜಯೋತ್ಸವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ (55) ಎನ್ನುವವರನ್ನು ಶನಿವಾರ ರಾತ್ರಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಸಂಬಂಧ ಇದೀಗ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಕೊಲೆಯಾದ ಕೃಷ್ಣಪ್ಪನ ಸೋದರಳಿಯ ಆದಿತ್ಯ (21) ಎನ್ನುವಾತನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸಿದ್ದಾರೆ.

ಇದನ್ನೂ ಓದಿ: ವೋಟ್ ಹಾಕಿಲ್ಲವೆಂದು ಅಣ್ಣ ತಮ್ಮಂದಿರ ನಡುವೆ ಕಿರಿಕ್; ದೊಡ್ಡಪ್ಪನನ್ನೇ ಕೊಲೆ ಮಾಡಿದ ಮಗ

ಪೊಲೀಸ್ ಮೂಲಗಳ ಪ್ರಕಾರ, ಶರತ್ ಬಚ್ಚೇಗೌಡ ವಿಜಯಶಾಲಿ ಎಂದು ಘೋಷಿಸಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಪ್ರಾರಂಭಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಎರಡನೇ ಬಾರಿ ಸ್ಪರ್ಧಿಸಿದ್ದ ಶರತ್ ಅವರು ಗೆಲುವು ಸಾಧಿಸಿದ್ದರು. ಈ ಹಿನ್ನೆಲೆಯಲ್ಲಿ ಶರತ್ ಬಚ್ಚೇಗೌಡ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಎಂಟಿಬಿ ನಾಗರಾಜ್ ಅವರ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತ ಕೃಷ್ಣಪ್ಪ (55) ಅವರ ಮನೆ ಮುಂದೆಯೂ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿದ್ದರು. ಈ ವೇಳೆ ತೀವ್ರ ವಾಗ್ವಾದ ಶುರುವಾಗಿದೆ. ಈ ವೇಳೆ ಕೃಷ್ಣಪ್ಪ ಅವರ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಕೂಡಲೇ ಮಧ್ಯೆ ಪ್ರವೇಶಿಸಿದ ಕೃಷ್ಣಪ್ಪ ಅವರ ಪತ್ನಿ ಹಾಗೂ ಮಗ ಬಾಬು ಅವರು, ಕೃಷ್ಣಪ್ಪ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೃಷ್ಣಪ್ಪ ಅವರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ನಿನ್ನೆ ಕೊಲೆ, ಇಂದು ಬೋರ್ಡ್ ಧ್ವಂಸ: ಹೊಸಕೋಟೆಯಲ್ಲಿ ಮುಂದುವರಿದ ದ್ವೇಷ ಗಲಭೆ

ಈ ನಡುವೆ ಆರೋಪಿಗಳನ್ನು ಬಂಧನಕ್ಕೊಳಪಡಿಸುವಂತೆ ಒತ್ತಾಯಿಸಿ ಬಿಜೆಪಿಯ ಹಿರಿಯ ಮುಖಂಡರು ನಂದಗುಡಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು, ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಇನ್ನು ಈ ಘಟನೆ ಸಂಬಂಧ ರಾಜ್ಯ ಬಿಜೆಪಿ ಸಹ ಖಂಡಿಸಿದ್ದು, ಇಂದು ಮೃತ ಕೃಷ್ಣಪ್ಪ ನಿವಾಸಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಎಂಟಿಬಿ ನಾಗರಾಜ್ ಸೇರಿದಂತೆ ಹಲವು ಬಿಜೆಪಿ ನಾಯಕರು ಭೇಟಿ ನೀಡಲಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್