IKEA Bengaluru: ಬೆಂಗಳೂರಿನಲ್ಲಿ ಮೊದಲ ದೊಡ್ಡ ಫರ್ನಿಚರ್ ಸ್ಟೋರ್ ‘ಐಕಿಯಾ’ ಉದ್ಘಾಟನೆ ಮಾಡಿದ ಸಿಎಂ ಬೊಮ್ಮಾಯಿ

ಸಿಎಂ ಬೊಮ್ಮಾಯಿ ಜೊತೆ ಸಂಸ್ಥೆಯ ಮುಖ್ಯಸ್ಥರು ಮಾತುಕತೆ ನಡೆಸಿದ್ದರು. ಈ ವೇಳೆ ಬೊಮ್ಮಾಯಿ ಸ್ವೀಡನ್​ನ ಇಂಗ್ಕಾ ಗ್ರೂಪ್​ನ ಐಕಿಯಾ ಫರ್ನಿಚರ್ ಸ್ಟೋರ್ ತೆರೆಯುವುದಾಗಿ ತಿಳಿಸಿದ್ದರು.

IKEA Bengaluru: ಬೆಂಗಳೂರಿನಲ್ಲಿ ಮೊದಲ ದೊಡ್ಡ ಫರ್ನಿಚರ್ ಸ್ಟೋರ್ ‘ಐಕಿಯಾ' ಉದ್ಘಾಟನೆ ಮಾಡಿದ ಸಿಎಂ ಬೊಮ್ಮಾಯಿ
ಐಕಿಯಾ ಸ್ಟೋರ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 22, 2022 | 2:39 PM

ನೆಲಮಂಗಲ: ಬೆಂಗಳೂರಿನ ನಾಗಸಂದ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮೊದಲ ದೊಡ್ಡ ಫರ್ನಿಚರ್ ಸ್ಟೋರ್ ‘ಐಕಿಯಾ’ವನ್ನು ಇಂದು (ಜೂನ್ 22) ಬೆಳಿಗ್ಗೆ ಉದ್ಘಾಟನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಐಕಿಯಾ ಸ್ಟೋರ್ (IKEA Store) ತೆರೆಯುವ ಬಗ್ಗೆ ಕಳೆದ ತಿಂಗಳು ದಾವೋಸ್ ಶೃಂಗಸಭೆಯಲ್ಲಿ ಚರ್ಚೆ ನಡೆದಿತ್ತು. ಸಿಎಂ ಬೊಮ್ಮಾಯಿ ಜೊತೆ ಸಂಸ್ಥೆಯ ಮುಖ್ಯಸ್ಥರು ಮಾತುಕತೆ ನಡೆಸಿದ್ದರು. ಈ ವೇಳೆ ಬೊಮ್ಮಾಯಿ ಸ್ವೀಡನ್​ನ ಇಂಗ್ಕಾ ಗ್ರೂಪ್​ನ ಐಕಿಯಾ ಫರ್ನಿಚರ್ ಸ್ಟೋರ್ ತೆರೆಯುವುದಾಗಿ ತಿಳಿಸಿದ್ದರು.

ಭಾರತದಲ್ಲಿ ಐಕಿಯಾ ಸ್ಟೋರ್ ಹೈದರಾಬಾದ್, ಮುಂಬೈನಲ್ಲಿದೆ. ಇನ್ನು ಬೆಂಗಳೂರಿನಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಭಾರತದಲ್ಲಿ ಇದು ನಾಲ್ಕನೇ ಮಳಿಗೆಯಾಗಿದೆ. ಈ ಸ್ಟೋರ್​ಗೆ ಸುಮಾರು 3,000 ಸಾವಿರ ಕೊಟಿ ರೂ. ಹಣ ಹೂಡಿಕೆ ಮಾಡಲಾಗಿದೆ.

ಇದನ್ನೂ ಓದಿ
Image
ಪಿಎಸ್ಐ ಹಗರಣದ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗ; ಪರೀಕ್ಷೆಯ ಒಂದೊಂದು ವಿಧಾನಕ್ಕೆ ಒಂದೊಂದು ರೇಟ್ ಫಿಕ್ಸ್!
Image
NEET PG 2022: ನೀಟ್ ಪರೀಕ್ಷೆ ಮುಂದೂಡಲು ಆರೋಗ್ಯ ಸಚಿವರಿಗೆ ಐಎಂಎ ಮನವಿ
Image
Sarkaru Vaari Paata Review: ಒಂದೊಳ್ಳೆಯ ಕಥೆಗೆ ಬೇಕಿತ್ತು ಇನ್ನಷ್ಟು ಒಳ್ಳೆಯ ಟ್ರೀಟ್​ಮೆಂಟ್
Image
ಬೆಂಗಳೂರಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ! ಕರ್ನಾಟಕದಲ್ಲಿ ಇಂದಿನಿಂದ 4 ದಿನ ಮಳೆ ಮುಂದುವರೆಯುವ ಸಾಧ್ಯತೆ

ದಾವೋಸ್​ನಲ್ಲಿ ನಡೆದಿದ್ದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಇಂಗ್ಕಾ ಗ್ರೂಪ್ (ಐಕಿಯ) ಸಿಇಓ ಜೆಸ್ಪರ್ ಬ್ರಾಡಿನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ರಾಜ್ಯದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿದ್ದರು. ಈ ತಿಂಗಳು ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಾಗುತ್ತದೆ ಎಂದು ತಿಳಿಸಿದ್ದ ಜೆಸ್ಪರ್ ಬ್ರಾಡಿನ್ ಅವರು ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದರು.

Koo App

ಮುಖ್ಯಮಂತ್ರಿ @bsbommai ಅವರು ಇಂದು ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಸ್ವೀಡನ್ ಮೂಲದ ಗೃಹ ಪೀಠೋಪಕರಣಗಳ ಮಾರಾಟ ಕಂಪನಿ ’ಐಕಿಯಾ’ ದ ಅತಿದೊಡ್ಡ ಮಳಿಗೆಯನ್ನು ಉದ್ಘಾಟಿಸಿದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಭಾರತದಲ್ಲಿ ಸ್ವೀಡನ್ ರಾಯಭಾರಿ ಕ್ಲಾಸ್ ಮೊಲಿನ್, ಐಕಿಯಾ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೂಸನ್ ಪುಲ್ವೇಲರ್, ಐಕಿಯಾ ಕರ್ನಾಟಕದ ಮಾರುಕಟ್ಟೆ ವ್ಯವಸ್ಥಾಪಕರಾದ ಆಂಜೆ ಹಿಮ್, ಮೊದಲಾದವರುಉಪಸ್ಥಿತರಿದ್ದರು.

CM of Karnataka (@CMOKarnataka) 22 June 2022

ಐಕಿಯಾ ಸ್ಟೋರ್​ನಲ್ಲಿ ಮನೆಗೆ ಸಂಬಂಧಿಸಿದ ವಸ್ತುಗಳು ಸಿಗುತ್ತವೆ. ಜೊತೆಗೆ ಗ್ರಾಹಕರಿಗೆ ಹೆಚ್ಚು ಇಷ್ಟವಾಗುವ ವಸ್ತುಗಳು ಸ್ಟೋರ್​ನಲ್ಲಿ ಲಭ್ಯ ಎಂದು ಈಗಾಗಲೇ ಐಕಿಯಾ ಕಂಪನಿ ತಿಳಿಸಿದ್ದು, ಹೆಚ್ಚು ವ್ಯಾಪಾರದ ನಿರೀಕ್ಷೆಯಲ್ಲಿದೆ. ಕಂಪನಿಯ ಅಧಿಕಾರಿಗಳ ಪ್ರಕಾರ, ಐಕಿಯಾ ಸ್ಟೋರ್ ಈ ವರ್ಷ ಬೆಂಗಳೂರಿನಲ್ಲಿ ಸುಮಾರು 50 ಲಕ್ಷ ಗ್ರಾಹಕರನ್ನು ಆಕರ್ಷಿಸುವ ಗುರಿ ಹೊಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 11:58 am, Wed, 22 June 22

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ