ನೆಲಮಂಗಲ: ಓಂಶಕ್ತಿ ಮಾಲಾಧಾರಿಗಳಿಗೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ
ಓಂಶಕ್ತಿ ಮಾಲಾಧಾರಿಗಳಿಗೆ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ಸಂಭವಿಸಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ನೆಲಮಂಗಲ, ಜನವರಿ 16: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿಯಾಗಿ ಇಬ್ಬರು ಓಂಶಕ್ತಿ ಮಾಲಾಧಾರಿಗಳು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ಸಂಭವಿಸಿದೆ. ಘಟನೆ ವೇಳೆ ಶಾಸಕ ಕೆಸಿ ವೀರೇಂದ್ರ, ಚಾಲಕ ಸೇರಿ ಮೂವರು ಕಾರಿನಲ್ಲಿದ್ದರು.
ಬೇಗೂರು ಗ್ರಾಮದ ಬಿಂದು, ರಂಗಮ್ಮ ಗಂಭೀರ ಗಾಯಗೊಂಡವರಾಗಿದ್ದು, ಸದ್ಯ ಅವರಿಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಸಕರ ಕಾರು ಚಿತ್ರದುರ್ಗದಿಂದ ಬೆಂಗಳೂರಿಗೆ ಬರುವ ವೇಳೆ ನಡೆದ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ