ನೆಲಮಂಗಲ: ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ದಿನಗಳು ಹತ್ತಿರವಾಗುತ್ತಿವೆ. ಕಾಂಗ್ರೆಸ್, ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದೆ. ಜೆಡಿಎಸ್ ಕೇವಲ ಒಂದು ಪಟ್ಟಿ ಬಿಡುಗಡೆ ಮಾಡಿದೆ. ಘೋಷಿತ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ಮಾಡುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಅಂಬೇಡ್ಕರ್ ಜಯಂತಿ(Ambedkar Jayanti) ಹೆಸರಿನಲ್ಲಿ ದಲಿತ ಮತ ಸೆಳೆಯುವ ಪ್ಲ್ಯಾನ್ ನಡೆದಿದೆ.
ಇಂದು(ಏಪ್ರಿಲ್ 14) ನೆಲಮಂಗಲದಲ್ಲಿ ಕೆಪಿಸಿಸಿ ವತಿಯಿಂದ ಅಂಬೇಡ್ಕರ್ ಜಯಂತಿ ಆಯೋಜನೆ ಮಾಡಲಾಗಿದೆ. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ರಾಜ್ಯಮಟ್ಟದ ಕಾರ್ಯಕ್ರಮ ಪಕ್ಷದ ಕಚೇರಿ ಬಿಟ್ಟು ಕ್ಷೇತ್ರಗಳಿಗೆ ಶಿಫ್ಟ್ ಆಗಿದೆ. ಈ ಮೂಲಕ ಮೀಸಲು ಕ್ಷೇತ್ರದಲ್ಲಿ ಗೆಲುವು ಪಡೆಯಲು ಕಾಂಗ್ರೆಸ್ ಪ್ಲ್ಯಾನ್ ಮಾಡಿಕೊಂಡಿದೆ. ಕಾರ್ಯಕ್ರಮದಲ್ಲಿ ರಾಜ್ಯ ‘ಕೈ’ ಉಸ್ತುವಾರಿ ರಣದೀಪ್ ಸುರ್ಜೇವಾಲ, KPCC ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷನಾಯಕರಾದ ಸಿದ್ದರಾಮಯ್ಯ, ಹರಿಪ್ರಸಾದ್
ಎಂ.ಬಿ.ಪಾಟೀಲ್ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ 10 ಸಾವಿರ ಕಾರ್ಯಕರ್ತರು ಭಾಗಿಯಾಗುವ ಸಾಧ್ಯತೆ ಇದೆ.
ಭಾರತದ ಸಂವಿಧಾನ ಶಿಲ್ಪಿ, ಭಾರತ ಕಂಡ ಶ್ರೇಷ್ಠ ನಾಯಕ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ಏಪ್ರಿಲ್ 14 ರಂದು ಆಚರಿಸಲಾಗುತ್ತದೆ. ಡಾ. ಭೀಮರಾವ್ ಅಂಬೇಡ್ಕರ್ ಅವರು ಮಧ್ಯಪ್ರದೇಶದ ಮೋವ್‌ನಲ್ಲಿ 1891 ರ ಏಪ್ರಿಲ್ 14 ರಂದು ಜನಿಸಿದರು. ಅವರು 1908ರಲ್ಲಿ ಎಲ್ಫಿನ್ ಸ್ಟೋನ್ ಹೈಸ್ಕೂಲ್‌ನಿಂದ ಮೆಟ್ರಿಕ್ಯೂಲೇಶನ್ ಪಾಸ್ ಮಾಡಿ ಉನ್ನತ ಶಿಕ್ಷಣವನ್ನು ನ್ಯೂಯಾರ್ಕ್ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದರು. 1927 ರ ಜೂನ್ 8 ರಂದು ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದರು. ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಜನ್ಮದಿನವಾಗಿ ಇಂದು ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದೆ. ಈ ದಿನದಂದು ಅದ್ದೂರಿ ಕಾರ್ಯಕ್ರಮ ಆಯೋಜಿಸಿ ದಲಿತ ಮತ ಸೆಳೆಯಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:28 am, Fri, 14 April 23