ಚಿಕ್ಕಮಗಳೂರು: ಖಾಸಗಿ ಬಸ್​​ ಹಾಗೂ ಟಿಪ್ಪರ್​ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಮಹಿಳೆ ಸಾವು, 15 ಜನರಿಗೆ ಗಾಯ

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 28, 2022 | 11:05 PM

ಎನ್.ಆರ್​.ಪುರ ತಾಲೂಕಿನ ಮುತ್ತಿನಕೊಪ್ಪ ಬಳಿ ಖಾಸಗಿ ಬಸ್ಸು ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ 15 ಜನರಿಗೆ ಗಾಯವಾಗಿದೆ.

ಚಿಕ್ಕಮಗಳೂರು: ಖಾಸಗಿ ಬಸ್​​ ಹಾಗೂ ಟಿಪ್ಪರ್​ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಮಹಿಳೆ ಸಾವು, 15 ಜನರಿಗೆ ಗಾಯ
ಚಿಕ್ಕಮಗಳೂರು
Follow us on

ಚಿಕ್ಕಮಗಳೂರು: ಎನ್.ಆರ್​.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದ ಬಳಿ ಖಾಸಗಿ ಬಸ್​ ಹಾಗೂ ಟಿಪ್ಪರ್​ ನಡುವೆ ಡಿಕ್ಕಿ ಸಂಭವಿಸಿ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ರತ್ನಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದು, 15 ಜನರಿಗೆ ಗಾಯಗಳಾಗಿವೆ. ಅವರನ್ನು ಎನ್.ಆರ್​.ಪುರ ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪದಲ್ಲಿ ಈ ಘಟನೆ ನಡೆದಿದ್ದು, ತೀವ್ರ ಗಾಯಗಳಾಗಿದ್ದ ರತ್ನಮ್ಮ ಎಂಬ ಮಹಿಳೆಯು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಎನ್​.ಆರ್​.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬೈಕ್ ಸವಾರರು ಬಲಿ: ರಸ್ತೆಯಲ್ಲಿಯೇ ಶವಗಳನ್ನಿಟ್ಟು ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಬೈಕ್ ಸವಾರರು ಬಲಿಯಾಗಿದ್ದು, ರಸ್ತೆಯಲ್ಲೇ ಶವಗಳನ್ನು ಇಟ್ಟು ಹುಲಿಕುಂಟೆ ಗ್ರಾಮಸ್ಥರು ಕಸ ಸಂಸ್ಕರಣಾ ಘಟಕ ಮುಚ್ಚುವಂತೆ ಆಗ್ರಹಿಸಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು, ದಾಬಸ್​ಪೇಟೆ ಸೇರಿದಂತೆ ದೊಡ್ಡಬಳ್ಳಾಪುರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್​ಜಾಮ್​ ಆಗಿದ್ದುಬಿಬಿಎಂಪಿ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಸ್ಥಳಕ್ಕೆ ಆಗಮಿಸಿದ ಶಾಸಕ ಟಿ.ವೆಂಕಟರಮಣಯ್ಯ, ಎಸ್​ಪಿ ಬಾಲದಂಡಿ ಪ್ರತಿಭಟನಾಕಾರರ ಮನವೊಲಿಸಲು ಹರಸಾಹಸ ಪಟ್ಟಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ