Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಮಂಗಲದಲ್ಲಿ 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ

Bengaluru Crime News: ಬೆಂಗಳೂರಿನ ನೆಲಮಂಗಲದಲ್ಲಿ 70 ವರ್ಷದ ವೃದ್ಧನಿಂದ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದ ವೇಳೆ ಈ ಅತ್ಯಾಚಾರ ನಡೆದಿದೆ. ಕಿರುಚಾಡದಂತೆ ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಈ ಕೃತ್ಯ ಎಸಗಲಾಗಿದೆ.

ನೆಲಮಂಗಲದಲ್ಲಿ 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ
ಸಾಂದರ್ಭಿಕ ಚಿತ್ರ
Follow us
ಬಿ ಮೂರ್ತಿ, ನೆಲಮಂಗಲ
| Updated By: ಸುಷ್ಮಾ ಚಕ್ರೆ

Updated on:Nov 27, 2024 | 7:33 PM

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. 15 ವರ್ಷದ ಬಾಲಕಿ ಮೇಲೆ 70 ವರ್ಷದ ವೃದ್ಧನಿಂದ ಅತ್ಯಾಚಾರ ನಡೆದಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿದೆ. ಬಾಲಕಿ ಕಿರುಚಾಡದಂತೆ ಬಾಯಿಗೆ ಬಟ್ಟೆ ತುರುಕಿ ವೃದ್ಧ ಅತ್ಯಾಚಾರ ನಡೆಸಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಅತ್ಯಾಚಾರವೆಸಗಿದ ವೃದ್ಧನಿಗೆ ಥಳಿಸಿದ ಸ್ಥಳೀಯರು ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದಿದ್ದಾಗ ವೃದ್ಧ ಈ ಅತ್ಯಾಚಾರ ನಡೆಸಿದ್ದಾನೆ. ಎದುರು ಮನೆಯ ಮಹಿಳೆಯಿಂದ ಘಟನೆ ಬೆಳಕಿಗೆ ಬಂದಿದೆ. ಬಾಲಕಿ ಕಿರುಚದಂತೆ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ನಡೆಸಲಾಗಿತ್ತು. ವಿಕೃತಿ ಮೆರೆದ ವೃದ್ದನಿಗೆ ಗ್ರಾಮಸ್ಥರು ಹಲ್ಲೆ ನಡೆಸಿದ್ದರು. ಹಲ್ಲೆ ಬಳಿಕ ಪೊಲೀಸರಿಗೆ ಫೋನ್ ಮಾಡಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯ ಮೇಲೆ ಅತ್ಯಾಚಾರ

ಪತ್ನಿ ತವರಿಗೆ ಹೋಗಿದ್ದಕ್ಕೆ ಆತ್ಮಹತ್ಯೆ:

ನೆಲಮಂಗಲ: ಪತ್ನಿ ತವರು ಸೇರಿದ್ದಕ್ಕೆ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ. ಧರ್ಮನಾಯಕ ತಾಂಡಾದಲ್ಲಿ ನಾಗೇಶ್ (26) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕೆ ತವರು ಸೇರಿದ್ದ ನಾಗೇಶ್ ಪತ್ನಿ ಜ್ಯೋತಿಗೆ ರಾತ್ರಿ ಕರೆಮಾಡಿದರೂ ಮನೆಗೆ ಬಂದಿರಲಿಲ್ಲ. ಇದೇ ಕಾರಣಕ್ಕೆ ಆ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯ ರೂಂನಲ್ಲಿ ನಾಗೇಶ್ ನೇಣಿಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಸೋಮೇಶ್ವರ: ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯ ರಕ್ಷಣೆ, ರೋಚಕ ಕಾರ್ಯಾಚರಣೆ ಹೇಗಿತ್ತು ನೋಡಿ

4 ವರ್ಷದ ಹಿಂದೆ ಜ್ಯೋತಿಯನ್ನು ಮದುವೆಯಾಗಿದ್ದ ನಾಗೇಶ್ ಸಣ್ಣಪುಟ್ಟ ಗಲಾಟೆ ಮಾಡಿಕೊಂಡಿದ್ದರು. ಇದೇ ಹಿನ್ನೆಲೆಯಲ್ಲಿ 3 ವರ್ಷದ ಮಗು ಜೊತೆ ಜ್ಯೋತಿ ತವರು ಸೇರಿದ್ದರು. ರಾತ್ರಿ ಕರೆ ಮಾಡಿದರೂ ಜ್ಯೋತಿ ಮನೆಗೆ ಬಂದಿರಲಿಲ್ಲ. ಡೇತ್​ಡೇ ಎಂದು ಸ್ಟೇಟಸ್ ಹಾಕಿ ನಾಗೇಶ್​​​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:50 pm, Wed, 27 November 24