ಚಿಕ್ಕಮಗಳೂರು: ಖಾಸಗಿ ಬಸ್ ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಮಹಿಳೆ ಸಾವು, 15 ಜನರಿಗೆ ಗಾಯ
ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಬಳಿ ಖಾಸಗಿ ಬಸ್ಸು ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ 15 ಜನರಿಗೆ ಗಾಯವಾಗಿದೆ.
ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದ ಬಳಿ ಖಾಸಗಿ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ರತ್ನಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದು, 15 ಜನರಿಗೆ ಗಾಯಗಳಾಗಿವೆ. ಅವರನ್ನು ಎನ್.ಆರ್.ಪುರ ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪದಲ್ಲಿ ಈ ಘಟನೆ ನಡೆದಿದ್ದು, ತೀವ್ರ ಗಾಯಗಳಾಗಿದ್ದ ರತ್ನಮ್ಮ ಎಂಬ ಮಹಿಳೆಯು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬೈಕ್ ಸವಾರರು ಬಲಿ: ರಸ್ತೆಯಲ್ಲಿಯೇ ಶವಗಳನ್ನಿಟ್ಟು ಪ್ರತಿಭಟನೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬೈಕ್ ಸವಾರರು ಬಲಿಯಾಗಿದ್ದು, ರಸ್ತೆಯಲ್ಲೇ ಶವಗಳನ್ನು ಇಟ್ಟು ಹುಲಿಕುಂಟೆ ಗ್ರಾಮಸ್ಥರು ಕಸ ಸಂಸ್ಕರಣಾ ಘಟಕ ಮುಚ್ಚುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ದಾಬಸ್ಪೇಟೆ ಸೇರಿದಂತೆ ದೊಡ್ಡಬಳ್ಳಾಪುರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ಜಾಮ್ ಆಗಿದ್ದುಬಿಬಿಎಂಪಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶಾಸಕ ಟಿ.ವೆಂಕಟರಮಣಯ್ಯ, ಎಸ್ಪಿ ಬಾಲದಂಡಿ ಪ್ರತಿಭಟನಾಕಾರರ ಮನವೊಲಿಸಲು ಹರಸಾಹಸ ಪಟ್ಟಿದ್ದಾರೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ