AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಆರ್​ ನಗರ ಶಾಸಕ ಮುನಿರತ್ನಗೆ ನೋಟಿಸ್ ಜಾರಿ ಮಾಡಿದ ಚಿಕ್ಕಜಾಲ ಠಾಣೆ ಪೊಲೀಸರು

ಜಮೀನಿನಲ್ಲಿ ಲೈಸೆನ್ಸ್ ಪಡೆಯದೆ ಸ್ಫೋಟಕಗಳನ್ನು ಬಳಸಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿರುವ ಆರೋಪ ಸಂಬಂಧ ಆರ್​ಆರ್​ ನಗರ ಕ್ಷೇತ್ರದ ಬಿಜೆಪಿ ಶಾಸಕ ಎನ್ ಮುನಿರತ್ನ ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಈ ಸಂಬಂಧ ಚಿಕ್ಕಜಾಲ ಠಾಣಾ ಪೊಲೀಸರು, ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಆರ್​ಆರ್​ ನಗರ ಶಾಸಕ ಮುನಿರತ್ನಗೆ ನೋಟಿಸ್ ಜಾರಿ ಮಾಡಿದ ಚಿಕ್ಕಜಾಲ ಠಾಣೆ ಪೊಲೀಸರು
FIR ಸಂಬಂಧ ಶಾಸಕ ಎನ್ ಮುನಿರತ್ನ ಅವರಿಗೆ ನೋಟಿಸ್ ಜಾರಿ ಮಾಡಿದ ಚಿಕ್ಕಜಾಲ ಠಾಣಾ ಪೊಲೀಸರು
ನವೀನ್ ಕುಮಾರ್ ಟಿ
| Edited By: Rakesh Nayak Manchi|

Updated on: Jul 14, 2023 | 7:35 PM

Share

ದೇವನಹಳ್ಳಿ, ಜುಲೈ 14: ಜಮೀನಿನಲ್ಲಿ ಲೈಸೆನ್ಸ್ ಪಡೆಯದೆ ಸ್ಫೋಟಕಗಳನ್ನು ಬಳಸಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿರುವ ಆರೋಪದಡಿ ದಾಖಲಾದ ಎಫ್​ಐಆರ್ ಸಂಬಂಧ ಚಿಕ್ಕಜಾಲ ಠಾಣಾ ಪೊಲೀಸರು ಆರ್​ಆರ್​ ನಗರದ ಬಿಜೆಪಿ ಶಾಸಕ ಎನ್ ಮುನಿರತ್ನ (N Munirathna) ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ಕೊಟ್ಟ ಮೂರು ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಲಾಗಿದೆ.

ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ಶಾಸಕ ಮುನಿರತ್ನ ವಿರುದ್ಧ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಪ್ಐಆರ್ ದಾಖಲಾಗಿತ್ತು. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಇನ್​ಸ್ಪೆಕ್ಟರ್​ ಅವರು ನೋಟಿಸ್ ಜಾರಿ ಮಾಡಿದ್ದು, ಇಂದು ಅಥವಾ ನಾಳೆ ಮುನಿರತ್ನ ಅವರು ವಿಚಾರಣೆಗೆ ಹಾಜರಾಗುವ ಸಾಧ್ಯತೆ‌ ಇದೆ. ಪ್ರಕರಣ ಸಂಬಂಧ ಈಗಾಗಲೇ ಮೂವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಇದನ್ನೂ ಓದಿ: ಜಿಲೆಟಿನ್ ಸ್ಫೋಟಿಸಲು ಲೈಸೆನ್ಸ್ ಇದೆ, ಅದು ಗಣಿಗಾರಿಕೆ ಅಲ್ಲ: ಶಾಸಕ ಮುನಿರತ್ನ ಸ್ಪಷ್ಟನೆ

ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್​ ಸ್ಫೋಟಿಸಿದ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ಅವರು ನೀಡಿದ ದೂರಿನ ಅನ್ವಯ ಚಿಕ್ಕಜಾಲ ಠಾಣಾ ಪೊಲೀಸರು ಶಾಸಕ ಮುನಿರತ್ನ, ಆನಂದನ್, ಗಣೇಶ್, ರಾಧಮ್ಮ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ. ಸ್ಫೋಟಕ ಕಾಯ್ದೆ 1884 US 9B(1b) , ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಕೇಸ್ ದಾಖಲಾಗಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಎಫ್​ಐಆರ್ ಸಂಬಂಧ ಪ್ರತಿಕ್ರಿಯೆ ನೀಡಿದ ಮುನಿರತ್ನ, ಗಣಿಗಾರಿಕೆ ಮಾಡುವ ವೃತ್ತಿ ನನ್ನದಲ್ಲ. ಗಣಿಗಾರಿಕೆ ಮಾಡಿದರೆ ಸರ್ಕಾರದಿಂದ ಲೈಸೆನ್ಸ್ ಪಡೆಯಬೇಕು. ಮನೆ ಕಟ್ಟುವುದಕ್ಕೆ ಹಿಟಾಚಿ ಮೂಲಕ ಪಾಯ ತೆಗೆಯುತ್ತಿದ್ದೇನೆ. ಜಿಲೆಟಿನ್ ಸ್ಫೋಟಿಸಲು ಲೈಸೆನ್ಸ್ ಇದೆ, ಅದು ಗಣಿಗಾರಿಕೆ ಅಲ್ಲ. ಅದು ಖರೀದಿಸಿದ ಭೂಮಿ, ಸ್ವಂತ ಭೂಮಿ ಅಲ್ಲ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More