ನೆಲಮಂಗಲದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ

ನೆಲಮಂಗಲ(Nelamangala)ದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ(Cylinder explosion)ವಾಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ.  ವಿಜಯಮ್ಮ ಅವರಿಗೆ ಸೇರಿದ ಮನೆ ಇದಾಗಿದ್ದು, ಎರಡನೇ ಮಹಡಿಯನ್ನು ಚಿಕ್ಕಬಾಣಾವರದಲ್ಲಿ ಲೈನ್​ಮನ್​ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ಎಂಬಾತನಿಗೆ ಕಳೆದ ಎಂಟು ವರ್ಷದಿಂದ ಬಾಡಿಗೆ ಕೊಡಲಾಗಿತ್ತು.

ನೆಲಮಂಗಲದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರಿಗೆ ಗಂಭೀರ ಗಾಯ
ಸಿಲಿಂಡರ್​ ಸ್ಪೋಟ
Edited By: ಕಿರಣ್ ಹನುಮಂತ್​ ಮಾದಾರ್

Updated on: Dec 21, 2023 | 5:00 PM

ಬೆಂಗಳೂರು ಗ್ರಾಮಾಂತರ, ಡಿ.21: ಜಿಲ್ಲೆಯ ನೆಲಮಂಗಲ(Nelamangala)ದ ವಾಜರಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟ(Cylinder explosion)ವಾಗಿ ಇಬ್ಬರಿಗೆ ಗಂಭೀರ ಗಾಯವಾಗಿದೆ.  ವಿಜಯಮ್ಮ ಅವರಿಗೆ ಸೇರಿದ ಮನೆ ಇದಾಗಿದ್ದು, ಎರಡನೇ ಮಹಡಿಯನ್ನು ಚಿಕ್ಕಬಾಣಾವರದಲ್ಲಿ ಲೈನ್​ಮನ್​ ಆಗಿ ಕೆಲಸ ಮಾಡುತ್ತಿದ್ದ ಸಂಜಯ್ ಎಂಬಾತನಿಗೆ ಕಳೆದ ಎಂಟು ವರ್ಷದಿಂದ ಬಾಡಿಗೆ ಕೊಡಲಾಗಿತ್ತು. ಇಂದು ಏಕಾಎಕಿ ಈ ಅನಾಹುತ ನಡೆದಿದ್ದು, ಸಂಜಯ್(40) ಹಾಗೂ ಲೇಖನಾ (05) ಅವರನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಅಗ್ನಿನಂದಿಸಿದ್ದಾರೆ. ಈ ಕುರಿತು ನೆಲಮಂಗಲ ಟೌನ್​ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಪಾರ್ಟ್ಮೆಂಟ್​ನ ಎಲೆಕ್ಟ್ರಿಕ್ ರೂಮ್​ನಲ್ಲಿ ಹೊತ್ತಿಕೊಂಡ ಬೆಂಕಿ

ಆನೇಕಲ್: ಪಟ್ಟಣದ ಶುಭಾ ಅಪಾರ್ಟ್ಮೆಂಟ್​ನ ಮೋಟಾರ್ ಹಾಗೂ ಎಲೆಕ್ಟ್ರಿಕ್ ಜಂಕ್ಷನ್ ಬಾಕ್ಷ್​ಗಳನ್ನ ಅಳವಡಿಸಿದ್ದ ರೂಮ್​ನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದ್ದು, ಬೆಲೆ ಬಾಳುವ ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಭಸ್ಮವಾಗಿದೆ. ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಶಾರ್ಟ್ ಸರ್ಕ್ಯೂಟ್​ನಿಂದ ಈ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿವಾಸಿಗಳು ಹೊರಗೆ ಓಡಿ ಬಂದಿದ್ದು, ಅಪಾರ್ಟ್ಮೆಂಟ್​ನಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ.

ಇದನ್ನೂ ಓದಿ:ಸರ್ಕಾರಿ ಶಾಲೆಯಲ್ಲಿ ಗ್ಯಾಸ್​ ಸಿಲಿಂಡರ್ ಸ್ಫೋಟ; ಶಿಕ್ಷಕರು ಸೇರಿ ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಕಾರಿಗೆ ಬೈಕ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಕಾರಿಗೆ ಬೈಕ್​ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದ ಘಟನೆ ಬೆಂಗಳೂರಿನ ಅಶೋಕ‌ ಪಿಲ್ಲರ್ ಬಳಿ ನಡೆದಿದೆ. ಶೇಕ್ ನಾಸಿರ್(32) ಮೃತ ರ್ದುದೈವಿ. ಹಿಂಬದಿ ಸವಾರ ಮುದಾಸಿರ್​ಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಕ್‌ ಸ್ಪೀಡ್ ತೋರಿಸಲು ಹೋಗಿದ್ದ ನಾಸಿರ್ ಹಾಗೂ  ಸೈಯದ್ ಮುದಾಸಿರ್, ಈ ವೇಳೆ ಯುಟರ್ನ್​ ತೆಗೆದುಕೊಳ್ಳುತ್ತಿದ್ದ ಕಾರಿಗೆ ಬೈಕ್​ ಡಿಕ್ಕಿ ಆಗಿದೆ. ತಕ್ಷಣ ನಾಸಿರ್, ಸೈಯದ್​ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶೇಕ್ ನಾಸಿರ್ ಮೃತಪಟ್ಟಿದ್ದಾರೆ. ಈ ಕುರಿತು ವಿಲ್ಸನ್ ಗಾರ್ಡನ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us