ದೇವನಹಳ್ಳಿ: ಪ್ರೀತ್ಸೆ ಪ್ರೀತ್ಸೆ ಅಂತಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ
ಪದೇ ಪದೇ ಪ್ರೀತಿ ಮಾಡುವಂತೆ ಕಿರುಕುಳ ನೀಡುತ್ತಿದ್ದು ಕಿರುಕುಳಕ್ಕೆ ಮನನೊಂದ ಮಲ್ಲತಹಳ್ಳಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮಲ್ಲತಹಳ್ಳಿ ಗ್ರಾಮದಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಮೈಸೂರಿನಲ್ಲಿ ಯುವಕ ಮತ್ತು ಯುವತಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ.
ಪದೇ ಪದೇ ಪ್ರೀತಿ ಮಾಡುವಂತೆ ಕಿರುಕುಳ ನೀಡುತ್ತಿದ್ದು ಕಿರುಕುಳಕ್ಕೆ ಮನನೊಂದ ಮಲ್ಲತಹಳ್ಳಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಗ್ರಾಮದ 22 ವರ್ಷದ ಯುವತಿ ಪಲ್ಲವಿ ಮೃತ ದುರ್ದೈವಿ. ಕಳೆದ ಹಲವು ವರ್ಷಗಳಿಂದ ಕುಮಾರಸ್ವಾಮಿ ಎಂಬುವವನು ಪಲ್ಲವಿಗೆ ಕಿರುಕುಳ ನೀಡುತ್ತಿದ್ದನಂತೆ. ಕಿರುಕುಳದಿಂದಲೇ ನಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಆರೋಪಿ ಕುಮಾರಸ್ವಾಮಿಯನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಗದಗ ಜನರಿಗೆ ಗುಡ್ನ್ಯೂಸ್: ಸೋಮವಾರದಿಂದ ಬೆಂಗಳೂರು-ಗದಗ ನಗರಕ್ಕೆ ಸಂಚರಿಸಲಿದೆ ವೋಲ್ವೋ ಬಸ್
ನದಿಗೆ ಹಾರಿ ವಿವಾಹಿತ ಪ್ರೇಮಿಗಳ ಆತ್ಮಹತ್ಯೆ
ಇನ್ನು ಮತ್ತೊಂದೆಡೆ ಮೈಸೂರಿನ ಟಿ.ನರಸೀಪುರದ ಕಾವೇರಿ ಸೇತುವೆ ಬಳಿ ನದಿಗೆ ಹಾರಿ ವಿವಾಹಿತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಿಯಕರ ಮಣಿ(30), ವಸಂತಾ ಮೃತ ದುರ್ದೈವಿಗಳು. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಜೀವನದಲ್ಲಿ ಜಿಗುಪ್ಸೆ, ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು ಉತ್ತರ ತಾಲೂಕು ಗೆಜ್ಜಗದಹಳ್ಳಿಯಲ್ಲಿ ನಾಗರಾಜ (56) ಎಂಬ ವ್ಯಕ್ತಿ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆ ಮುಂಭಾಗ ಶೀಟ್ ಆ್ಯಂಗಲ್‌ಗೆ ನೇಣು ಬಿಗಿದುಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಶಿಕ್ಷಕ ಸಾವು
ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದ ಶಿಕ್ಷಕ ಸಂಗನಗೌಡ(56) ಉಸಿರಾಟ ಸಮಸ್ಯೆಯಿಂದ ಮೃತಪಟ್ಟ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಮತ್ತಿಕೇರಿ ಗ್ರಾಮದ ಸಂಗನಗೌಡ ಅವರು ಹಾವೇರಿಯ ಗೆಳೆಯರ ಬಳಗದ ಶಾಲೆಯಲ್ಲಿ ವಾಸ್ತವ್ಯ ಹೂಡಿದ್ದರು. ರಾತ್ರಿ ಉಸಿರಾಟ ಸಮಸ್ಯೆಯಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 12:41 pm, Sat, 7 January 23