Car accident: ಆನೇಕಲ್ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ಇಬ್ಬರ ಸಾವು
Anekal: ಕಾರಿನಲ್ಲಿ ಸಿಲುಕಿದ್ದ ಐವರನ್ನು ಹೊರ ತೆಗೆಯಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ. ಬಳಿಕ ಅನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಆನೇಕಲ್: ಮರಕ್ಕೆ ಕಾರು ಡಿಕ್ಕಿ ಹೊಡೆದು (car accident) ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದಾರೆ, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅನೇಕಲ್ (anekal) ತಾಲೂಕಿನ ಸೋಲೂರು ಗೇಟ್ (solur gate) ಬಳಿ ಘಟನೆ ನಡೆದಿದೆ. ಕಾರಿನಲ್ಲಿ ಸಿಲುಕಿದ್ದ ಐವರನ್ನು ಹೊರ ತೆಗೆಯಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ. ಬಳಿಕ ಅನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕಾರು ಸೋಲೂರು ಗೇಟ್ ಬಳಿಯಿಂದ ಬೆಂಗಳೂರು ಕಡೆ ಹೊರಟಿತ್ತು.
ಸೆಲ್ಫಿ ಹುಚ್ಚಿಗೆ ನೀರು ಪಾಲಾದ ಯುವಕ; ವಾರಾಂತ್ಯ ಪ್ರವಾಸ ಮೋಜು ತಂದಿಟ್ಟ ದುರಂತ
ಹುಬ್ಬಳ್ಳಿ: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಯುವಕನೊಬ್ಬ ನೀರು ಪಾಲಾದ ದುರಂತ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ನೀರಸಾಗರದ ಜಲಾಶಯದಲ್ಲಿ ಈ ಘಟನೆ ನಡೆದಿದೆ. ಕಿರಣ (22) ನೀರಲ್ಲಿ ಕೊಚ್ಚಿ ಹೋದ ಯುವಕ.
<strong>ವಾರಾಂತ್ಯ ಪ್ರವಾಸ ಮೋಜು ತಂದಿಟ್ಟ ದುರಂತ:</strong> ಮೃತ ಕಿರಣ ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ನಿವಾಸಿ. ಇಂದು ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದ. ಈ ಸಮಯದಲ್ಲಿ ಸೆಲ್ಫಿಗಾಗಿ ಜಲಾಶಯದ ದಡದಲ್ಲಿ ನಿಂತಿದ್ದ. ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ಕೊಚ್ಚಿ ಹೋಗಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಿರಣನಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿವೈಡರ್ಗೆ ಬೈಕ್ ಡಿಕ್ಕಿ: ಮಣಿಪಾಲ ಕಾಲೇಜಿನಲ್ಲಿ ಓದುತ್ತಿದ್ದ ಆಂಧ್ರ ಮೂಲದ ಇಬ್ಬರು ವಿದ್ಯಾರ್ಥಿಗಳ ಸಾವು
ಉಡುಪಿ: ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಂಬದಕೋಣೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಘಟನೆಯಲ್ಲಿ ಕಲ್ಲೂರು ತರುಣ್ ಕುಮಾರ್ ರೆಡ್ಡಿ(19), ಆದಿತ್ಯರೆಡ್ಡಿ(18) ಸೇರಿ ಮಣಿಪಾಲ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತ ಇಬ್ಬರು ವಿದ್ಯಾರ್ಥಿಗಳು ಆಂಧ್ರ ಪ್ರದೇಶ ಮೂಲದವರು ಎಂದು ತಿಳಿದು ಬಂದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Published On - 8:06 pm, Sun, 17 July 22