ಬೆಂಗಳೂರು: ನಾಳೆ (ಆಗಸ್ಟ್ 14, ಶನಿವಾರ) ಶ್ರಾವಣ ಮಾಸದ ಮೊದಲ ಶನಿವಾರ ಹಿನ್ನೆಲೆಯಲ್ಲಿ, ಜನದಟ್ಟಣೆ ನಿಯಂತ್ರಿಸುವ ಸಲುವಾಗಿ ಪ್ರಸಿದ್ಧ ಕನಸವಾಡಿಯ ಶನಿಮಹಾತ್ಮ ದೇವಾಲಯ ಬಂದ್ ಮಾಡಲಾಗಿ ಆದೇಶ ಹೊರಡಿಸಲಾಗಿದೆ. ಕೊರನಾ ಪ್ರಕರಣಗಳು ಕರ್ನಾಟಕದಲ್ಲಿ ಏರಿಕೆಯಾಗುತ್ತಿದೆ. ಗಡಿ ಜಿಲ್ಲೆಗಳಲ್ಲಿ ಕೊವಿಡ್-19 ತೀವ್ರಗತಿಯಲ್ಲಿ ಹೆಚ್ಚಾಗುತ್ತಿದೆ. ಬೆಂಗಳೂರಿಗಿಂತ ಮಂಗಳೂರಿನಲ್ಲಿ ಕಳೆದ ಎರಡು ಮೂರು ದಿನಗಳಿಂದ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.
ಕನಸವಾಡಿಯ ಶನಿಮಹಾತ್ಮ ದೇವಾಲಯ ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಇಂದು (ಆಗಸ್ಟ್ 13) ಸಂಜೆ 6ರಿಂದ ಸೋಮವಾರ ಬೆಳಗ್ಗೆವರೆಗೂ ದೇವಾಲಯ ಬಂದ್ ಆಗಿರಲಿದೆ. ಎರಡು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ನಾಳೆ ಹೆಚ್ಚಿನ ಸಂಖ್ಯೆ ಭಕ್ತರು ಬರುವ ಸಾಧ್ಯತೆ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿಯಲ್ಲಿರುವ ದೇಗುಲದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಕೊವಿಡ್ ನಿರ್ವಹಣೆ; ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ
ಕೊವಿಡ್ ನಿರ್ವಹಣೆ ಸಂಬಂಧ ನಾಳೆ (ಆಗಸ್ಟ್ 14) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವದು ಎಂದು ತಿಳಿಸಲಾಗಿದೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್, ಅಧಿಕಾರಿಗಳು, ಟಾಸ್ಕ್ಫೋರ್ಸ್ ಸದಸ್ಯರು, ಪೊಲೀಸ್ ಇಲಾಖೆ ಅಧಿಕಾರಿಗಳು, ಗೃಹಕಚೇರಿ ಕೃಷ್ಣಾದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊವಿಡ್ 3ನೇ ಅಲೆ ತಡೆಗಟ್ಟಲು ಕಠಿಣ ನಿಯಮ ಜಾರಿ ಸಾಧ್ಯತೆ ಅಂದಾಜಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯ ಅಪಾರ್ಟ್ಮೆಂಟ್ ಹಾಗೂ ಕಾಂಪ್ಲೆಕ್ಸ್ಗಳಿಗೆ ಹೊಸ ಮಾರ್ಗಸೂಚಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWA) ಮತ್ತು ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ ಗಳಲ್ಲಿನ ನಿರ್ವಹಣಾ ಸಮಿತಿಗಳಿಗೆ ಕೊವಿಡ್ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಅದರಂತೆ ಕೊವಿಡ್-19 ಅನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಅಡಿಯಲ್ಲಿ ಸಾಂಕ್ರಾಮಿಕ ರೋಗವೆಂದು ಸೂಚಿಸಲಾಗಿದೆ. ಈ ಸಂಬಂಧ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೆಕ್ಷನ್ 4ರ ಅಡಿಯಲ್ಲಿ ರೋಗದ ಹರಡುವಿಕೆಯನ್ನು ನಿಯಂತ್ರಿಸಲು ಜಾರಿಗೊಳಿಸುವ ಕ್ರಮಗಳನ್ನು ಕೈಗೊಳ್ಳಲು ಪಾಲಿಕೆಗೆ ಅಧಿಕಾರ ನೀಡಲಾಗಿದೆ.
ಬೆಂಗಳೂರು ನಗರದಲ್ಲಿ ಕಳೆದ 2 ವಾರಗಳಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಒಟ್ಟಿಗೆ ಕಂಡುಬಂದರೆ ಅದನ್ನು ಕ್ಲಸ್ಟರ್ ಎಂದು ಗುರುತಿಸಲಾಗುತ್ತಿದೆ. ಜೊತೆಗೆ 100 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗುತ್ತದೆ. ಈ ಪೈಕಿ ಸಕ್ರಿಯ ಕೆಂಟೈನ್ಮೆಂಟ್ ವಲಯಗಳ ಸಂಖ್ಯೆ 160 ದಾಟಿದ್ದು, (09.08.2021 ರಂತೆ), ಅದರಲ್ಲಿ ಸುಮಾರು ಶೇಕಡಾ 50 ರಷ್ಟು ಅಂದರೆ 79 ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ಗಳು ಕಂಟೈನ್ಮೆಂಟ್ ವಲಯಗಳಿವೆ.
ಇದನ್ನೂ ಓದಿ: Bengaluru: ಬಿಬಿಎಂಪಿ ವ್ಯಾಪ್ತಿಯ ಅಪಾರ್ಟ್ಮೆಂಟ್, ಕಾಂಪ್ಲೆಕ್ಸ್ಗಳಿಗೆ ಕೊವಿಡ್19 ವಿಶೇಷ ಮಾರ್ಗಸೂಚಿ ಪ್ರಕಟ
Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,669 ಜನರಿಗೆ ಕೊರೊನಾ ದೃಢ; 22 ಮಂದಿ ಸಾವು
(Coronavirus Covid19 Shani Mahatma Temple Kanasavadi Bundh in Weekend)
Published On - 9:52 pm, Fri, 13 August 21