ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ದೇವನಹಳ್ಳಿ ಕ್ಷೇತ್ರದ ಮಾಜಿ ಶಾಸಕ ಕೆ. ವೆಂಕಟಸ್ವಾಮಿ ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ (People Representative Court) ಸಾರಿದೆ. ಜೊತೆಗೆ ಕಾಂಗ್ರೆಸ್ ಶಾಸಕ ವೆಂಕಟಸ್ವಾಮಿಗೆ (Dervanahalli Congress MLA K Venkataswamy) 10.50 ಲಕ್ಷ ರೂ. ದಂಡ ವಿಧಿಸಿದೆ. ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸದ ಶಿಕ್ಷೆಯನ್ನು ವಿಧಿಸಬಹುದಾಗಿದೆ. ಸಾಲಕ್ಕೆ ಪ್ರತಿಯಾಗಿ ನೀಡಿದ್ದ ಚೆಕ್ ಬೌನ್ಸ್ ಆದ ಹಿನ್ನೆಲೆ ನಾಗಭೂಷಣ ಎಂಬುವರು ಖಾಸಗಿ ದೂರು ದಾಖಲಿಸಿದ್ದರು.
ಜುಲೈ 14 ರಂದು ಕೋರ್ಟ್ಗೆ ಹಾಜರಾಗುವಂತೆ ಸಚಿವ ಮುನಿರತ್ನಗೆ ಸಮನ್ಸ್ ಜಾರಿ
ಚುನಾವಣೆ ನೀತಿಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಹಾಲಿ ಸಚಿವ ಮುನಿರತ್ನಗೆ ಸಮನ್ಸ್ ಜಾರಿಗೊಳಿಸಲು ಸೂಚಿಸಲಾಗಿದೆ. ಸಮನ್ಸ್ ಜಾರಿಗೊಳಿಸಲು ವಿಫಲರಾದ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಜನಪ್ರತಿನಿಧಿಗಳ ಕೋರ್ಟ್ ಮೆಮೋ ನೀಡಿದೆ. ಜುಲೈ 14 ರಂದು ಹಾಜರಾಗುವಂತೆ ಸಮನ್ಸ್ ಜಾರಿಗೆ ಕೋರ್ಟ್ನಿಂದ ಸೂಚನೆ ನೀಡಲಾಗಿದೆ. 2018 ರಲ್ಲಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪೊಲೀಸರು ಮುನಿರತ್ನ ಮತ್ತಿತರರ ವಿರುದ್ಧ ಆರೋಪಪಟ್ಟಿ ದಾಖಲಿಸಿದ್ದರು.
ಮಾಜಿ ಶಾಸಕ ವೈಎಸ್ ವಿ ದತ್ತಾ ವಿರುದ್ಧ ವಾರೆಂಟ್ ಜಾರಿ
ಜೆಡಿಎಸ್ ಮಾಜಿ ಶಾಸಕ ವೈಎಸ್ ವಿ ದತ್ತಾ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಎಸ್ ಸೋಮೇಗೌಡ ಎಂಬುವರು ವೈ ಎಸ್ ವಿ ದತ್ತಾ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ಸಂಬಂಧ ಖಾಸಗಿ ದೂರು ಸಲ್ಲಿಸಿದ್ದರು. ಕೋರ್ಟ್ ಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ವೈಎಸ್ ವಿ ದತ್ತಾಗೆ ವಾರೆಂಟ್ ಜಾರಿಗೊಳಿಸಲಾಗಿದೆ. 42 ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಜೆ. ಪ್ರೀತ್ ಈ ಆದೇಶ ಹೊರಡಿಸಿದ್ದಾರೆ. ಜೂನ್ 30 ಕ್ಕೆ ವೈಎಸ್ ವಿ ದತ್ತಾ ರನ್ನು ಹಾಜರುಪಡಿಸಲು ಸೂಚನೆ ನೀಡಲಾಗಿದೆ.
Also Read:
Also Read:
Published On - 8:18 pm, Fri, 24 June 22