ನಂದಿಬೆಟ್ಟದ ರಸ್ತೆಯಲ್ಲಿ ಪಡ್ಡೆ ಹುಡುಗರ ಬೈಕ್ ವೀಲಿಂಗ್ ಹುಚ್ಚಾಟ: ಓರ್ವ ಸವಾರ ಬಲಿ

Devanahalli News: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊರ್ವ ಯುವಕನಿಗೆ ಗಂಭೀರ ಗಾಯಗಳಾಗಿವೆ.

ನಂದಿಬೆಟ್ಟದ ರಸ್ತೆಯಲ್ಲಿ ಪಡ್ಡೆ ಹುಡುಗರ ಬೈಕ್ ವೀಲಿಂಗ್ ಹುಚ್ಚಾಟ: ಓರ್ವ ಸವಾರ ಬಲಿ
ಬೈಕ್​ ವೀಲಿಂಗ್​ ಮಾಡುತ್ತಿರುವ ಪುಂಡರು
Follow us
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 15, 2023 | 11:36 AM

ಬೆಂಗಳೂರು ಗ್ರಾಮಾಂತರ, ಆ.15: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬೈಕ್​ ವೀಲಿಂಗ್(Bike Wheeling)​ ಪುಂಡರ ಹಾವಳಿ ಮೀತಿ ಮೀರಿದ್ದು, ಅಮಾಯಕ ಜೀವಗಳು ಬಲಿಯಾಗುತ್ತಿದೆ. ಹೌದು, ಜುಲೈ 29 ರಂದು ಹಾಸನ ನಗರದಲ್ಲಿ ವೀಲಿಂಗ್​ ಮಾಡುತ್ತಿದ್ದ ಪುಂಡರು, ಊಟ ಮುಗಿಸಿ ಬೈಕ್​ ಮೇಲೆ ಬರುತ್ತಿದ್ದ ಇಬ್ಬರು ಯುವತಿಯರಿಗೆ ಡಿಕ್ಕಿ ಹೊಡೆದಿದ್ದರು. ಬಳಿಕ ಅವರನ್ನು ಬೆಂಗಳೂರಿನ ನಿಮಾನ್ಸ್​ ಆಸ್ಪತ್ರೆಗೆ ದಾಖಲಿಸಿದ್ದರು. ಇನ್ನೂ ಕೂಡ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅಂತಹುದೇ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಿಲ್ಲೆಯ ದೇವನಹಳ್ಳಿ(Devanahalli) ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್​ಗಳ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಓರ್ವ ಯುವಕ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ.

ವೀಲಿಂಗ್ ಹಾವಳಿಗೆ ಬಲಿಯಾಯ್ತ ಒಂದು ಜೀವ.?

ಇನ್ನು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ನಂದಿಬೆಟ್ಟದ ರಸ್ತೆಯಲ್ಲಿ ವೀಲಿಂಗ್ ಪುಂಡರ ಹಾವಳಿ ಹೆಚ್ಚಿದಂತೆ ಕಾಣುತ್ತಿದ್ದು, ವೀಲಿಂಗ್ ಮಾಡಲು ಹೋಗಿಯೇ ಅಪಘಾತವಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೌದು, ಬೆಂಗಳೂರು ಮೂಲದ ಆದಿಲ್ ( 25 ) ಮೃತ ಸವಾರ. ಆತನ ಮೃತದೇಹವನ್ನು ದೇವನಹಳ್ಳಿಯ ಸರ್ಕಾರಿ ಆಸ್ವತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Viral Video: ಹಿಂದೊಂದು ಮುಂದೊಂದು ಹುಡುಗಿಯರನ್ನು ಕೂರಿಸಿ ಬೈಕ್​​​ ವೀಲಿಂಗ್ ಮಾಡಿದ ಯುವಕ, ಇಲ್ಲಿದೆ ನೋಡಿ ವಿಡಿಯೋ

ಹಾಸನದಲ್ಲಿ ಬೈಕ್​ ವೀಲ್ಹಿಂಗ್ ಹುಚ್ಚಾಟಕ್ಕೆ ಭೀಕರ ಅಪಘಾತವಾಗಿ ಇಬ್ಬರು ಯುವತಿಯರಿಗೆ ಗಂಭೀರ ಗಾಯವಾಗಿತ್ತು

ಹಾಸನ ನಗರದ ಸಾಲಗಾಮೆ ರಸ್ತೆಯ ಸಹ್ಯಾದ್ರಿ ಚಿತ್ರಮಂದಿರ ಬಳಿ ಜುಲೈ 29 ರಂದು ವೀಲ್ಹಿಂಗ್ ಮಾಡುವವರ ಹುಚ್ಚಾಟಕ್ಕೆ ಭೀಕರ ಅಪಘಾತವಾಗಿ ಅಮಾಯಕ ಯುವತಿಯರು ಸಾವು ಬದುಕಿನ ನಡುವೆ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಿತ್ತು. ಹೌದು, ಪುಂಡರು ವೀಲ್ಹಿಂಗ್ ಮಾಡುತ್ತಿದ್ದ ವೇಳೆ ಬೈಕ್​ನಲ್ಲಿ ಬರುತ್ತಿದ್ದ ಭೂಮಿಕಾ ಹಾಗೂ ಸಿಂಚನ ಎಂಬಿಬ್ಬರಿಗೆ ಡಿಕ್ಕಿಯಾಗಿ ಗಂಭೀರ ಗಾಯಗಳಾಗಿತ್ತು. ಬಳಿಕ ಅವರನ್ನು ಬೆಂಗಳೂರಿನ ನಿಮಾನ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇನ್ನು ಈ ವೇಳೆ ವೀಲ್ಹಿಂಗ್ ಪುಂಡರಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ್ದರು. ಹೌದು, ವೀಲ್ಹಿಂಗ್ ಮಾಡಿ ಅಪಘಾತಗೊಳಿಸಿದ ಶಾಕೀರ್ ಹಾಗೂ ಮತ್ತೊರ್ವ ಅಪ್ರಾಪ್ತನಿಗೆ ಸಾರ್ವಜನಿಕರು ಬಟ್ಟೆ ಬಚ್ಚಿ ಹಿಗ್ಗಾಮುಗ್ಗಾ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದರು. ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಈ ವೇಳೆ ಸಾರ್ವಜನಿಕರು ಹಾಸನ ನಗರದಲ್ಲಿ ವೀಲ್ಹಿಂಗ್ ಪುಂಡರ ಹಾವಳಿ ಮಿತಿಮೀರಿದೆ. ಕೂಡಲೇ ಇದಕ್ಕೆ ಕಡಿವಾಣ ಹಾಕದಿದ್ದರೆ, ಇಂತಹ ಮತ್ತಷ್ಟು ಘಟನೆಗಳು ಸಂಭವಿಸುತ್ತದೆ ಆದಷ್ಟು ಬೇಗ ಇದಕ್ಕೆ ಬ್ರೇಕ್​​ ಹಾಕುವಂತೆ ಪೊಲೀಸರಿಗೆ ಒತ್ತಾಯಿಸಿದ್ದರು. ಇದೀಗ ಅಂತಹುದೇ ಘಟನೆ ಸಂಭವಿಸಿದೆ.​

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ