AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವೈಡರ್‌ಗೆ ಕಾರು ಡಿಕ್ಕಿ ಚಾಲಕ ದುರ್ಮರಣ, ತೋಟದ ಮನೆಯಲ್ಲಿ ಆಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್, ಮರಕ್ಕೆ ಕಾರು ಡಿಕ್ಕಿ ಇಬ್ಬರ ಸಾವು

ಕಾರು ಚಾಲನೆ ಮಾಡುತ್ತಿದ್ದ ಆಸಿಫ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು, ಕಾರಿನಲ್ಲಿದ್ದ ಅವರ ಸ್ನೇಹಿತ (friend) ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದವರು ಬೆಂಗಳೂರಿನ ಮಂಜುನಾಥ್ ನಗರದ ನಿವಾಸಿಗಳು. 

ಡಿವೈಡರ್‌ಗೆ ಕಾರು ಡಿಕ್ಕಿ ಚಾಲಕ ದುರ್ಮರಣ, ತೋಟದ ಮನೆಯಲ್ಲಿ ಆಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್, ಮರಕ್ಕೆ ಕಾರು ಡಿಕ್ಕಿ ಇಬ್ಬರ ಸಾವು
Nelamangala: ಡಿವೈಡರ್‌ಗೆ ಕಾರು ಡಿಕ್ಕಿ, ಚಾಲಕ ದುರ್ಮರಣ: ಚಾಲಕನ ಪ್ರಿಯತಮೆಗೆ ಗಂಭೀರ ಗಾಯ
TV9 Web
| Updated By: ಸಾಧು ಶ್ರೀನಾಥ್​|

Updated on:Feb 08, 2022 | 8:43 AM

Share

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕು ದೇವಣ್ಣನಪಾಳ್ಯ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ಅಪಘಾತ ಸಂಭವಿಸಿ, ಒಬ್ಬರು ಮೃತಪಟ್ಟಿದ್ದಾರೆ. ವೇಗವಾಗಿ ಚಲಾಯಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ (road divider) ಪಲ್ಟಿ ಹೊಡೆದಿದೆ. ಆ ವೇಳೆ ಚಾಲಕ ದುರ್ಮರಣಕ್ಕೀಡಾಗಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಆಸಿಫ್(27) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು, ಕಾರಿನಲ್ಲಿದ್ದ ಅವರ ಸ್ನೇಹಿತ (friend) ಗಂಭೀರವಾಗಿ ಗಾಯಗೊಂಡಿದ್ದಾರೆ. ನೆಲಮಂಗಲ (nelamangala) ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರಿನ ಮಂಜುನಾಥ್ ನಗರದ ನಿವಾಸಿಗಳು.

ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ, ಇಬ್ಬರು ಸಾವು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬಿರೇನಹಳ್ಳಿ ಬಳಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ, ಇಬ್ಬರು ಸಾವಿಗೀಡಾಗಿದ್ದಾರೆ. ಬೆಂಗಳೂರು ಮೂಲದ ವಿಶಾಲಾಕ್ಷಿ(70) ಮತ್ತು ಸುದಿಕ್ಷಾ(17) ಮೃತಪಟ್ಟವರು. ಭದ್ರಾವತಿಯಿಂದ ಬೆಂಗಳೂರಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಕಾರಲ್ಲಿದ್ದ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತೋಟದ ಮನೆಯಲ್ಲಿ ಆಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್: ರಾಮನಗರ: ಆಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆ ಮೇಲೆ ರಾಮನಗರ ಸಿಇಎನ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ರಾಮನಗರ ತಾಲೂಕಿನ ಜೋಗರದೊಡ್ಡಿ ಗ್ರಾಮದಲ್ಲಿ ನಡೆದ ಈ ದಾಳಿ ವೇಳೆ ತೋಟದ ಮನೆಯಲ್ಲಿ ಆಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್ ಮಾಡುತ್ತಿರುವುದು ಪತ್ತೆಯಾಗಿದೆ. 15 ಕೆಜಿ‌ ಸಾಮರ್ಥ್ಯದ 98 ಇಂಡಿಯನ್ ಸಿಲಿಂಡರ್, 2 ಕೆಜಿ ಸಾಮರ್ಥ್ಯದ 286 ಸಿಲಿಂಡರ್, ನಾಲ್ಕು ತೂಕದ ಸ್ಕೇಲ್, 5 ರಿಫಿಲ್ಲಿಂಗ್ ಮೋಟರ್, ಎರಡು ವಾಹನ, ನಾಲ್ಕು ಮೊಬೈಲ್, 9 ಸಾವಿರ ನಗದು ಜಪ್ತಿ ಮಾಡಲಾಗಿದೆ. ರಿಫಿಲ್ಲಿಂಗ್ ದಂಧೆಯಲ್ಲಿ ಭಾಗಿಯಾಗಿದ್ದ ಶ್ರೀನಿವಾಸ್, ರವಿ, ನಂಜುಂಡ ಮತ್ತು ಕಿರಣ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.

Also Read: ಅಧಿಕಾರಕ್ಕೆ ಬಂದರೆ ದೇವಭೂಮಿಯಲ್ಲಿ ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪಿಸುವುದು ನಿಶ್ಚಿತ ಎಂದ ಕಾಂಗ್ರೆಸ್, ಏನಿದರ ಹಕೀಕತ್ತು?

Also Read: WhatsApp: ವಾಟ್ಸ್​ಆ್ಯಪ್​ನಲ್ಲಿ ದೊಡ್ಡ ಗಾತ್ರದ MB, GB ಫೈಲ್​ಗಳನ್ನು ಕ್ಷಣಾರ್ಧದಲ್ಲಿ ಸೆಂಡ್ ಮಾಡುವ ಟ್ರಿಕ್ ಗೊತ್ತಾ?

Published On - 7:43 am, Tue, 8 February 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!