ಇಪ್ಕೋ ಯೂರಿಯಾ ಕಂಪನಿ ಭೂಮಿ ಪೂಜೆಗೆ ಸಿಎಂ ಬೊಮ್ಮಾಯಿ ಆಗಮನ; ಕಾರ್ಯಕ್ರಮದಲ್ಲಿ ರೈತರಿಗೆ ನಿಷೇಧ, ಕೆಲ ರೈತರನ್ನು ವಶಕ್ಕೆ ಪಡೆದ ಪೊಲೀಸ್
ಸಿಎಂಗೆ ಮನವಿ ಪತ್ರ ಕೊಡಲು ಆಗಮಿಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಕ್ರಮದಲ್ಲಿ ಪ್ರತಿಭಟನೆ ಮಾಡ್ತಾರೆ ಎಂದು ಮುಂಜಾಗ್ರತಾ ಕ್ರಮವಾಗಿ ರೈತರನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ಕರೆದುಕೊಂಡು ಹೋಗಿದ್ದಾರೆ.

ಬೆಂಗಳೂರು: ಇಪ್ಕೋ ಸಂಸ್ಥೆಯು ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಇಪ್ಕೋ ನ್ಯಾನೂ ಯೂರಿಯಾ(Iffco Nano Urea Company) ಸ್ಥಾವರವನ್ನು ಸ್ಥಾಪಿಸಲು ಮುಂದಾಗಿದ್ದು ಇಂದು ಇದರ ಭೂಮಿ ಪೂಜೆ ಆಗಲಿದೆ. ಸದ್ಯ ಇಪ್ಕೋ ಯೂರಿಯಾ ಕಂಪನಿ ಭೂಮಿ ಪೂಜೆಗೆ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ಆಗಮಿಸಿದ್ದಾರೆ. ಆದ್ರೆ ಕಾರ್ಯಕ್ರಮಕ್ಕೆ ಸ್ಥಳೀಯ ರೈತರ ಪ್ರವೇಶ ನಿಷೇಧ ಮಾಡಲಾಗಿದ್ದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ನಾಗನಾಯಕನಹಳ್ಳಿಯಲ್ಲಿ ಇಪ್ಕೋ ಯೂರಿಯಾ ಕಂಪನಿ ಭೂಮಿ ಪೂಜೆ ಮಾಡಲಾಗುತ್ತಿದ್ದು. ಕಾರ್ಯಕ್ರಮದಲ್ಲಿ ರೈತರು ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆ ಕಾರ್ಯಕ್ರಮ ಸ್ಥಳದಿಂದ 1 ಕಿ.ಮೀ. ದೂರದಲ್ಲೇ ಪೊಲೀಸರು ರೈತರನ್ನು ತಡೆದಿದ್ದಾರೆ. ಪೊಲೀಸರ ಕ್ರಮದ ವಿರುದ್ಧ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಕಾರ್ಯಕ್ರಮಕ್ಕೆ ನಮ್ಮನ್ಮು ಬಿಡಿ ಅಂತ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ.

ಇಪ್ಕೋ ಯೂರಿಯಾ ಕಂಪನಿ ಭೂಮಿ ಪೂಜೆ
ರೈತರನ್ನ ವಶಕ್ಕೆ ಪಡೆದ ಪೊಲೀಸರು ಸಿಎಂಗೆ ಮನವಿ ಪತ್ರ ಕೊಡಲು ಆಗಮಿಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಯಕ್ರಮದಲ್ಲಿ ಪ್ರತಿಭಟನೆ ಮಾಡ್ತಾರೆ ಎಂದು ಮುಂಜಾಗ್ರತಾ ಕ್ರಮವಾಗಿ ರೈತರನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಪೊಲೀಸರ ಕ್ರಮಕ್ಕೆ ರೈತ ಸಂಘಟನೆಗಳ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ.
ಕಾರ್ಯಕ್ರಮಕ್ಕೆ ರೈತರನ್ನು ತಡೆಯಲು ಕಾರಣವೇನು? ಕಳೆದ 103 ದಿನಗಳಿಂದ ಕೆಐಎಡಿಬಿ ಭೂಸ್ವಾಧೀನ ಕೈಬಿಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಕಾರ್ಯಕ್ರಮದಲ್ಲೂ ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಹಾಗೂ ರೈತರನ್ನು ಕಾರ್ಯಕ್ರಮಕ್ಕೆ ಬಿಡದಂತೆ ತಡೆಯಲಾಗಿದೆ.
ಇನ್ನು ಇಪ್ಕೋ ನ್ಯಾನೋ ಯೂರಿಯಾ ದ್ರವ ಸ್ಥಾವರಕ್ಕೆ ಅಡಿಗಲ್ಲು ಹಿನ್ನೆಲೆ, ಭೂಮಿ ಪೂಜೆಗೆ ಕೇಂದ್ರ ಸಚಿವರಾದ ಮನ್ಸುಖ್ ಮಾಂಡವೀಯ, ಭಗವಂತ್ ಖೂಬಾ, ಶೋಭಾ ಕರಂದ್ಲಾಜೇ, ಸಂಸದ ಬಿ.ಎನ್.ಬಚ್ಚೇಗೌಡ ಆಗಮಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಸಿಎಂ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸಲಿದ್ದಾರೆ.
Published On - 8:01 pm, Thu, 14 July 22