AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್​ ಮಾಜಿ ಶಾಸಕ ಕೆ ವೆಂಕಟಸ್ವಾಮಿ ತಪ್ಪಿತಸ್ಥ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

Check Bounce: ಚೆಕ್ ಬೌನ್ಸ್ ಪ್ರಕರಣದಲ್ಲಿ ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ. ವೆಂಕಟಸ್ವಾಮಿ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಾರಿದೆ. ಸಾಲಕ್ಕೆ ಪ್ರತಿಯಾಗಿ ನೀಡಿದ್ದ ಚೆಕ್ ಬೌನ್ಸ್ ಆದ ಹಿನ್ನೆಲೆ ನಾಗಭೂಷಣ ಎಂಬುವರು ಖಾಸಗಿ ದೂರು ದಾಖಲಿಸಿದ್ದರು.

ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್​ ಮಾಜಿ ಶಾಸಕ ಕೆ ವೆಂಕಟಸ್ವಾಮಿ ತಪ್ಪಿತಸ್ಥ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ
ಚೆಕ್ ಬೌನ್ಸ್ ಕೇಸ್‌ನಲ್ಲಿ ಕಾಂಗ್ರೆಸ್​ ಮಾಜಿ ಶಾಸಕ ಕೆ ವೆಂಕಟಸ್ವಾಮಿ ತಪ್ಪಿತಸ್ಥ
TV9 Web
| Edited By: ಸಾಧು ಶ್ರೀನಾಥ್​|

Updated on:Jun 24, 2022 | 8:27 PM

Share

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ. ವೆಂಕಟಸ್ವಾಮಿ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ (People Representative Court) ಸಾರಿದೆ. ಜೊತೆಗೆ ಕಾಂಗ್ರೆಸ್​ ಶಾಸಕ ವೆಂಕಟಸ್ವಾಮಿಗೆ (Dervanahalli Congress MLA K Venkataswamy) 10.50 ಲಕ್ಷ ರೂ. ದಂಡ‌ ವಿಧಿಸಿದೆ. ದಂಡ‌ ಪಾವತಿಸದಿದ್ದರೆ 6 ತಿಂಗಳು ಸೆರೆವಾಸದ ಶಿಕ್ಷೆಯನ್ನು ವಿಧಿಸಬಹುದಾಗಿದೆ. ಸಾಲಕ್ಕೆ ಪ್ರತಿಯಾಗಿ ನೀಡಿದ್ದ ಚೆಕ್ ಬೌನ್ಸ್ ಆದ ಹಿನ್ನೆಲೆ ನಾಗಭೂಷಣ ಎಂಬುವರು ಖಾಸಗಿ ದೂರು ದಾಖಲಿಸಿದ್ದರು.

ಜುಲೈ 14 ರಂದು ಕೋರ್ಟ್​ಗೆ ಹಾಜರಾಗುವಂತೆ ಸಚಿವ ಮುನಿರತ್ನಗೆ ಸಮನ್ಸ್ ಜಾರಿ

ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಹಾಲಿ ಸಚಿವ ಮುನಿರತ್ನಗೆ ಸಮನ್ಸ್ ಜಾರಿಗೊಳಿಸಲು ಸೂಚಿಸಲಾಗಿದೆ. ಸಮನ್ಸ್ ಜಾರಿಗೊಳಿಸಲು ವಿಫಲರಾದ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಜನಪ್ರತಿನಿಧಿಗಳ ಕೋರ್ಟ್ ಮೆಮೋ ನೀಡಿದೆ. ಜುಲೈ 14 ರಂದು ಹಾಜರಾಗುವಂತೆ ಸಮನ್ಸ್ ಜಾರಿಗೆ ಕೋರ್ಟ್​ನಿಂದ ಸೂಚನೆ ನೀಡಲಾಗಿದೆ. 2018 ರಲ್ಲಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪೊಲೀಸರು ಮುನಿರತ್ನ ಮತ್ತಿತರರ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದರು.

ಮಾಜಿ ಶಾಸಕ ವೈಎಸ್ ವಿ ದತ್ತಾ ವಿರುದ್ಧ ವಾರೆಂಟ್ ಜಾರಿ

ಜೆಡಿಎಸ್ ಮಾಜಿ ಶಾಸಕ ವೈಎಸ್ ವಿ ದತ್ತಾ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಎಸ್ ಸೋಮೇಗೌಡ ಎಂಬುವರು ವೈ ಎಸ್ ವಿ ದತ್ತಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ಸಂಬಂಧ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ವೈಎಸ್ ವಿ ದತ್ತಾಗೆ ವಾರೆಂಟ್ ಜಾರಿಗೊಳಿಸಲಾಗಿದೆ. 42 ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಜೆ. ಪ್ರೀತ್ ಈ ಆದೇಶ ಹೊರಡಿಸಿದ್ದಾರೆ. ಜೂನ್ 30 ಕ್ಕೆ ವೈಎಸ್ ವಿ ದತ್ತಾ ರನ್ನು ಹಾಜರುಪಡಿಸಲು ಸೂಚನೆ ನೀಡಲಾಗಿದೆ.

Also Read:

ಮೆಟ್ರೋ ಪ್ರಯಾಣಿಕರಿಗೆ ವಿಶೇಷ ಸೂಚನೆ; ಶನಿವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

Also Read:

Gold- Silver Price: ದೇಶದ ಪ್ರಮುಖ ನಗರಗಳಲ್ಲಿ ಜೂನ್ 24ರ ಶುಕ್ರವಾರದ ಚಿನ್ನ- ಬೆಳ್ಳಿ ದರ ಇಲ್ಲಿದೆ

Published On - 8:18 pm, Fri, 24 June 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್